Bihar: ಶಿಕ್ಷಕರ ನೇಮಕಾತಿಗೆ ಆಗ್ರಹ-ಪೊಲೀಸ್ ಲಾಠಿಚಾರ್ಜ್ ಗೆ ಬಿಜೆಪಿ ಮುಖಂಡ ಮೃತ್ಯು
ಬಿಜೆಪಿ ವಿಧಾನಸಭಾ ಚಲೋ ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಈ ಲಾಠಿಚಾರ್ಜ್ ಘಟನೆ ನಡೆದಿದೆ
Team Udayavani, Jul 13, 2023, 3:58 PM IST
ಪಾಟ್ನಾ: ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಬಿಹಾರ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಕ್ಷ ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಪಾಟ್ನಾ ಪೊಲೀಸರು ನಡೆಸಿದ ಲಾಠಿಚಾರ್ಜ್ ನಲ್ಲಿ ಬಿಜೆಪಿ ಮುಖಂಡನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
ಇದನ್ನೂ ಓದಿ:Greater Noida: ಮಾಲ್ ನಲ್ಲಿ ಅಗ್ನಿ ಅವಘಡ, ಜೀವ ಉಳಿಸಿಕೊಳ್ಳಲು 3ನೇ ಮಹಡಿಯಿಂದ ಜಿಗಿದ ಜನ
ನಗರದ ದಾಕ್ಬಾಂಗ್ಲಾ ಚೌರಾಹಾ ಪ್ರದೇಶದಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಪೊಲೀಸರ ಲಾಠಿಚಾರ್ಜ್ ನಲ್ಲಿ ಬಿಜೆಪಿ ಮುಖಂಡ ವಿಜಯ್ ಕುಮಾರ್ ಸಿಂಗ್ ಕೊನೆಯುಸಿರೆಳೆದಿರುವುದಾಗಿ ವರದಿ ತಿಳಿಸಿದೆ.
#WATCH | Patna: Security personnel use water cannons and open lathi charge to disperse BJP workers protesting against Bihar govt on issue of the posting of teachers in the state pic.twitter.com/Vxp010wYDo
— ANI (@ANI) July 13, 2023
ಲಾಠಿಚಾರ್ಜ್ ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿಜಯ್ ಕುಮಾರ್ ಸಿಂಗ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಸಿಂಗ್ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದರು.
ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಭಾರತೀಯ ಜನತಾ ಪಕ್ಷ ವಿಧಾನಸಭಾ ಚಲೋ ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಈ ಲಾಠಿಚಾರ್ಜ್ ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ. ಬಿಜೆಪಿ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದರು.
ಘಟನೆ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರು ಟ್ವೀಟ್ ಮಾಡಿದ್ದು, ಬಿಹಾರ ಸರ್ಕಾರದ ಅಸಮರ್ಥತೆ ಪರಿಣಾಮ ಎಂಬಂತೆ ಪಾಟ್ನಾದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಲಾಠಿಪ್ರಹಾರ ನಡೆಸಲಾಗಿದೆ ಎಂದು ಕಿಡಿಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.