ತುಂಬದ ಜಲಾಶಯ: ಭತ್ತ ಬಿತ್ತನೆಗೆ ರೈತರ ಹಿಂದೇಟು


Team Udayavani, Jul 12, 2023, 1:58 PM IST

tdy-14

ಮೈಸೂರು: ಹಳೇ ಮೈಸೂರು ಭಾಗದಲ್ಲಿ ಮುಂಗಾರು ಚುರುಕಾಗದ ಹಿನ್ನೆಲೆ ಜುಲೈ ಎರಡನೇ ವಾರ ಆರಂಭವಾದರೂ ಭತ್ತ ಬಿತ್ತನೆ ಮಾಡಲು ರೈತರು ಹಿಂದೇಟು ಹಾಕುವಂತಹ ಸ್ಥಿತಿ ನಿರ್ಮಾಣವಾಗಿದೆ. ಜೂನ್‌ ಮತ್ತು ಜುಲೈನಲ್ಲಿ ಮಳೆ ಕೊರತೆ ಹಿನ್ನೆಲೆ ಕಬಿನಿ ಮತ್ತು ಕೆಆರ್‌ಎಸ್‌ ಡ್ಯಾಂಗಳು ನೀರಿನ ಕೊರತೆ ಎದುರಿಸುತ್ತಿದ್ದರೆ, ಇತ್ತ ರೈತರು ಜಲಾಶಯದ ನೀರಿನ ಮಟ್ಟ ಗಮನದಲ್ಲಿರಿಸಿಕೊಂಡು ಭತ್ತ ಬಿತ್ತನೆ ಮಾಡಲು ಎದುರು ನೋಡುತ್ತಿದ್ದಾರೆ.

ಸದ್ಯಕ್ಕೆ ಎರಡೂ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆ ಇರುವುದರಿಂದ ಭತ್ತ ಬಿತ್ತನೆ ಇನ್ನೂ ತಡವಾಗುವ ಸಾಧ್ಯತೆಗಳಿದೆ. 2022ರ ಹಿಂಗಾರು ಮತ್ತು ಈ ವರ್ಷದ ಮುಂಗಾರು ಪೂರ್ವ ಹಾಗೂ ಮುಂಗಾರು ದುರ್ಬಲವಾದ ಪರಿಣಾಮ ಕೆ.ಆರ್‌.ಎಸ್‌., ಕಬಿನಿ ಹಾಗೂ ಹಾರಂಗಿ ಜಲಾಶಯಗಳು ಬತ್ತಿವೆ. ಈ ಮೂರು ಜಲಾಶ ಯಗಳೂ ಜಿಲ್ಲೆಯ ಕೃಷಿ ಭೂಮಿಗೆ ನೀರುಣಿಸುವ ಮೂಲಕ ಭತ್ತ ಮತ್ತು ಕಬ್ಬು ಬೆಳೆಗೆ ಆಧಾರವಾಗಿವೆ. ಆದರೆ, ಮಳೆಯ ಅಭಾವದಿಂದ ಈ ಬಾರಿ ನಾಲೆಗಳಿಗೆ ನೀರು ಹರಿಸುವ ಸಾಧ್ಯತೆಗಳು ಕಡಿಮೆಯಾಗಿದೆ. ಪರಿಣಾಮ ಭತ್ತ ಬಿತ್ತನೆ ಕಾರ್ಯ ಶೇ.10ರಷ್ಟು ಮಾತ್ರ ನಡೆದಿದೆ.

