ಹುಮನಾಬಾದ್: ಭೀಕರ ರಸ್ತೆ ಅಪಘಾತ, ಓರ್ವ ಸ್ಥಳದಲ್ಲೇ ಮೃತ್ಯು, ಇಬ್ಬರು ಗಂಭೀರ
Team Udayavani, Jul 13, 2023, 1:48 PM IST
ಹುಮನಾಬಾದ್ : ತಾಲೂಕಿನ ಮಾಣಿಕನಗರ- ಕನಕಟ್ಟಾ ಗ್ರಾಮದ ರಸ್ತೆಯಲ್ಲಿ ಗುರುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಓರ್ವ ಯುವಕ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಬಸವಕಲ್ಯಾಣ ತಾಲೂಕಿನ ಇಸ್ಲಾಂಪೂರ್ ಗ್ರಾಮದ ರೋಹಿತ್ ಮಾಣಿಕ್ (23) ಸ್ಥಳದಲ್ಲಿಯೇ ಮೃತಪಟ್ಟ ಯುವಕ. ಈತನ ಜೊತೆಗೆ ಇದ್ದ ಇನ್ನೂ ಇಬ್ಬರು ಶಿವಕುಮಾರ್ ಹಾಗೂ ಶ್ರೀಕಾಂತ್ ಗಂಭೀರ ಗಾಯಗೊಂಡಿದ್ದು, ಇವರ ಸ್ಥಿತಿ ಕೂಡ ಚಿಂತಾಜನಕವಾಗಿದೆ. ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರ್ಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಭೀಕರ ಅಪಘಾತ ಕುರಿತು ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಹೇಗೆ ಅಪಘಾತ ಸಂಭವಿಸಿದೆ? ದ್ವಿಚಕ್ರ ವಾಹನಕ್ಕೆ ಹೇಗೆ ಬೆಂಕಿ ಹತ್ತಿಕೊಂಡಿತ್ತು ಎಂದು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಮೇಲ್ನೋಟಕ್ಕೆ ಅಪರಿಚಿತ ವಾಹನವೊಂದು ಅತಿ ವೇಗದಲ್ಲಿ ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಸಂಭವಿಸಿರಬೇಕು. ಅಪಘಾತದ ರಭಸಕ್ಕೆ ಮೃತಪಟ್ಟ ಯುವಕನ ರುಂಡ ಕೂಡ ಬೇರ್ಪಟ್ಟಿರಬೇಕು. ವಾಹನಕ್ಕೂ ಕೂಡ ಬೆಂಕಿ ಹೊತ್ತಿಕೊಂಡು ಬೈಕ್ ಸುಟ್ಟಿರಬೇಕು ಎಂದು ಪೊಲೀಸ್ ಅಧಿಕಾರಿಗಳು ಊಹಿಸುತ್ತಿದ್ದಾರೆ.
ಪೊಲೀಸ್ ಅಧಿಕಾರಿಗಳ ಹೆಚ್ಚಿನ ತನಿಖೆಯ ನಂತರ ಘಟನೆಯ ಪೂರ್ಣ ವಿವರ ಹೊರಬರಲಿದೆ. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಮೂಡಿಗೆರೆ: ಶಾಲೆಯಲ್ಲಿ ಪಾಠ ಕೇಳಬೇಕಾದ ಮಕ್ಕಳು ಬಿಸಿಯೂಟಕ್ಕೆ ನೀರು ತರಲು ಹೋದರೆ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.