Greater Noida: ಮಾಲ್ ನಲ್ಲಿ ಅಗ್ನಿ ಅವಘಡ, ಜೀವ ಉಳಿಸಿಕೊಳ್ಳಲು 3ನೇ ಮಹಡಿಯಿಂದ ಜಿಗಿದ ಜನ
Team Udayavani, Jul 13, 2023, 3:37 PM IST
ನೋಯ್ಡಾ: ಶಾಪಿಂಗ್ ಮಾಲ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮಾಲ್ ನಲ್ಲಿ ಸಿಲುಕಿಕೊಂಡ ಜನ ತಮ್ಮ ಜೀವ ಉಳಿಸಿಕೊಳ್ಳಲು ಮೂರನೇ ಮಹಡಿಯಿಂದ ಜಿಗಿಯುತ್ತಿರುವ ಭಯಾನಕ ವಿಡಿಯೋ ವೈರಲ್ ಆಗಿದೆ.
ಗ್ರೇಟರ್ ನೋಯ್ಡಾ ಗ್ಯಾಲಕ್ಸಿ ಪ್ಲಾಜಾ ಮಾಲ್‌ನಲ್ಲಿ ಗುರುವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಘಟನಾ ಸ್ಥಳಕ್ಕೆ ರಕ್ಷಣಾ ತಂಡ ದೌಡಾಯಿಸಿದ್ದು ಕಟ್ಟಡದ ಮೂರನೇ ಮಹಡಿಯಲ್ಲಿ ಸಿಲುಕಿದ್ದ ಕೆಲವರನ್ನು ರಕ್ಷಣೆ ಮಾಡಲಾಗಿದೆ.
ವೀಡಿಯೊದಲ್ಲಿ, ಜನರು ಮಾಲ್‌ನ ಕಿಟಕಿಯಿಂದ ನೇತಾಡುವವರಿಗೆ “ಜಂಪ್, ಜಂಪ್” ಎಂದು ಹೇಳುವುದನ್ನು ಕೇಳಬಹುದು. ಬೆಂಕಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಜನರು ಕಟ್ಟಡದಿಂದ ಜಿಗಿಯುತ್ತಿರುವುದನ್ನು ಕಾಣಬಹುದು. ಆದರೆ ಇಲ್ಲಿ ರಕ್ಷಣಾ ತಂಡ ಜನರ ಸುರಕ್ಷತೆಗಾಗಿ ಕ್ರಮಗಳನ್ನು ಕೈಗೊಂಡ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದ್ದು ಇದುವರೆಗೂ ಯಾವುದೇ ಸಾವು ನೋವಿನ ಬಗ್ಗೆ ವರದಿಯಾಗಲಿಲ್ಲ.
ಇದನ್ನೂ ಓದಿ: Tomato Jackpot: ಟೊಮೆಟೋ ಮಾರಾಟದಿಂದ 38 ಲಕ್ಷ ರೂ. ಆದಾಯ ಗಳಿಸಿದ ಕೋಲಾರದ ರೈತ
A massive #fire broke out at a #shopping complex of Greater Noida West today. Videos of people trying to save their lives by #jumping from as high as the third floor went viral. The mall located at #GaurCity 1, a housing society of Greater Noida West pic.twitter.com/BoV76CwEhH
— Mirror Now (@MirrorNow) July 13, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.