Goa: ಬಿಚೋಲಿಯ ನದಿ ದಡದಲ್ಲಿ ದೊಡ್ಡ ಗಾತ್ರದ ಮೊಸಳೆ ಪ್ರತ್ಯಕ್ಷ- ಸ್ಥಳೀಯರಲ್ಲಿ ಆತಂಕ
Team Udayavani, Jul 14, 2023, 6:19 PM IST
ಪಣಜಿ: ಗೋವಾ ಬಿಚೋಲಿಯ ನದಿಯ ದಡದಲ್ಲಿ ದೊಡ್ಡ ಮೊಸಳೆಯೊಂದು ಕಾಣಿಸಿಕೊಂಡಿದ್ದು, ಜನವಸತಿ ಪ್ರದೇಶದಲ್ಲಿ ಮೊಸಳೆ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆ.
ಶುಕ್ರವಾರ ಮಧ್ಯಾಹ್ನ ನದಿ ದಡದಲ್ಲಿ ಮೊಸಳೆ ಕಾಣಿಸಿಕೊಂಡಿದ್ದು, ಈ ಮೊಸಳೆಯನ್ನು ವಿದ್ಯಾರ್ಥಿಗಳು ಹಾಗೂ ನಾಗರಿಕರು ನೋಡಿದ್ದಾರೆ. ಈ ಹಿಂದೆ ಮೊಸಳೆಗಳು ಈ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದವು. ಬಿಚೋಲಿಯ ನದಿ ದಡ ಪ್ರದೇಶವು ಹಿರಿಯರಿಂದ ಹಿಡಿದು ಕಿರಿಯರ ವರೆಗೂ ಓಡಾಟ ಹೆಚ್ಚಾಗಿರುವ ಸ್ಥಳವಾಗಿದೆ. ಇದೀಗ ದೊಡ್ಡ ಮೊಸಳೆ ಈ ನದಿಯ ದಡ ಪ್ರದೇಶದಲ್ಲಿ ಪ್ರತ್ಯಕ್ಷವಾಗಿರುವುದು ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ.
ಈ ಭಾಗವು ಜನರ ಓಡಾಟವಿರುವ ಸ್ಥಳವಾಗಿರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಮೊಸಳೆಯನ್ನು ಹಿಡಿದು ಸುರಕ್ಷಿತ ವಾಸಕ್ಕೆ ಬಿಡಬೇಕು ಎಂದು ಸ್ಥಳೀಯರು ಆಘ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.