ಹೊರಬಂತು “13” ಹಾಡು : ರಾಘಣ್ಣ, ಶ್ರುತಿ ಅಭಿನಯದ ಚಿತ್ರ ತೆರೆಗೆ ಸಿದ್ದ
Team Udayavani, Jul 12, 2023, 2:06 PM IST
ಹಿರಿಯ ನಟ ರಾಘವೇಂದ್ರ ರಾಜಕುಮಾರ್ ಮತ್ತು ಶ್ರುತಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿರುವ “13′ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈಗಾಗಲೇ ಸದ್ದಿಲ್ಲದೆ “13′ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣ ಗೊಳಿಸಿರುವ ಚಿತ್ರತಂಡ, ಇದೀಗ “ಸಿಂಗಲ್ ಸೇವಂತಿ…’ ಎಂಬ ಹಾಡೊಂದನ್ನು ಬಿಡುಗಡೆಗೊಳಿಸುವ ಮೂಲಕ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ.
ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ. ಮ. ಹರೀಶ್, ಉಪಾಧ್ಯಕ್ಷ ಶಿಲ್ಪ ಶ್ರೀನಿವಾಸ್, ಶ್ರೀಮತಿ ಮಂಗಳ ರಾಘವೇಂದ್ರ ರಾಜಕುಮಾರ್, ನಟ ವಿನಯ್ ರಾಜಕುಮಾರ್ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಹಾಜರಿದ್ದು “13′ ಸಿನಿಮಾದ ಹಾಡು ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
ಇದೇ ವೇಳೆ ಸಿನಿಮಾದ ಬಗ್ಗೆ ಮಾತನಾಡಿದ ನಿರ್ದೇಶಕ ಕೆ. ನರೇಂದ್ರ ಬಾಬು, “ಸಸ್ಪೆನ್ಸ್-ಥ್ರಿಲ್ಲರ್ ಶೈಲಿಯ ಸಿನಿಮಾ. ಇಲ್ಲಿಯವರೆಗೂ ಕಾಣಿಸಿಕೊಂಡಿರದ ವಿಭಿನ್ನ ಪಾತ್ರದಲ್ಲಿ ರಾಘಣ್ಣ ಕಾಣಿಸಿಕೊಂಡಿದ್ದಾರೆ. ರಾಘಣ್ಣ ಸಿನಿಕೆರಿಯರ್‌ನಲ್ಲಿ ಇದೊಂದು ವಿಭಿನ್ನ ಸಿನಿಮಾವಾಗಲಿದೆ. “13′ ಎಂಬುದು ಅನೇಕರಿಗೆ ನೆಗೆಟಿವ್ ನಂಬರ್ ಆಗಿದ್ದರೂ, ಈ ಸಿನಿಮಾದಲ್ಲಿ ಅದಕ್ಕೆ ಬೇರೆಯದ್ದೇ ಅರ್ಥವಿದೆ. ಈಗಾಗಲೇ ಟೀರ್ಸ, ಬಿಡುಗಡೆಯಾಗಿರುವ ಹಾಡಿಗೆ ತುಂಬ ಒಳ್ಳೆಯ ರೆಸ್ಪಾನ್ಸ್ ಸಿಗುತ್ತಿದೆ. ಎಲ್ಲರ ಸಹಕಾರದಿಂದ ಒಂದು ಒಳ್ಳೆಯ ಸಿನಿಮಾ ಮಾಡಿದ್ದೇವೆ. ಇದೇ ತಿಂಗಳು ಸಿನಿಮಾ ಪ್ರೇಕ್ಷಕರ ಮುಂದೆ ಬರಲಿದೆ’ ಎಂದರು.
ನಟ ರಾಘವೇಂದ್ರ ರಾಜಕುಮಾರ್ ನಾತನಾಡಿ, “ಬಹಳ ದಿನಗಳ ನಂತರ ಸಸ್ಪೆನ್ಸ್-ಥ್ರಿಲ್ಲರ್ ಸಿನಿಮಾದಲ್ಲಿ ಅಭಿನಯಿಸಿದ್ದು, ಖುಷಿಕೊಟ್ಟಿದೆ. ಇಡೀ ತಂಡ ಸಾಕಷ್ಟು ಪ್ರಯತ್ನದಿಂದ ಒಳ್ಳೆಯ ಸಿನಿಮಾ ಮಾಡಿದೆ. ಪ್ರೇಕ್ಷಕರಿಗೂ ಸಿನಿಮಾ ಇಷ್ಟವಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಟಿ ಶ್ರುತಿ, ನಟ ಪ್ರಮೋದ್ ಶೆಟ್ಟಿ, ದಿಲೀಪ್ ಪೈ, ನಟಿ ಪ್ರೀತಿ ಗೋಸ್ವಾಮಿ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು.
“ಯು. ವಿ ಪ್ರೊಡಕ್ಷನ್ಸ್’ ಬ್ಯಾನರಿನಲ್ಲಿ ಕೆ. ಸಂಪತ್ ಕುಮಾರ್, ಹೆಚ್. ಎಸ್. ಮಂಜುನಾಥ್, ಮಂಜುನಾಥ ಗೌಡ, ಸಿ. ಕೇಶವಮೂರ್ತಿ ಜಂಟಿಯಾಗಿ ನಿರ್ಮಿಸಿರುವ “13′ ಸಿನಿಮಾಕ್ಕೆ ಕೆ. ನರೇಂದ್ರ ಬಾಬು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. “13′ ಸಿನಿಮಾದದ ಹಾಡುಗಳಿಗೆ ಶೋಗನ್ ಬಾಬು ಸಂಗೀತ ಸಂಯೋಜಿಸಿದ್ದಾರೆ. ಚಿತ್ರಕ್ಕೆ ಅಜಯ್ ಮಂಜು ನಾಯ್ಡು ಛಾಯಾಗ್ರಹಣ, ಗಿರೀಶ್ ಕುಮಾರ್ ಸಂಕಲನವಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.