Israel;ವೈದ್ಯಲೋಕದ ಪವಾಡ!ಅಪಘಾತದಲ್ಲಿ ಬೇರ್ಪಟ್ಟಿದ್ದ ಬಾಲಕನ ತಲೆ ಮರುಜೋಡಣೆ ಯಶಸ್ವಿ
ವೈದ್ಯರ ತಂಡಕ್ಕೆ ಬಾಲಕನ ತಂದೆ ಕೃತಜ್ಞತೆ ತಿಳಿಸಿರುವುದಾಗಿ ಪತ್ರಿಕೆ ವರದಿ ಮಾಡಿದೆ.
Team Udayavani, Jul 14, 2023, 5:59 PM IST
ಜೆರುಸಲೇಂ: ವೈದ್ಯಕೀಯ ಕ್ಷೇತ್ರದಲ್ಲಿ ಆಗಾಗ ಅಪರೂಪದ ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿಯಾದ ಪ್ರಕರಣಗಳು ವರದಿಯಾಗುತ್ತಲೇ ಇರುತ್ತದೆ. ಇದೀಗ ಅದಕ್ಕೊಂದು ಸೇರ್ಪಡೆ ಎಂಬಂತೆ ಇಸ್ರೇಲ್ ವೈದ್ಯರ ತಂಡವೊಂದು ಅಪಘಾತದಲ್ಲಿ ಮುರಿದಿದ್ದ 12 ವರ್ಷದ ಬಾಲಕನ ತಲೆಯನ್ನು ತೀರಾ ಅಸಾಮಾನ್ಯವಾದ ಮತ್ತು ಕ್ಲಿಷ್ಟಕರ ಶಸ್ತ್ರಚಿಕಿತ್ಸೆ ಮೂಲಕ ಮರುಜೋಡಿಸುವಲ್ಲಿ ಯಶಸ್ವಿಯಾಗಿದೆ.
ಇದನ್ನೂ ಓದಿ:Russia; ವ್ಯಾಗ್ನರ್ ಮಿಲಿಟರಿ ಕಂಪನಿಯೇ ಈಗ ಅಸ್ತಿತ್ವದಲ್ಲಿಲ್ಲ ಎಂದ ಪುಟಿನ್
ದಿ ಟೈಮ್ಸ್ ಆಫ್ ಇಸ್ರೇಲ್ ಪತ್ರಿಕೆ ವರದಿ ಪ್ರಕಾರ, ಸೈಕಲ್ ಸವಾರಿ ಮಾಡುತ್ತಿದ್ದ 12 ವರ್ಷದ ಸುಲೈಮಾನ್ ಹನನ್ ಎಂಬ ಬಾಲಕನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ, ಕುತ್ತಿಗೆಯ ಒಳಭಾಗ ಬೆನ್ನುಮೂಳೆಯು ಕಶೇರುಖಂಡದಿಂದ ಬೇರ್ಪಟ್ಟಿತ್ತು. ಈ ಸ್ಥಿತಿಯನ್ನು ವೈಜ್ಞಾನಿಕವಾಗಿ ಬೈಲೇಟರಲ್ ಅಟ್ಲಾಂಟೊ ಆಕ್ಸಿಪಿಟಲ್ ಜಾಯಿಂಟ್ ಡಿಸ್ ಲೊಕೇಶನ್ ಎಂದು ಕರೆಯಲಾಗುತ್ತದೆ.
ಅಪಘಾತ ಸಂಭವಿಸಿದ್ದ ಕೂಡಲೇ ಬಾಲಕನನ್ನು ತುರ್ತುಶಸ್ತ್ರಚಿಕಿತ್ಸೆಗಾಗಿ ಹದಾಸ್ಸ್ ಮೆಡಿಕಲ್ ಸೆಂಟರ್ ಗೆ ಏರ್ ಲಿಫ್ಟ್ ಮಾಡಲಾಗಿತ್ತು. ಇಸ್ರೇಲ್ ವೈದ್ಯರ ಮಾಹಿತಿ ಪ್ರಕಾರ, ಅಪಘಾತದಲ್ಲಿ ಬಾಲಕನ ಕುತ್ತಿಗೆ ಸಂಪೂರ್ಣವಾಗಿ ಕಶೇರುಖಂಡದಿಂದ ಬೇರ್ಪಟ್ಟಿತ್ತು ಎಂದು ತಿಳಿಸಿದ್ದಾರೆ.
ತಜ್ಞ ಮೂಳೆ ಶಸ್ತ್ರಚಿಕಿತ್ಸ ವೈದ್ಯ ಓಹಾದ್ ಇನಾವ್ ಹಾಗೂ ಅವರ ತಂಡ, ಹಲವು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ, ಜಖಂಗೊಂಡಿದ್ದ ಕುತ್ತಿಗೆಯ ಒಳಭಾಗದಲ್ಲಿ ಹೊಸ ಪ್ಲೇಟ್ಸ್ ಗಳನ್ನು ಕೂರಿಸಲಾಗಿತ್ತು. ನಮ್ಮ ವೈದ್ಯಕೀಯ ಜ್ಞಾನ ಮತ್ತು ನೂತನ ತಂತ್ರಜ್ಞಾನದಿಂದಾಗಿ ಬಾಲಕನ ಜೀವ ಉಳಿಸಲು ಸಾಧ್ಯವಾಗಿರುವುದಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ದಿ ಟೈಮ್ಸ್ ಆಫ್ ಇಸ್ರೇಲ್ ಪತ್ರಿಕೆ ಜೊತೆ ಮಾತನಾಡುತ್ತ ತಿಳಿಸಿದ್ದಾರೆ.
ಪವಾಡವಾದರೂ ಕೂಡಾ ಆ ಬಾಲಕ ಜೀವಂತವಾಗಿ ಉಳಿಯುವುದು ಕೇವಲ ಶೇ.50ರಷ್ಟು ಎಂಬುದಾಗಿ ವೈದ್ಯರು ನಂಬಿದ್ದರು. ಈ ಶಸ್ತ್ರಚಿಕಿತ್ಸೆ ನಡೆದದ್ದು ಕಳೆದ ತಿಂಗಳು..ಆದರೆ ಬಾಲಕನ ಆರೋಗ್ಯದ ಸ್ಥಿತಿಗತಿ ಗಮನಿಸಿದ ನಂತರ ವೈದ್ಯರು ಇದೀಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿರುವ ಬಗ್ಗೆ ಅಧಿಕೃತವಾಗಿ ಘೋಷಿಸಿದ್ದಾರೆ.
ತನ್ನ ಒಬ್ಬನೇ ಮಗನ ಪ್ರಾಣ ಉಳಿಸಿದ ವೈದ್ಯರಿಗೆ ತಂದೆ ಕೃತಜ್ಞತೆ ಸಲ್ಲಿಸಿದ್ದಾರೆ. ನಿಮ್ಮ ವೃತ್ತಿ ಧರ್ಮ, ತಂತ್ರಜ್ಞಾನ ಮತ್ತು ತುರ್ತು ನಿರ್ಧಾರದ ಪರಿಣಾಮ ಮಗನ ಪ್ರಾಣ ಉಳಿಸಿದ ವೈದ್ಯರ ತಂಡಕ್ಕೆ ಬಾಲಕನ ತಂದೆ ಕೃತಜ್ಞತೆ ತಿಳಿಸಿರುವುದಾಗಿ ಪತ್ರಿಕೆ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ
Mother: ತಾಯಂದಿರ ಮಾನಸಿಕ ಆರೋಗ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.