ಆಲಮಟ್ಟಿ: ಶಾಸ್ತ್ರಿ ಜಲಾಶಯಕ್ಕೆ ಒಳ ಹರಿವು ಆರಂಭ

ಜುಲೈ 11ರ ರಾತ್ರಿಯಿಂದ ಒಳ ಹರಿವು ಆರಂಭಗೊಂಡಂತಾಗಿದೆ.

Team Udayavani, Jul 13, 2023, 6:16 PM IST

ಆಲಮಟ್ಟಿ: ಶಾಸ್ತ್ರಿ ಜಲಾಶಯಕ್ಕೆ ಒಳ ಹರಿವು ಆರಂಭ

ಆಲಮಟ್ಟಿ: ಕೈ ಕೊಟ್ಟ ಮುಂಗಾರು ಹಂಗಾಮಿನ ಮಳೆಗಳಿಂದ ಜನ-ಜಾನುವಾರುಗಳ ಕುಡಿಯುವ  ನೀರಿಗೂ ಪರದಾಡುವ ಸ್ಥಿತಿ ನಿರ್ಮಾಣವಾಗುವ ವೇಳೆ ಆಲಮಟ್ಟಿ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯಕ್ಕೆ ನೀರು ಹರಿದು ಬರುತ್ತಿರುವುದರಿಂದ ರೈತರ ಕನಸು ಚಿಗುರೊಡೆಯುವಂತಾಗಿದೆ.

ಪ್ರತಿ ವರ್ಷವೂ ರೋಹಿಣಿ, ಮೃಗಶಿರಾ ಮಳೆಗಳು ಸುರಿದು ಭೂಮಿಯನ್ನು ಹದವಾಗಿರಿಸಿಕೊಂಡಿದ್ದರೈತರು ಬಿತ್ತನೆ ಮಾಡುತ್ತಿದ್ದರು. ಆದರೆ ಈ ಬಾರಿ ಮುಂಗಾರು ಹಂಗಾಮಿನ ಮಳೆಗಳು ಸಮರ್ಪಕವಾಗಿ ಸುರಿಯದಿರುವುದರಿಂದ ಬಿತ್ತನೆ ಮಾಡಲು ರೈತರು ಭೂಮಿಯನ್ನು ಹದವಾಗಿರಿಸಿಕೊಂಡಿದ್ದರೂ ಬಿತ್ತನೆ ಮಾಡದೇ ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಾಗಿದೆ.

ಮುಂಗಾರು ಬಿತ್ತನೆಗಾಗಿ ಹುರುಳಿ, ಅಲಸಂದಿ, ಮಡಿಕೆಕಾಳು, ಹೆಸರು, ಉದ್ದು, ಸಜ್ಜೆ, ನವಣೆ, ಮೆಕ್ಕೆಜೋಳ, ಹೈಬ್ರಿಡ್‌ ಜೋಳ, ಉದ್ದು, ಹತ್ತಿ, ಉಳ್ಳಾಗಡ್ಡಿ ಹೀಗೆ ಹಲವಾರು ಬೆಳೆಗಳನ್ನು ಬಿತ್ತನೆ ಮಾಡಲು ರೈತರು ಬೀಜ ಗೊಬ್ಬರ ಕೊಂಡು ಬಿತ್ತನೆ ತಯಾರಿಯಲ್ಲಿದ್ದರು. ಸಮರ್ಪಕವಾಗಿ ಮಳೆ ಸುರಿಯದಿರುವುದರಿಂದ ಮುಂಗಾರು ಬೆಳೆಗಳನ್ನು ಬಿತ್ತಲಾಗದೇ ರೈತರು ಪ್ರತಿ ದಿನ ಆಕಾಶದತ್ತ ಮುಖ ಮಾಡಿ ಮಳೆರಾಯ ಧರೆಗಿಳಿಯುವನೇ ಎಂದು ಕಾದು ನೋಡುವಂತಾಗಿತ್ತು.

ಇನ್ನು ಕೃಷ್ಣೆಯ ಉಗಮ ಸ್ಥಾನ ಮತ್ತು ಕೃಷ್ಣೆಯ ಉಪ ನದಿಗಳ ಜಲಾನಯನ ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಮಂಗಳವಾರ ರಾತ್ರಿಯಿಂದ ಆಲಮಟ್ಟಿ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯಕ್ಕೆ ನೀರು ಹರಿದು ಬರುತ್ತಿದ್ದು ನದಿ ತೀರದ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಯ ಫಲಾನುಭವಿ ರೈತರು ಸಮಾಧಾನದ ನಿಟ್ಟುಸಿರು ಬಿಡುವಂತಾಗಿದೆ.

ಕಳೆದ ಬಾರಿ ವಾಡಿಕೆಗಿಂತಲೂ ಮುಂಚಿತವಾಗಿ ಮೇ 21ರಂದು ಜಲಾಶಯಕ್ಕೆ ಒಳ ಹರಿವು ಆರಂಭವಾಗಿತ್ತು. ಇದರಿಂದ ಕೃಷ್ಣೆಯ ತೀರದಲ್ಲಿ ಸಮರ್ಪಕವಾಗಿ ಮಳೆಯಾಗದೇ ಇದ್ದರೂ ರೈತರು ಮುಂಗಾರು ಹಾಗೂ ಹಿಂಗಾರು ಬಿತ್ತನೆ ಮಾಡಿದ್ದರು. ಈ ಬಾರಿ ಸುಮಾರು ಎರಡು ತಿಂಗಳ ನಂತರ ಜುಲೈ 11ರ ರಾತ್ರಿಯಿಂದ ಒಳ ಹರಿವು ಆರಂಭಗೊಂಡಂತಾಗಿದೆ.

