26/11 ಬೆದರಿಕೆ; ಸೀಮಾ ಹೈದರ್ ಹಿಂತಿರುಗದಿದ್ದರೆ…: ಮುಂಬೈ ಪೊಲೀಸರಿಗೆ ಉರ್ದು ಕರೆ
ಪ್ರೇಮಿಯನ್ನು ಮದುವೆಯಾಗಲು 4 ಮಕ್ಕಳೊಂದಿಗೆ ಭಾರತಕ್ಕೆ ಬಂದ ಪಾಕಿಸ್ತಾನಿ ಮಹಿಳೆ
Team Udayavani, Jul 13, 2023, 7:46 PM IST
ಮುಂಬೈ: ತನ್ನ ಪ್ರೇಮಿಯನ್ನು ಮದುವೆಯಾಗಲು ಭಾರತಕ್ಕೆ ಬಂದ ಪಾಕಿಸ್ತಾನಿ ಮಹಿಳೆ ಸೀಮಾ ಹೈದರ್ ತನ್ನ ದೇಶಕ್ಕೆ ಹಿಂತಿರುಗದಿದ್ದರೆ ಭಾರತವು “ವಿನಾಶವನ್ನು ಎದುರಿಸಲಿದೆ” ಎಂದು ಮುಂಬೈ ಟ್ರಾಫಿಕ್ ಕಂಟ್ರೋಲ್ ರೂಮ್‌ಗೆ ಬೆದರಿಕೆ ಕರೆ ಬಂದಿದೆ.
ಟ್ರಾಫಿಕ್ ಕಂಟ್ರೋಲ್ ರೂಮ್‌ಗೆ ಅಪರಿಚಿತ ಉರ್ದು ಮಾತನಾಡುವ ಕಾಲರ್‌ನಿಂದ ಕರೆ ಬಂದಿದ್ದು, 26/11 ರೀತಿಯ ಭಯೋತ್ಪಾದಕ ದಾಳಿಯ ಬಗ್ಗೆ ಪೊಲೀಸರಿಗೆ ಎಚ್ಚರಿಕೆ ನೀಡಿದ್ದಾನೆ. ಬುಧವಾರ ತಡರಾತ್ರಿ ಕರೆ ಬಂದಿದ್ದು, ಈ ಬಗ್ಗೆ ತತ್ ಕ್ಷಣ ತನಿಖೆ ನಡೆಸುವಂತೆ ಸೂಚಿಸಲಾಗಿದೆ. ಮುಂಬೈ ಪೊಲೀಸರು ಮತ್ತು ಕ್ರೈಂ ಬ್ರಾಂಚ್ ಘಟನೆಯ ತನಿಖೆ ನಡೆಸುತ್ತಿದ್ದಾರೆ. ಮುಂಬೈ ಪೊಲೀಸ್ ಕಂಟ್ರೋಲ್ ರೂಮ್‌ಗೆ ಆಗಾಗ್ಗೆ ಇಂತಹ ಕರೆಗಳು ಬರುತ್ತಿರುತ್ತವೆ.
26/11 ಮುಂಬೈ ಭಯೋತ್ಪಾದಕ ಘಟನೆಯಂತೆಯೇ ದಾಳಿಗೆ ಎಲ್ಲರೂ ಸಿದ್ಧರಾಗಿರಬೇಕು ಮತ್ತು ಉತ್ತರ ಪ್ರದೇಶ ಸರ್ಕಾರವು ಇದಕ್ಕೆ ಹೊಣೆಯಾಗಲಿದೆ ಎಂದು ಕರೆ ಮಾಡಿದವ ಹೇಳಿದ್ದಾನೆ.
ಯಾರೀಕೆ ಸೀಮಾ ಹೈದರ್?
ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಸೀಮಾ ಹೈದರ್ ಅವರು 2014 ರಲ್ಲಿ ವಿವಾಹವಾದ ನಂತರ ಕರಾಚಿಯಲ್ಲಿ ನೆಲೆಸಿದ್ದಳು, ಜುಲೈ 4 ರಂದು ನೇಪಾಳದ ಮೂಲಕ ವೀಸಾ ಇಲ್ಲದೆ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದಳು. 27 ವರ್ಷದ ಸೀಮಾ, ತನ್ನ ನಾಲ್ಕು ಮಕ್ಕಳೊಂದಿಗೆ, ಆನ್‌ಲೈನ್ ಗೇಮ್ PUBG ನಲ್ಲಿ ಭೇಟಿಯಾದ ತನ್ನ ಪ್ರೇಮಿ ಸಚಿನ್‌ನನ್ನು ಭೇಟಿ ಮಾಡಲು ಭಾರತಕ್ಕೆ ಬಂದಿದ್ದಳು. ಅಕ್ರಮ ವಲಸಿಗರಿಗೆ ಆಶ್ರಯ ನೀಡಿದ್ದಕ್ಕಾಗಿ ಸಚಿನ್ ನನ್ನು ಸಹ ಜೈಲಿಗೆ ಹಾಕಲಾಗಿತ್ತು. ಬಿಡುಗಡೆಯಾದ ನಂತರ, ಸಚಿನ್ ಮತ್ತು ಸೀಮಾ ತನ್ನ ಮಕ್ಕಳೊಂದಿಗೆ ಒಟ್ಟಿಗೆ ವಾಸಿಸಲು ಗ್ರೇಟರ್ ನೋಯ್ಡಾದ ರಬುಪುರ ಪ್ರದೇಶದಲ್ಲಿರುವ ತನ್ನ ಪೋಷಕರ ಮನೆಗೆ ಬಂದಿದ್ದಾರೆ. ನೇಪಾಳದಲ್ಲಿ ಪರಸ್ಪರ ಮದುವೆಯಾಗಿರುವುದಾಗಿ ಹೇಳಿಕೊಂಡಿದ್ದಾರೆ.
ಸೀಮಾ ಮತ್ತು ಸಚಿನ್ 2019 ರಲ್ಲಿ PUBG ಆಡುತ್ತಿರುವಾಗ ಸಂಪರ್ಕಕ್ಕೆ ಬಂದರು ಮತ್ತು ಅಂತಿಮವಾಗಿ ಅವರು ಭಾರತದಲ್ಲಿ ಒಟ್ಟಿಗೆ ವಾಸಿಸಲು ನಿರ್ಧರಿಸುವ ಮಟ್ಟಿಗೆ ಹತ್ತಿರವಾದರು. ಕೆಲಸದ ನಿಮಿತ್ತ ಸೌದಿ ಅರೇಬಿಯಾದಲ್ಲಿದ್ದ ಆಕೆಯ ಪತಿ ಗುಲಾಮ್ ಹೈದರ್ ಗೆ ಈ ವಿಚಾರ ತಿಳಿದಿರಲಿಲ್ಲ. ವಿಡಿಯೋ ಸಂದೇಶದಲ್ಲಿ ಗುಲಾಮ್ ಹೈದರ್ ತನ್ನ ಪತ್ನಿಯೊಂದಿಗೆ ಮತ್ತೆ ಒಂದಾಗಲು ಸಹಾಯ ಮಾಡುವಂತೆ ಭಾರತ ಸರ್ಕಾರವನ್ನು ಒತ್ತಾಯಿಸಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.