Crime: ಹಣೆಗೆ ಬಿಂದಿ ಇಟ್ಟು ಬಂದದ್ದಕ್ಕೆ ಶಿಕ್ಷಕಿಯಿಂದ ಕಪಾಳಮೋಕ್ಷ-ಪ್ರಾಣ ಕಳೆದುಕೊಂಡ ಬಾಲಕಿ
Team Udayavani, Jul 12, 2023, 9:08 AM IST
ರಾಂಚಿ: ಶಿಕ್ಷಕಿಯೊಬ್ಬರು ಹಣೆಗೆ ಬಿಂದಿ ಇಟ್ಟು ಶಾಲೆಗೆ ಬಂದ ವಿದ್ಯಾರ್ಥಿನಿಯ ಕಪಾಳಕ್ಕೆ ಹೊಡೆದ ಪರಿಣಾಮ ಮನನೊಂದು ವಿದ್ಯಾರ್ಥಿನಿ ಪ್ರಾಣ ಕಳೆದುಕೊಂಡಿರುವ ಘಟನೆ ಜಾರ್ಖಂಡ್ ನ ಧನಬಾದ್ ನಲ್ಲಿ ನಡೆದಿರುವುದು ವರದಿಯಾಗಿದೆ.
ಉಷಾ ಕುಮಾರಿ (16) ಮೃತ ಬಾಲಕಿ.
ಉಷಾ ಕುಮಾರಿ ಶಾಲೆಗೆ ತೆರಳುವ ವೇಳೆ ಹಣೆಗೆ ಬಿಂದಿ ಇಟ್ಟು ತೆರಳಿದ್ದಾರೆ. ಇದನ್ನು ಪ್ರಾರ್ಥನೆಯ ವೇಳೆ ಶಿಕ್ಷಕಿಯೊಬ್ಬರು ಗಮನಿಸಿದ್ದಾರೆ. ಇದೇ ಕಾರಣಕ್ಕೆ ಶಿಕ್ಷಕಿ ವಿದ್ಯಾರ್ಥಿನಿಗೆ ಅವಮಾನ ಮಾಡಿ ಕಪಾಳಮೋಕ್ಷ ಮಾಡಿದ್ದಾರೆ.
ಇದರಿಂದ ಮನನೊಂದು ಮನೆಗೆ ಬಂದ ಬಾಲಕಿ ಸೀಲಿಂಗ್ ಫ್ಯಾನ್ ಗೆ ನೇಣುಬಿಗಿದು ಪ್ರಾಣ ಕಳೆದುಕೊಂಡಿದ್ದಾಳೆ. ಈ ಹೆಜ್ಜೆಯನ್ನು ಇಡುವ ಮುನ್ನ ಆಕೆ ಪತ್ರವೊಂದನ್ನು ಬರೆದಿದ್ದು, ಅದರಲ್ಲಿ ಶಿಕ್ಷಕಿ ಹಾಗೂ ಪ್ರಾಂಶುಪಾಲರೇ ನನ್ನ ಸಾವಿಗೆ ಕಾರಣವೆಂದು ಬರೆದಿದ್ದಾರೆ.
ಈ ಸಂಬಂಧ ಮೃತಳ ಕುಟುಂಬಸ್ಥರು ಹಾಗೂ ಸ್ಥಳೀಯರು ಠಾಣೆ ಮುಂದೆ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ತೇತುಲ್ಮರಿ ಪೋಲೀಸರು ಸೇಂಟ್ ಕ್ಸೇವಿಯರ್ಸ್ ಶಾಲೆಯ ಶಿಕ್ಷಕಿ ಹಾಗೂ ಪ್ರಾಂಶುಪಾಲರನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.