ಫ್ರಾನ್ಸ್ ಪ್ರವಾಸ ಆರಂಭಿಸಿದ ಪ್ರಧಾನಿ ಮೋದಿ: ಬಾಸ್ಟಿಲ್ ಡೇ ಪಥಸಂಚಲನದಲ್ಲಿ ಭಾಗಿ
Team Udayavani, Jul 13, 2023, 9:16 AM IST
ನವದೆಹಲಿ: ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಬೆಳಿಗ್ಗೆ ಫ್ರಾನ್ಸ್‌ಗೆ ಪ್ರಯಾಣ ಬೆಳೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಎರಡು ದಿನಗಳ ಪ್ಯಾರಿಸ್ ಭೇಟಿಯಲ್ಲಿ ರಕ್ಷಣೆ ಮತ್ತು ಬಾಹ್ಯಾಕಾಶ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಭಾರತ – ಫ್ರಾನ್ಸ್ ಸಂಬಂಧಗಳನ್ನು ಬಲಪಡಿಸುವತ್ತ ಗಮನಹರಿಸಲಿದ್ದಾರೆ.
ವಾರ್ಷಿಕ ಬಾಸ್ಟಿಲ್ ಡೇ ಪರೇಡ್‌ನಲ್ಲಿ ಪ್ರಧಾನಿ ಮೋದಿ ಗೌರವಾನ್ವಿತ ಅತಿಥಿಯಾಗಲಿದ್ದಾರೆ, ಅಲ್ಲಿ 269 ಸದಸ್ಯರ ಭಾರತೀಯ ತ್ರಿ-ಸೇವಾ ತುಕಡಿ ಪರೇಡ್‌ನಲ್ಲಿ ಭಾಗವಹಿಸಲಿದೆ. ಈ ಸಂದರ್ಭದಲ್ಲಿ ಫ್ರೆಂಚ್ ಜೆಟ್‌ಗಳೊಂದಿಗೆ ಭಾರತೀಯ ವಾಯುಪಡೆಯ (ಐಎಎಫ್) ಮೂರು ರಫೇಲ್ ಫೈಟರ್ ಜೆಟ್‌ಗಳು ತಾಲೀಮು ನಡೆಸಲಿವೆ.
ಫ್ರಾನ್ಸ್‌ಗೆ ತೆರಳುವ ಮೊದಲು, ದೀರ್ಘಾವಧಿಯ ಮತ್ತು ಸಮಯ ಪರೀಕ್ಷಿತ ಪಾಲುದಾರಿಕೆಯನ್ನು ಮುಂದಕ್ಕೆ ಕೊಂಡೊಯ್ಯುವ ಕುರಿತು ಫ್ರೆಂಚ್ ಅಧ್ಯಕ್ಷರೊಂದಿಗೆ ವ್ಯಾಪಕ ಚರ್ಚೆ ನಡೆಸುವುದಾಗಿ ಪ್ರಧಾನಿ ಮೋದಿ ಹೇಳಿದರು.
ಬಾಸ್ಟಿಲ್ ಡೇ ಪೆರೇಡ್ ಭಾರತ – ಫ್ರಾನ್ಸ್ ನಡುವಿನ ವ್ಯೂಹಾತ್ಮಕ ಸಂಬಂಧದ 25ನೇ ವರ್ಷಾಚರಣೆಯೂ ಆಗಿರುವುದರಿಂದ, ಆಳವಾದ ನಂಬಿಕೆ ಮತ್ತು ಬದ್ಧತೆಯಿಂದ ಬೇರೂರಿರುವ ನಮ್ಮ ಎರಡು ದೇಶಗಳು ರಕ್ಷಣೆ, ಬಾಹ್ಯಾಕಾಶ, ನಾಗರಿಕ ಪರಮಾಣು, ಆರ್ಥಿಕತೆ, ವ್ಯಾಪಾರ, ಹೂಡಿಕೆ, ಶಿಕ್ಷಣ, ಸಂಸ್ಕೃತಿ ಮತ್ತು ಜನರ ಸಂಬಂಧಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ನಿಕಟವಾಗಿ ಸಹಕರಿಸುತ್ತೇವೆ. ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆಯೂ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಫ್ರಾನ್ಸ್ ಭೇಟಿ ಬಳಿಕ ಜು.15 ರಂದು ಮೋದಿ ಯುಎಇಗೆ ತೆರಳಲಿದ್ದಾರೆ. ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್‌ರನ್ನು ಅಬುಧಾಬಿಯಲ್ಲಿ ಭೇಟಿ ಮಾಡಲಿದ್ದಾರೆ.
#WATCH | PM Narendra Modi departs from Delhi Airport for Paris. pic.twitter.com/7KLi6y5efm
— ANI (@ANI) July 13, 2023
Leaving for Paris, where I will take part in the Bastille Day celebrations. I look forward to productive discussions with President @EmmanuelMacron and other French dignitaries.
Other programmes include interacting with the Indian community and top CEOs. https://t.co/jwT0CtRZyB— Narendra Modi (@narendramodi) July 13, 2023
ಪ್ರಧಾನಿ ಮೋದಿಯವರ ಫ್ರಾನ್ಸ್ ಮೊದಲ ದಿನದ ವೇಳಾಪಟ್ಟಿ:
– ಪ್ರಧಾನಿಯವರು ಸಂಜೆ ಸುಮಾರು 4 ಗಂಟೆಗೆ (ಭಾರತೀಯ ಕಾಲಮಾನ) ಪ್ಯಾರಿಸ್‌ಗೆ ಆಗಮಿಸುತ್ತಾರೆ ಮತ್ತು ಓರ್ಲಿ ವಿಮಾನ ನಿಲ್ದಾಣದಲ್ಲಿ ವಿಧ್ಯುಕ್ತ ಸ್ವಾಗತವನ್ನು ಸ್ವೀಕರಿಸಲಿದ್ದಾರೆ.
– ರಾತ್ರಿ 7.30 ರ ಸುಮಾರಿಗೆ ಪ್ರಧಾನಿ ಮೋದಿ ಸೆನೆಟ್‌ಗೆ ಆಗಮಿಸುತ್ತಾರೆ ಈ ವೇಳೆ ಸೆನೆಟ್ ಅಧ್ಯಕ್ಷ ಗೆರಾರ್ಡ್ ಲಾರ್ಚರ್ ಅವರನ್ನು ಭೇಟಿಯಾಗಲಿದ್ದಾರೆ.
– ರಾತ್ರಿ 8.45 ರ ಸುಮಾರಿಗೆ ಪ್ರಧಾನಿ ಮೋದಿ ಅವರು ಫ್ರೆಂಚ್ ಪ್ರಧಾನಿ ಎಲಿಸಬೆತ್ ಬೋರ್ನ್ ಅವರೊಂದಿಗೆ ಸಭೆ ನಡೆಸಲಿದ್ದಾರೆ.
– ಪ್ರಧಾನಮಂತ್ರಿ ಮೋದಿಯವರು ನಂತರ ಸುಮಾರು ರಾತ್ರಿ 11 ಗಂಟೆಗೆ ಐಕಾನಿಕ್ ಲಾ ಸೀನ್ ಮ್ಯೂಸಿಕೇಲ್‌ನಲ್ಲಿ ಭಾರತೀಯ ಸಮುದಾಯದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
– ಅದರ ನಂತರ, ಸುಮಾರು 00:30 am ಕ್ಕೆ, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಆಯೋಜಿಸಿದ ಖಾಸಗಿ ಭೋಜನಕ್ಕಾಗಿ ಪ್ರಧಾನಿ ಮೋದಿ ಎಲಿಸೀ ಅರಮನೆಯನ್ನು ತಲುಪಲಿದ್ದಾರೆ.
ಇದನ್ನೂ ಓದಿ: ದೆಹಲಿ: ಉಕ್ಕಿ ಹರಿಯುತ್ತಿರುವ ಯಮುನಾ, ತಗ್ಗು ಪ್ರದೇಶ ಜಲಾವೃತ, ಸಿಎಂ ನಿವಾಸದ ಬಳಿಯೂ ಪ್ರವಾಹ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
MUST WATCH
ಹೊಸ ಸೇರ್ಪಡೆ
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.