ಭರವಸೆ ಕಳೆದುಕೊಂಡ ರೈತ: ಈಗಾಗಲೇ ಮಾರುಕಟ್ಟೆಯಲ್ಲಿ ಬಿತ್ತನೆ ಬೀಜ ಲಭ್ಯವಿದೆ. ಆದರೆ ಬಿತ್ತನೆ ಬೀಜ ಕೊಳ್ಳಲು ರೈತರು ನಿರಾಸಕ್ತಿ ತೋರುತ್ತಿದ್ದಾರೆ. ವಾಡಿಕೆ ಯಂತೆ ಮೇ-ಜೂನ್‌ ವೇಳೆಗೆ ಬಿತ್ತನೆ ಮಾಡಿ, ಜುಲೈ ನಲ್ಲಿ ಭತ್ತ ನಾಟಿ ಮಾಡುವ ಕಾರ್ಯ ಪೂರ್ಣವಾಗು ತ್ತಿತ್ತು. ಆದರೆ ಉತ್ತಮ ಮಳೆಯಾಗದ ಹಿನ್ನೆಲೆ ಜಲಾಶಯಗಳು ಬರಿದಾದ ಹಿನ್ನೆಲೆ ಈ ಬಾರಿ ಭತ್ತ ಬೆಳೆಯುವ ಭರವಸೆಯನ್ನು ಜಿಲ್ಲೆಯ ರೈತರು ಕಳೆದುಕೊಂದಿದ್ದಾರೆ. ಮೈಸೂರು ಜಿಲ್ಲೆಯಲ್ಲಿ 1,03200 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆಯಲಿದ್ದು, 8 ಲಕ್ಷ ಮೆಟ್ರಿಕ್‌ ಟನ್‌ ಭತ್ತ ಉತ್ಪಾದನೆಯಾಗಲಿದೆ. ಆದರೆ ಜಿಲ್ಲೆಯಲ್ಲಿ ಕಳೆದ ಆರು ತಿಂಗಳಲ್ಲಿ 299.9 ಮಿ.ಮೀ ನಷ್ಟು ವಾಡಿಕೆ ಮಳೆ ಯಾಗಬೇಕಿದ್ದು, ಇದರಲ್ಲಿ 271.8ರಷ್ಟು ಮಳೆಯಾಗುವ ಮೂಲಕ 38 ಮಿ.ಮೀಟರ್‌ನಷ್ಟು ಮಳೆ ಕೊರತೆ ಯಾಗಿದೆ. ಪರಿಣಾಮ ಈಗಾಗಲೇ ಬಿತ್ತನೆ ಮಾಡಿರುವ ಇತರೆ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ.

ಇಳುವರಿ ಕುಂಠಿತ ಭೀತಿ: ಸಾಮಾನ್ಯವಾಗಿ ಭತ್ತ ಬೆಳೆ ಯುವ ರೈತರು ಮೇ, ಜೂನ್‌ ತಿಂಗಳಲ್ಲಿ ಬಿತ್ತನೆ ಮಾಡಿ ಜುಲೈ ವೇಳೆಗೆ ನಾಟಿ ಕಾರ್ಯ ಮುಗಿಸುತ್ತಿದ್ದರು. ಈ ಬಾರಿ ಇನ್ನೂ ಬಿತ್ತನೇ ಕಾರ್ಯ ಆಗದೇ ಇರುವುದರಿಂದ ಭತ್ತದ ನಾಟಿ ತಡವಾಗಲಿದೆ. ಒಂದು ವೇಳೆ ಆಗಸ್ಟ್‌ನಲ್ಲಿ ನಾಟಿ ಮಾಡಿದರೆ ಅಕ್ಟೋಬರ್‌ ಮತ್ತು ನವೆಂಬರ್‌ ತಿಂಗಳಲ್ಲಿ ಭತ್ತ ಹೂ ಕೊರೆಗೆ ಸಿಲುಕಿ ಇಳುವರಿ ಕಡಿಮೆಯಾಗುವ ಸಾಧ್ಯತೆಗಳಿವೆ. ಪರ್ಯಾಯ ಬೆಳೆಯತ್ತ ರೈತರ ಚಿತ್ತ: ಈಗಾಗಲೇ ಭತ್ತ ಬಿತ್ತನೆಗೆ ಸಮಯ ಮೀರಿರುವುದು ಹಾಗೂ ಜಲಾಶ ಯಗಳಲ್ಲಿ ನೀರಿನ ಅಭಾವ ಇರುವುದರಿಂದ ಭತ್ತ ಬೆಳೆ ಯುವ ಭತ್ತದ ಬದಲಿಗೆ ಜೋಳ, ರಾಗಿ, ಹಲಸಂದೆ, ಉದ್ದು, ಎಳ್ಳು ಬೆಳೆಗೆ ಮುಂದಾಗಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಹಲಸಂದೆ ಬಿತ್ತನೆ ಕಾರ್ಯ ಗರಿಗೆ ದರಿದೆ.

