ಬೆಳಗಾವಿ: ಹಾಡಹಗಲೇ ಬಾಲಕಿ ಅಪಹರಣ ಯತ್ನ -ಜನರಲ್ಲಿ ಆತಂಕ

ಆರೋಪಿಯ ಸುಳಿವು ಸಿಕ್ಕಿದ್ದು, ಆತನ ಬಂಧನಕ್ಕಾಗಿ ಮಾಹಿತಿ ಪಡೆದುಕೊಂಡಿದ್ದಾರೆ.

Team Udayavani, Jul 13, 2023, 6:33 PM IST

ಬೆಳಗಾವಿ: ಹಾಡಹಗಲೇ ಬಾಲಕಿ ಅಪಹರಣ ಯತ್ನ -ಜನರಲ್ಲಿ ಆತಂಕ

ಬೆಳಗಾವಿ: ಟ್ಯೂಷನ್‌ಗೆ ಹೊರಟಿದ್ದ 10 ವರ್ಷದ ಬಾಲಕಿಯನ್ನು ಅಪಹರಿಸಲು ಯತ್ನಿಸಿದ ಘಟನೆ ನಗರದ ಹಿಂದವಾಡಿಯ ಮಹಾವೀರ ಗಾರ್ಡನ್‌ ಬಳಿ ಮಂಗಳವಾರ ನಡೆದಿದ್ದು, ಅಪಹರಣಕಾರ ಹೆಗಲ ಮೇಲೆ ಎತ್ತಿಕೊಂಡು ಹೋಗುವಾಗ ಬಾಲಕಿ ತಪ್ಪಿಸಿಕೊಂಡಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬಾಲಕಿಯನ್ನು ಹಿಂಬಾಲಿಸಿಕೊಂಡು ಬಂದ ಅಪಹರಣಕಾರ ನಿನ್ನನ್ನು ಮನೆಗೆ ಬಿಟ್ಟು ಬರುತ್ತೇನೆ ಬಾ ಎಂದು ಹೆಗಲ ಮೇಲೆ ಎತ್ತಿಕೊಂಡಿದ್ದಾನೆ. ಬಾಲಕಿ ಜೋರಾಗಿ ಕಿರುಚಾಡಿದ್ದಾಳೆ. ಅಪರಿಚಿತ ವ್ಯಕ್ತಿ ಬಾಲಕಿಯನ್ನು ಎತ್ತಿಕೊಂಡು ಸುಮಾರು 50 ಮೀಟರ್‌ ವರೆಗೆ ಒಯ್ದಿದ್ದಾನೆ. ಬಾಲಕಿ ಕಾಲು ಬಡಿದು ಕೆಳಗೆ ಜಿಗಿದಿದ್ದಾಳೆ. ಬಾಲಕಿಯ ಕಿರುಚಾಟ ಕೇಳಿ ಸುತ್ತಲಿನ ಜನರು ಓಡಿ ಬರುವಷ್ಟರಲ್ಲಿ ಆತ ಅಲ್ಲಿಂದ ಓಡಿ ಹೋಗಿದ್ದಾನೆ.

ಹಾಡಹಗಲೇ ಬಾಲಕಿಯನ್ನು ಅಪಹರಿಸುತ್ತಿರುವುದು ಪಾಲಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕೂಡಲೇ ಸ್ಥಳೀಯರು
ಬಂದಿದ್ದರಿಂದ ಬಾಲಕಿ ಬಾಚಾವ್‌ ಆಗಿದ್ದಾಳೆ. ಈ ಎಲ್ಲ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಕೂಡಲೇ ಟಿಳಕವಾಡಿ ಪೊಲೀಸ್‌ ಠಾಣೆ ದೂರು ದಾಖಲಾಗಿದೆ. ಈ ಬಗ್ಗೆ ಪಾಲಕರು ಹಾಗೂ ಸ್ಥಳೀಯ ನಿವಾಸಿಗಳು ಆತಂಕ ವ್ಯಕ್ತಪಡಿಸಿ, ಅಪರಿಚಿತ ವ್ಯಕ್ತಿಯನ್ನು ಬಂಧಿ ಸುವಂತೆ ಆಗ್ರಹಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿದ ಪೊಲೀಸರು ಆರೋಪಿ ಬಂಧನಕ್ಕೆ ಜಾಲ ಬೀಸಿದ್ದಾರೆ. ಆರೋಪಿಯ ಶೋಧಕ್ಕೆ ಎರಡು ತಂಡಗಳನ್ನು ರಚಿಸಲಾಗಿದೆ. ಆರೋಪಿಯ ಸುಳಿವು ಸಿಕ್ಕಿದ್ದು, ಆತನ ಬಂಧನಕ್ಕಾಗಿ ಮಾಹಿತಿ
ಪಡೆದುಕೊಂಡಿದ್ದಾರೆ.

ಈ ಬಗ್ಗೆ ಉದಯವಾಣಿಯೊಂದಿಗೆ ಮಾತನಾಡಿದ ಅಪರಾಧ ಮತ್ತು ಸಂಚಾರ ವಿಭಾಗ ಡಿಸಿಪಿ ಪಿ.ವಿ. ಸ್ನೇಹ, ಹಿಂದವಾಡಿಯಲ್ಲಿ ಬಾಲಕಿಯನ್ನು ಎತ್ತಿಕೊಂಡು ಹೋಗುತ್ತಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಬುಧವಾರ ದೂರು ದಾಖಲಾಗಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಪಾಲಕರು ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಹಾಡಹಗಲೇ ಬೆಳಗಾವಿ ನಗರದ ಹೃದಯಭಾಗದಲ್ಲಿ ಇಂಥ ಘಟನೆ ನಡೆದಿದ್ದು, ಆತಂಕಕ್ಕೆ ಕಾರಣವಾಗಿದೆ. ಮಕ್ಕಳ ಅಪಹರಣಕಾರರು ನಗರದಲ್ಲಿ ಬಾಲ ಬಿಚ್ಚಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಪೊಲೀಸರು ಇಂಥ ಚಟುವಟಿಕೆಗಳ ಮೇಲೆ ನಿಗಾ ಇಟ್ಟು ಸಂಶಯಾಸ್ಪದವಾಗಿ ಓಡಾಡುವವರನ್ನು ಬಂ ಧಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-belagavi

Belagavi: ಗಣೇಶ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು

1-belgavi

Belagavi; ಗಣಪತಿ ಮೂರ್ತಿ ವಿಸರ್ಜನೆ ವೇಳೆ ಮೂವರಿಗೆ ಚಾಕು ಇರಿತ!!

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ: ವೈಭವದ ಮೆರವಣಿಗೆ

Belagavi: ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆಗೆ ಚಾಲನೆ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

J-P-Nadda

PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.