ಮುಂಗಾರು ಹಂಗಾಮಿನ ಮಳೆಯಾಗದಿರುವುದರಿಂದ ರೈತರಿಗೆ ದಿಕ್ಕು ತೋಚದಂತಾಗಿದೆ. ಈ ಸಂದರ್ಭದಲ್ಲಿ ಸರ್ಕಾರ
ರೈತರ ನೆರವಿಗೆ ಬಂದು ಆತ್ಮಸ್ಥೈರ್ಯ ತುಂಬಬೇಕು ಎನ್ನುತ್ತಾರೆ ತಾಪಂ ಮಾಜಿ ಸದಸ್ಯ ಮಲ್ಲೇಶ ರಾಠೊಡ.

ಗರಿಷ್ಠ 519.6 ಮೀ. ಎತ್ತರದಲ್ಲಿ 123.081 ಟಿಎಂಸಿ ಅಡಿ ಗರಿಷ್ಠ ನೀರು ಸಂಗ್ರಹ ಸಾಮರ್ಥ್ಯದ ಆಲಮಟ್ಟಿ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯದಲ್ಲಿ ಬುಧವಾರದ ಬೆಳಗಿನ ಮಾಹಿತಿಯಂತೆ 507.76 ಮೀ. ಎತ್ತರದಲ್ಲಿ 20.547 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದು, ಇದರಲ್ಲಿ 17.620 ಟಿಎಂಸಿ ಅಡಿ ಜಲಚರಗಳಿಗೆ ಮೀಸಲಿದ್ದು ಇನ್ನುಳಿದ 2.927 ಟಿಎಂಸಿ ಅಡಿ ನೀರು ಬಳಸಿಕೊಳ್ಳಬಹುದಾಗಿದೆ.

ಜಲಾಶಯಕ್ಕೆ ಒಳ ಹರಿವು 19,172 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ. ಜಲಾಶಯದಿಂದ ವಿವಿಧ ಕುಡಿಯುವ ನೀರಿನ ಘಟಕಗಳಿಗೆ ಮತ್ತು ಭಾಷ್ಪೀಭವನ ಸೇರಿ ಒಟ್ಟು 561 ಕ್ಯೂಸೆಕ್‌ ನೀರು ಹೊರ ಹರಿವಿದೆ. ಕಳೆದ 22 ವರ್ಷಗಳಲ್ಲಿ 2021ನೇ ಸಾಲಿನಲ್ಲಿ ಮೇ 23ಕ್ಕೆ ಒಳ ಹರಿವು ಆರಂಭವಾಗಿ ಅಕ್ಟೋಬರ್‌ 22ರಂದು ಒಳ ಹರಿವು ಸ್ಥಗಿತಗೊಂಡಿತ್ತು. ನಂತರ ಮತ್ತೆ ಕೃಷ್ಣೆಯ ಜಲಾನಯನ ಪ್ರದೇಶದಲ್ಲಿ ಮಳೆ ಆರಂಭವಾಗಿದ್ದರ ಪರಿಣಾಮವಾಗಿ ಮತ್ತೆ ನವೆಂಬರ್‌ 20ರಿಂದ ಒಳ ಹರಿವು ಆರಂಭಗೊಂಡು ಡಿಸೆಂಬರ್‌ 29ರಂದು ಸ್ಥಗಿತಗೊಂಡಿತ್ತು.

ಮಳಿ ಆಗಲಾರ್ದಕ ಬಿತ್ತುದ ಬಿಟ್ಟ ಬೀಜ ಗೊಬ್ಬರ ಹಂಗ ಮನ್ಯಾಗ ಇಟ್ಕೊಂಡ ಕುಂತೀವ್ರಿ. ಮ್ಯಾಲಕ ಅರ ಮಳಿ ಆಗಿದ್ರ ಆಲಮಟ್ಟಿ ಡ್ಯಾಮಿಗಿ ನೀರ ಬಂದ್ರ ಕೆನಾಲಕ ನೀರ ಬಿಡತಿದ್ರ. ಆ ನೀರರ ಹೊಲಕ ಉಣ್ಣಸಿತ್ತೀದ್ದೀವ್ರಿ, ಈ ಸಲಾ ಅದೂ ಇಲ್ಲ ನಮ್ಮ ಗತಿ ಹೆಂಗ ಅನ್ನುವಂಗ ಆಗೇತ್ರಿ.
ಖಾಜೇಸಾಬ ಗಂಜ್ಯಾಳ, ಬೇನಾಳ

ಪ್ರತಿ ಸಲ ಮಳೆಯಾಗುತ್ತಿದ್ದರಿಂದ ಅಕಡಿ ಕಾಳುಗಳನ್ನು ಚೆಲೋ ಬೆಳೀತ್ತಿದ್ದೀವ್ರಿ. ಆದ್ರ ಈ ಸಲಾ ಮಳಿ ಆಗಲಿಲ್ಲ, ಒಣ ನೆಲಾ ಹಂಗ ಇಟ್ಟೇವ್ರಿ.
ಮಲ್ಲಿಕಾರ್ಜುನ ಗುಳೇದ, ಕಾರಜೋಳ

ಶಂಕರ ಜಲ್ಲಿ

ಟಾಪ್ ನ್ಯೂಸ್

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

5,000 tractors blockade Suvarna Soudha on December 10; Kudalasangama Sri

Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.