ಕ್ಷೀಣಿಸಿದ ಕಬಿನಿ ಒಳ ಹರಿವು: ನಾಲ್ಕೈದು ದಿನಗಳ ಹಿಂದೆ ಕಬಿನಿ ಜಲಾಶಯದಲ್ಲಿ 17 ಸಾವಿರ ಕ್ಯೂಸೆಕ್‌ಗೆ ಏರಿಕೆಯಾಗಿದ್ದ ಒಳ ಹರಿವಿನ ಪ್ರಮಾಣ ಸಂಪೂರ್ಣವಾಗಿ ಕುಸಿದಿದ್ದು, ಮಂಗಳವಾರ 4485 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಹಾಗೆಯೇ ಕೆಆರ್‌ಎಸ್‌ನಲ್ಲಿ ವಾರದ ಹಿಂದೆ 15 ಸಾವಿರ ಕ್ಯೂಸೆಕ್‌ ಇದ್ದ ಒಳ ಹರಿವಿನ ಪ್ರಮಾಣ 7624ಕ್ಕೆ ಕುಸಿದಿದ್ದು, ನೀರಿನ ಸಂಗ್ರಹ 87.40 ಅಡಿಗೆ ಏರಿಕೆಯಾಗಿದೆ. ಈ ಮೂಲಕ ಡ್ಯಾಂ ಭರ್ತಿಯಾಗುವ ನಿರೀಕ್ಷೆ ಹುಸಿಯಾಗಿದೆ.

ಜಿಲ್ಲೆಯಲ್ಲಿ ಭತ್ತದ ಬಿತ್ತನೆ ಬೀಜ ಪೂರೈಕೆಯಾಗಿದ್ದು, ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗಿದೆ. ಆದರೆ ಮಳೆ ಕೊರತೆ ಹಿನ್ನೆಲೆ ಭತ್ತ ಬಿತ್ತನೆ ಆಗಿಲ್ಲ. ಜಲಾಶಯಗಳು ತುಂಬಲು ಇನ್ನೂ ಸಮಯವಿದ್ದು, ಜುಲೈ, ಆಗಸ್ಟ್‌ನಲ್ಲಿಯೂ ಬಿತ್ತನೆ ಮಾಡಲು ಅವಕಾಶವಿದೆ. ಒಂದು ವೇಳೆ ಮಳೆ ಬಾರದಿದ್ದರೆ ದ್ವಿದಳ ಧಾನ್ಯ, ಜೋಳ ಮತ್ತು ರಾಗಿಯನ್ನು ಬಿತ್ತನೆ ಮಾಡಬಹುದಾಗಿದೆ. ● ಚಂದ್ರಶೇಖರ್‌, ಜಂಟಿ ನಿರ್ದೇಶಕ ಕೃಷಿ ಇಲಾಖೆ

ಕಳೆದೊಂದು ತಿಂಗಳಿಂದ ಮೋಡ ಕವಿದ ವಾತಾವರಣವಿದೆಯೇ ಹೊರತು ಮಳೆ ಬೀಳುತ್ತಿಲ್ಲ. ಪರಿಣಾಮ ಹಳೇ ಮೈಸೂರು ಭಾಗದಲ್ಲಿ ನಿಗಧಿತ ಸಮಯದಲ್ಲಿ ಭತ್ತ ನಾಟಿ ಕಾರ್ಯವಾಗಿಲ್ಲ. ಈಗಾಗಲೇ ತಡವಾಗಿರುವುದರಿಂದ ಇಳುವರಿಯೂ ಕಡಿಮೆಯಾಗಲಿದೆ. ಸಮಸ್ಯೆ ಹೀಗೆ ಮುಂದುವರೆದರೆ ಜಿಲ್ಲೆಯಲ್ಲಿ ಶೇ.50ರಷ್ಟು ಭತ್ತ ಉತ್ಪಾದನೆ ಕಡಿಮೆಯಾಗಲಿದೆ. ● ಅತ್ತಹಳ್ಳಿ ದೇವರಾಜು, ರೈತ ಮುಖಂಡ

 – ಸತೀಶ್‌ ದೇಪುರ

ಟಾಪ್ ನ್ಯೂಸ್

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.