Karnataka: ಹಾಲಿನ ಪ್ರೋತ್ಸಾಹ ಧನ ಬಾಕಿ: ಸಚಿವ ಕೆ.ವೆಂಕಟೇಶ್ ಒಪ್ಪಿಗೆ
Team Udayavani, Jul 15, 2023, 7:50 AM IST
ಬೆಂಗಳೂರು: ಹಾಲಿನ ದರ ಹೆಚ್ಚಳಕ್ಕೆ ಆತುರ ತೋರುತ್ತಿರುವ ಸರಕಾರ, ರೈತರಿಗೆ ನೀಡಬೇಕಾದ ಹಾಲಿನ ಪ್ರೋತ್ಸಾಹ ಧನಕ್ಕೆ ಅನುದಾನ ಬಿಡುಗಡೆ ಮಾಡಲು ಹಿಂದು ಮುಂದು ನೋಡುತ್ತಿದೆ.
ಮಾಲೂರು ಶಾಸಕ ಕೆ.ವೈ. ನಂಜೇಗೌಡ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಅವರು ಈ ಸತ್ಯವನ್ನು ಒಪ್ಪಿಕೊಂಡಿದ್ದು, ಮಾರ್ಚ್ ತಿಂಗಳ ಪ್ರೋತ್ಸಾಹ ಧನ ಇದುವರೆಗೆ ಬಿಡುಗಡೆ ಆಗಿಲ್ಲ. ಆಗಸ್ಟ್ ತಿಂಗಳಲ್ಲಿ ಎರಡನೇ ಕಂತಿನ ಅನುದಾನ ಬಿಡುಗಡೆಯಾದ ಬಳಿಕ ಮಾರ್ಚ್ ತಿಂಗಳ ಪ್ರೋತ್ಸಾಹಧನ ಕೊಡುವುದಾಗಿ ಹೇಳಿದ್ದಾರೆ.
ರಾಜ್ಯದ 15,515 ಹಾಲು ಉತ್ಪಾದಕರ ಸಂಘಗಳಿಂದ ಪ್ರತಿ ತಿಂಗಳ 30ನೇ ತಾರೀಕಿನವರೆಗೆ ಪೂರೈಕೆಯಾದ ಹಾಲಿನ ಪ್ರಮಾಣ ಮತ್ತಿತರ ವಿವರಗಳು ಮುಂದಿನ ತಿಂಗಳ 20ರ ವೇಳೆಗೆ ಕ್ಷೀರಸಿರಿ ಮೂಲಕ ಕೆಎಂಎಫ್ಗೆ ತಲುಪುತ್ತದೆ. ಬಳಿಕ ಖಜಾನೆ-2ಕ್ಕೆ ಬಿಲ್‌ಗಳನ್ನು ಕಳುಹಿಸಿದ ಮಂಜೂರಾತಿ ಆದೇಶ ಪಡೆದು ಪಾವತಿಗೆ ಕ್ರಮ ವಹಿಸುವುದರಿಂದ ವಿಳಂಬವಾಗುತ್ತದೆ. ಪ್ರಸಕ್ತ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆಂದು ಸರಕಾರ ಮೊದಲ ಕಂತಿನಲ್ಲಿ ಬಿಡುಗಡೆ ಮಾಡಿದ್ದ ಹಣ ಖರ್ಚಾಗಿದ್ದು, ಎರಡನೇ ಕಂತಿನ ಅನುದಾನಕ್ಕಾಗಿ ಕಾಯುತ್ತಿದ್ದೇವೆ. ಇದು ಆಗಸ್ಟ್‌ನಲ್ಲಿ ಬಿಡುಗಡೆಯಾಗಲಿದ್ದು, ಬಾಕಿ ಪ್ರೋತ್ಸಾಹಧನವನ್ನು ಪಾವತಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.
ಬೇಕಿದೆ 10 ಕೋಟಿ ರೂ. ಹೆಚ್ಚುವರಿ ಅನುದಾನ
ತಿಂಗಳಿಗೆ 7.56 ಲಕ್ಷ ಹಾಲು ಉತ್ಪಾದಕರು 1,900 ಲಕ್ಷ ಲೀಟರ್‌ನಷ್ಟು ಹಾಲನ್ನು ಕೆಎಂಎಫ್ಗೆ ಪೂರೈಸುತ್ತಿದ್ದಾರೆ. ಇಷ್ಟು ರೈತರಿಗೆ ಪ್ರೋತ್ಸಾಹಧನ ನೀಡಲು ಮಾಸಿಕ ಕನಿಷ್ಠ 90 ಕೋಟಿ ರೂ. ಬೇಕಾಗುತ್ತದೆ. 2023-24 ನೇ ಸಾಲಿಗೆ ಸಾಮಾನ್ಯ ವರ್ಗದಡಿ ರೈತರಿಗೆ ಪ್ರೋತ್ಸಾಹಧನ ನೀಡಲು 1080 ಕೋಟಿ ರೂ.ಗಳನ್ನು ನಿಗದಿಪಡಿಸಿದೆ. ಆದರೆ, ಸಾಮಾನ್ಯ ವರ್ಗದಡಿ ಫಲಾನುಭವಿಗಳ ಸಂಖ್ಯೆ ಹೆಚ್ಚಾಗಿದ್ದು, ಮಾಸಿಕ ಪ್ರೋತ್ಸಾಹ ಧನವು 100 ಕೋಟಿ ರೂ.ವರೆಗೆ ಏರುತ್ತಿದೆ. ಅನುದಾನದ ಕೊರತೆ ಇರುವುದರಿಂದ ಹೆಚ್ಚುವರಿ ಅನುದಾನ ಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.