Karnataka: ರಾಜ್ಯದಲ್ಲಿ 754 ವಿದೇಶಿ ಪ್ರಜೆಗಳ ಅಕ್ರಮ ವಾಸ: ಡಾ| ಜಿ. ಪರಮೇಶ್ವರ್
Team Udayavani, Jul 14, 2023, 6:36 AM IST
ಬೆಂಗಳೂರು: ರಾಜಧಾನಿ ಬೆಂಗಳೂರು ಸಹಿತ ರಾಜ್ಯದಲ್ಲಿ 8,862 ಮಂದಿ ವಿದೇಶಿ ವೀಸಾ ಪಡೆದವರು ವಾಸಿಸುತ್ತಿದ್ದು, ಈ ಪೈಕಿ ವಿದೇಶಿ ವೀಸಾ ಅವಧಿ ಮುಗಿದ 754 ಮಂದಿ ಅಕ್ರಮವಾಗಿ ವಾಸ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಎಚ್.ಎಸ್.ಗೋಪಿನಾಥ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 2023ರ ಮೇ ಅಂತ್ಯಕ್ಕೆ 754 ಮಂದಿ ವಿದೇಶಿಯರು ವೀಸಾ ಅವಧಿ ಮುಕ್ತಾಯಗೊಂಡ ಬಳಿಕವೂ ಇಲ್ಲೇ ನೆಲೆಸಿದ್ದು, ಈ ಮಾಹಿತಿಯನ್ನು ಎಫ್ಆರ್ಆರ್ಒ ಬೆಂಗಳೂರು ಕಚೇರಿಗೆ ನೀಡಲಾಗಿದೆ. ಇವರ ಪತ್ತೆಗೆ ತಂಡಗಳನ್ನು ರಚಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಅವಧಿ ಮೀರಿ ವಾಸವಾಗುವ ವಿದೇಶಿ ಪ್ರಜೆಗಳನ್ನು ಅವರ ದೇಶದ ವಿದೇಶ ಮಂತ್ರಾಲಯಕ್ಕೆ ಮಾಹಿತಿ ನೀಡಲಾಗುತ್ತದೆ. ಗಡೀಪಾರು ಮಾಡುವ ತನಕ ಅವರನ್ನು ಡಿಟೆನ್ಷನ್ ಸೆಂಟರ್ಗಳಲ್ಲಿಡಲಾಗುತ್ತದೆ ಎಂದು ಹೇಳಿದ್ದಾರೆ.
501 ಮಂದಿ ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿ
ರಾಜ್ಯದಲ್ಲಿ 501 ವಿದೇಶಿ ಪ್ರಜೆಗಳು ಡ್ರಗ್ಸ್, ದರೋಡೆ ಮತ್ತಿತರ ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾಗಿದ್ದು, ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಇದರಲ್ಲಿ ಬೆಂಗಳೂರಿನಲ್ಲಿ ನೆಲೆಸಿದವರ ಸಂಖ್ಯೆ 451 ಆಗಿದೆ. ಅಲ್ಲದೆ ವಿದ್ಯಾರ್ಥಿ ವೀಸಾ ಅಡಿಯಲ್ಲಿ ರಾಜ್ಯದಲ್ಲಿ 4,890 ವಿದೇಶಿಯರಿದ್ದು, ಆ ಪೈಕಿ 2 ಸಾವಿರಕ್ಕೂ ಅಧಿಕ ಮಂದಿ ವೀಸಾ ಅವಧಿ ಮುಗಿದ ಬಳಿಕವೂ ಇಲ್ಲೇ ವಾಸವಾಗಿದ್ದಾರೆ. ಈ ನಿಟ್ಟಿನಲ್ಲಿ ಸರಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
MUST WATCH
ಹೊಸ ಸೇರ್ಪಡೆ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.