Consuming cyanide: ಪುಂಜಾಲಕಟ್ಟೆ; ಸೈನೇಡ್ ಸೇವಿಸಿ ಯುವಕ ಆತ್ಮಹತ್ಯೆ
Team Udayavani, Jul 13, 2023, 6:27 PM IST
ಪುಂಜಾಲಕಟ್ಟೆ: ಯುವಕನೋರ್ವ ಸೈನೇಡ್ ಸೇವಿಸಿ ಆತ್ಮಹತ್ಯೆಗೈದ ಘಟನೆ ಪುಂಜಾಲಕಟ್ಟೆಯಲ್ಲಿ ಗುರುವಾರ ಸಂಭವಿಸಿದೆ.
ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ನಿವಾಸಿ ಗಣೇಶ ಆಚಾರ್ಯ ಅವರ ಪುತ್ರ ರೂಪೇಶ್ ಆಚಾರ್ಯ(31) ಮೃತಪಟ್ಟವರು.
ಸ್ವರ್ಣ ಕುಸುರಿ ಕೆಲಸಗಾರರಾಗಿದ್ದ ರೂಪೇಶ್ ಅವರು ಸ್ಥಳೀಯ ಸಂಸ್ಥೆಯಲ್ಲಿ ನೌಕರರಾಗಿದ್ದು, ಇತ್ತೀಚೆಗೆ ಕೆಲಸ ಬಿಟ್ಟಿದ್ದರು. ಮದ್ಯವ್ಯಸನಿಯಾಗಿದ್ದ ಅವರು ಗುರುವಾರ ಮಧ್ಯಾಹ್ನ ತನ್ನ ಕೊಠಡಿಯಲ್ಲಿ ಸೈನೇಡ್ ಸೇವಿಸಿದ್ದರು. ಇದನ್ನು ಗಮನಿಸಿದ ಮನೆ ಮಂದಿ ಕೂಡಲೇ 108 ಅಂಬ್ಯುಲೆನ್ಸ್ ಮೂಲಕ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಿದರಾದರೂ ಅಲ್ಲಿ ಅವರು ಮೃತಪಟ್ಟಿದ್ದರು.
ಗಣೇಶ್ ಅವರ ಮೂವರು ಮಕ್ಕಳಲ್ಲಿ ಹಿರಿಯವನಾಗಿದ್ದ ರೂಪೇಶ್ ವಿವಾಹಿತನಾಗಿದ್ದು, ಪತ್ನಿ, ಪುಟ್ಟ ಮಗುವನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.