ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸಿದ ಮುಮ್ಮಡಿ ಒಡೆಯರ್‌  


Team Udayavani, Jul 15, 2023, 1:59 PM IST

ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸಿದ ಮುಮ್ಮಡಿ ಒಡೆಯರ್‌  

ಚಾಮರಾಜನಗರ: ಮೈಸೂರು ಮಹಾರಾಜರಾದ ಮುಮ್ಮಡಿ ಕೃಷ್ಣರಾಜ ಒಡೆಯರ್‌ ಅವರು ಸುದೀರ್ಘ‌ ಆಳ್ವಿಕೆ ನಡೆಸಿ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸಿದ ಶ್ರೇಷ್ಠರು ಎಂದು ಲೇಖಕ, ವೈದ್ಯ ಡಾ. ಗುರುಕಿರಣ್‌ ಹೇಳಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನಗರದಲ್ಲಿ ಏರ್ಪಡಿಸಿದ್ದ ಮುಮ್ಮಡಿ ಕೃಷ್ಣರಾಜ ಒಡೆಯರ್‌ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸುಗಮ ಸಂಚಾರಕ್ಕೆ ಅವಕಾಶ: ಸಂಸ್ಥಾನದಲ್ಲಿ ಸಾರ್ವಜನಿಕ ಪ್ರಾಥಮಿಕ ವೈದ್ಯಕೀಯ ಸೇವೆಯನ್ನು ಸ್ಥಾಪನೆ ಮಾಡುವ ಮೂಲಕ ಮೊಟ್ಟಮೊದಲಿಗೆ ಆಧುನಿಕ ವೈದ್ಯ ಪದ್ಧತಿ ನೀಡಿದರು. ಕಾವೇರಿ ನದಿಗೆ ಶಿವನಸಮುದ್ರದ ಬಳಿ ಸೇತುವೆ ನಿರ್ಮಾಣ ಮಾಡಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿದವರು. ಒಡೆಯರ ಕಾಲದಲ್ಲಿ ಮೈಸೂರು ಸಂಸ್ಥಾನ ವಿಶ್ವವಿಖ್ಯಾತಿ ಹೊಂದಿತುಡ ಸಾಹಿತ್ಯ ಪರಿಷತ್ತು ಅವರನ್ನು ನೆನೆಯುವ ಮೂಲಕ ಉತ್ತಮ ಕಾರ್ಯವನ್ನು ಮಾಡಿದೆ ಎಂದು ತಿಳಿಸಿದರು.

59 ಗ್ರಂಥಗಳ ರಚನೆ ಮಾಡಿದ್ರು: ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸುರೇಶ್‌ ಎನ್‌ ಋಗ್ವೇದಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಮ್ಮಡಿ ಕೃಷ್ಣರಾಜ ಒಡೆಯರ್‌ ಆಡಳಿತಗಾರರು. ಅಷ್ಟೇ ಅಲ್ಲದೆ ಕವಿಗಳು. ಕನ್ನಡ ಮತ್ತು ಸಂಸ್ಕೃತದ ವಿದ್ವಾಂಸರಾಗಿ 59 ಗ್ರಂಥಗಳ ರಚನೆ ಮಾಡಿ ದೇಶ ವಿದೇಶಗಳ ಕಲಾವಿದರನ್ನು ಮೈಸೂರು ಸಂಸ್ಥಾನಕ್ಕೆ ಆಹ್ವಾನಿಸಿ ದರ್ಬಾರ್‌ ಹಾಲಿನಲ್ಲಿ ಸಂಗೀತ ಕಚೇರಿಗಳನ್ನು ಏರ್ಪಡಿಸುವ ಮೂಲಕ ಕಲೆ, ಸಾಹಿತ್ಯ ಸಂಗೀತಕ್ಕೆ ಅಪಾರ ಕೊಡುಗೆ ನೀಡಿದವರು.

ವೀಣೆ ವೆಂಕಟ ಸುಬ್ಬಯ್ಯ,ಕುಣಿಗಲ್‌ ರಾಮಾ ಶಾಸ್ತ್ರಿ, ಸೋಸಲೆ ಗರಳ ಪುರಿ ಶಾಸ್ತ್ರಿ, ಬಸವಪ್ಪ ಶಾಸ್ತ್ರಿ ,ಕೆಂಪುನಾರಾಯಣ ಮುಂತಾದ ಶ್ರೇಷ್ಠ ವಿದ್ವಾಂಸರಿಗೆ ಆಶ್ರಯ ನೀಡಿದವರು . ಸಂಗೀತಗಾರರು ,ಲೇಖಕರು ಕಲಾಕಾರರು, ಸಾಹಿತಿಗಳು, ವೇದ ವಿದ್ವಾಂಸರು, ಆಡಳಿತಗಾರರು, ಸರ್ವ ಜನರಿಗೆ ಆಶ್ರಯ ನೀಡಿದ ಕೃಷ್ಣರಾಜ ಒಡೆಯರ್‌ ಅವರನ್ನು ನೆನೆಸಿಕೊಳ್ಳುವುದೇ ಒಂದು ಪುಣ್ಯದ ಕೆಲಸವೆಂದು ತಿಳಿಸಿದರು.

ಆಹಾರ ಕ್ರಾಂತಿ ಮಾಡಿದವರು ಮುಮ್ಮಡಿ: ಕನ್ನಡ ಮಹಾಸಭಾ ಅಧ್ಯಕ್ಷ ಚಾರಂ ಶ್ರೀನಿವಾಸ್‌ ಗೌಡ ಮಾತನಾಡಿ ಅರಿ ಕೊಠಾರಕ್ಕೆ ಚಾಮರಾಜನಗರದ ಹೆಸರನ್ನು ಇಟ್ಟವರು ಮುಮ್ಮಡಿ ಕೃಷ್ಣರಾಜ ಒಡೆಯರ್‌. ತಮ್ಮ ಆಳ್ವಿಕೆಯ ಸಂದರ್ಭದಲ್ಲಿ ಮೈಸೂರು ,ಮಂಡ್ಯ, ಚಾಮರಾಜನಗರ ಸುತ್ತಮುತ್ತಲಿನ ಭಾಗಗಳಿಗೆ ನೀರಾವರಿ ಮೂಲಕ ಕೃಷಿ ಭೂಮಿಯನ್ನಾಗಿ ಪರಿವರ್ತಿಸಿ ಆಹಾರ ಕ್ರಾಂತಿ ಮಾಡಿದವರು ಮುಮ್ಮಡಿ ಕೃಷ್ಣರಾಜ ಒಡೆಯರ್‌ ಎಂದರು. ‌

ಕಾರ್ಯಕ್ರಮದಲ್ಲಿ ವಕೀಲೆ ಎಂಪಿ ನಾಗಲಕ್ಷ್ಮೀ, ಪ್ರಫ‌ುಲ್ಲ ಗುರುