Suniel Shetty: “ನನ್ನ ಮನೆಗೂ ಟೊಮ್ಯಾಟೋ ಬೆಲೆ ಏರಿಕೆ ಬಿಸಿ ತಟ್ಟಿದೆ”: ನಟ ಸುನೀಲ್‌ ಶೆಟ್ಟಿ

Team Udayavani, Jul 13, 2023, 12:10 PM IST

tdy-5

ಮುಂಬಯಿ: ಸದ್ಯ ಟೊಮ್ಯಾಟೋ ಬೆಲೆ ಗಗನಕ್ಕೇರಿದೆ. ಜನ ತರಕಾರಿಗಳನ್ನು ಖರೀದಿಸುತ್ತಿದ್ದಾರೆ ಆದರೆ ಟೊಮ್ಯಾಟೋ ಕೊಳ್ಳಲು ಹಿಂದೆ ಮುಂದೆ ನೋಡುತ್ತಿದ್ದಾರೆ. ಟೊಮ್ಯಾಟೋ ಬೆಲೆ ಏರಿಕೆ ಎಲ್ಲರಿಗೂ ಶಾಕ್‌ ನೀಡಿದೆ.

ಸಾಮಾನ್ಯ ಜನರಿಗೆ ಮಾತ್ರವಲ್ಲದೆ ಬಾಲಿವುಡ್‌ ಸೂಪರ್‌ ಸ್ಟಾರ್‌ ಗಳ ಅಡುಗೆ ಮನೆಗೂ ಟೊಮ್ಯಾಟೋ ಬೆಲೆ ಏರಿಕೆ ಬಿಸಿ ತಟ್ಟಿದೆ. ಬಾಲಿವುಡ್‌ ನಟ ಸುನೀಲ್ ಶೆಟ್ಟಿ ಅವರು ತಮ್ಮ ಮನೆಗೂ ಟೊಮ್ಯಾಟೋ ಬೆಲೆ ಏರಿಕೆಯ ಬಿಸಿ ತಟ್ಟಿದೆ ಎನ್ನುವುದರ ಬಗ್ಗೆ ಮಾತನಾಡಿದ್ದಾರೆ.

“ನನ್ನ ಪತ್ನಿ ಮನಾ ಕಳೆದ ಕೆಲ ದಿನಗಳಿಂದ ಎರಡು  ಮೂರು ದಿನಕ್ಕೆ ಆಗುವಷ್ಟು ಮಾತ್ರ ತರಕಾರಿಯನ್ನು ತರುತ್ತಿದ್ದಾಳೆ. ನಾವು ತಾಜಾವಾಗಿರುವ ಉತ್ನನ್ನಗಳನ್ನು ಸೇವಿಸಲು ಇಷ್ಟುಪಡುತ್ತೇವೆ. ಇತ್ತೀಚಿನ ದಿನಗಳಲ್ಲಿ ಟೊಮ್ಯಾಟೋ ಬೆಳೆಯ ಬೆಲೆ ಸಾಕಷ್ಟು ಏರಿಕೆ ಆಗಿದೆ. ಇದು ನಮ್ಮ ಮನೆಯ ಅಡುಗೆ ಮನೆಗೂ ತಟ್ಟಿದೆ. ನಾನು ಸೂಪರ್‌ ಸ್ಟಾರ್‌  ಆಗಿದ್ದೇನೆ ಆದುದ್ದರಿಂದ ನನಗೇನು ಇದರಿಂದ ಸಮಸ್ಯೆ ಆಗುವುದಿಲ್ಲ ಎಂದು ಜನ ಭಾವಿಸಬಹುದು. ಹಾಗೇನಿಲ್ಲ ನಮ್ಮ ಮನೆಗೂ ಟೊಮ್ಯಾಟೋ ಬೆಲೆ ಏರಿಕೆ ಬಿಸಿ ತಟ್ಟಿದೆ. ಹಾಗಾಗಿ ನಾನು ಹೀಗೀಗಾ ಟೊಮ್ಯಾಟೋ ಸೇವಿಸುವುದನ್ನು ಕಡಿಮೆ ಮಾಡಿದ್ದೇನೆ” ಎಂದು ನಟ “ಆಜ್ ತಕ್” ಸಂದರ್ಶನದಲ್ಲಿ ಹೇಳಿದ್ದಾರೆ.

ಮುಂದುವರೆದು ಮಾತನಾಡಿದ ಅವರು “ನೀವು ಆ್ಯಪ್ ಗಳಲ್ಲಿ ತರಕಾರಿ ಬೆಲೆಗಳನ್ನು ನೋಡಿದರೆ ಶಾಕ್‌ ಆಗ್ತೀರಾ ಏಕೆಂದರೆ ಅಲ್ಲಿ ಅಂಗಡಿಗಳಿಗಿಂತ ಕಡಿಮೆ ಬೆಲೆಯಲ್ಲಿ ತರಕಾರಿಗಳು ಸಿಗುತ್ತವೆ. ನಾನು ಈ ಆ್ಯಪ್ ಗಳ ಮೂಲಕವೇ ತರಕಾರಿಯನ್ನು ಆರ್ಡರ್‌ ಮಾಡುತ್ತೇನೆ. ಕಡಿಮೆಯಲ್ಲಿ ಸಿಗುತ್ತದೆ ಎನ್ನುವುದಕ್ಕಲ್ಲ. ಉತ್ಪನ್ನಗಳು ತಾಜಾವಾಗಿರುತ್ತದೆ ಎನ್ನುವ ಕಾರಣಕ್ಕಾಗಿ. ನಾನೊಬ್ಬ ರೆಸ್ಟೊರೆಂಟರ್‌ ಕೂಡ ಆಗಿರುವುದಕ್ಕಾಗಿ ಯಾವಾಗಲೂ ಉತ್ತಮ ಬೆಲೆಗಳಿಗಾಗಿ ಚೌಕಾಶಿ ಮಾಡುತ್ತೇನೆ. ಆದರೆ ಟೊಮ್ಯಾಟೋ ಬೆಲೆ ಏರಿಕೆಯಿಂದ ಜನರು ರುಚಿ ಮತ್ತು ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಬೇಕಾಗಿದೆ” ಎಂದರು.

ಇತ್ತೀಚೆಗೆ ಅಮೆಜಾನ್ ಮಿನಿ ಟಿವಿಯ ಸರಣಿ “ಹಂಟರ್ ಟೂಟೆಗಾ ನಹಿ ತೊಡೆಗಾ” ಸಿರೀಸ್‌ ನಲ್ಲಿ ಪೊಲೀಸ್ ಆಗಿ ಸುನೀಲ್‌ ಶೆಟ್ಟಿ ಕಾಣಿಸಿಕೊಂಡಿದ್ದರು. ಇದೇ ವರ್ಷದ ಫೆಬ್ರವರಿಯಲ್ಲಿ “ಹೇರಾ ಫೆರಿ 3” ಚಿತ್ರವನ್ನು ಸುನೀಲ್‌ ಶೆಟ್ಟಿ ಅನೌನ್ಸ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Karkala: ಅರುಣೋದಯ ವಿಶೇಷ ಶಾಲೆ ಮುಖ್ಯಸ್ಥೆ ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್‌ ಡೆಲ್ಲಿ

KAR-BE

Ranji Trophy: ಕರ್ನಾಟಕಕ್ಕೆ ಹಿನ್ನಡೆ ಭೀತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suniel Shetty: ಆ್ಯಕ್ಷನ್ ದೃಶ್ಯದ ಚಿತ್ರೀಕರಣದ ವೇಳೆ ಅವಘಡ; ಸುನಿಲ್‌ ಶೆಟ್ಟಿಗೆ ಗಂಭೀರ ಗಾಯ

Suniel Shetty: ಆ್ಯಕ್ಷನ್ ದೃಶ್ಯದ ಚಿತ್ರೀಕರಣದ ವೇಳೆ ಅವಘಡ; ಸುನಿಲ್‌ ಶೆಟ್ಟಿಗೆ ಗಂಭೀರ ಗಾಯ

Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ

Threat Call: ಸಲ್ಮಾನ್ ಖಾನ್ ಬಳಿಕ ಬಾಲಿವುಡ್ ನಟ ಶಾರುಖ್ ಖಾನ್ ಗೂ ಜೀವ ಬೆದರಿಕೆ

7

SRK: ಶಾರುಖ್ ಭೇಟಿಗೆ 95 ದಿನ ಮನೆ ಹೊರಗೆ ಕಾದು ಕೂತ ಅಭಿಮಾನಿ; ನಟ ಕೊಟ್ಟ ಉಡುಗೊರೆ ಏನು?

10

BʼTown: ʼಪುಷ್ಪ-2ʼಗೆ ದಾರಿ ಬಿಟ್ಟ ವಿಕ್ಕಿ ಕೌಶಲ್‌ ʼಛಾವಾʼ; ರಿಲೀಸ್‌ ಡೇಟ್‌ ಮುಂದೂಡಿಕೆ?

Ramayana: ಎರಡು ಭಾಗಗಳಾಗಿ ಬರಲಿದೆ‌ ಬಿಗ್‌ ಬಜೆಟ್ ʼರಾಮಾಯಣʼ; ರಿಲೀಸ್‌ ಡೇಟ್‌ ಅನೌನ್ಸ್

Ramayana: ಎರಡು ಭಾಗಗಳಾಗಿ ಬರಲಿದೆ‌ ಬಿಗ್‌ ಬಜೆಟ್ ʼರಾಮಾಯಣʼ; ರಿಲೀಸ್‌ ಡೇಟ್‌ ಅನೌನ್ಸ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Maharashtra: ಕಾಂಗ್ರೆಸ್‌ ಬಂಡಾಯ ಸ್ಪರ್ಧಿಗಳು 6 ವರ್ಷ ಅಮಾನತು

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Aranthodu: ಕಾನೂನು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Karkala: ಅರುಣೋದಯ ವಿಶೇಷ ಶಾಲೆ ಮುಖ್ಯಸ್ಥೆ ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Manipal ದಾಳಿ: 15 ಬುಟ್ಟಿ ಮರಳು ವಶಕ್ಕೆ

Manipal ದಾಳಿ: 15 ಬುಟ್ಟಿ ಮರಳು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.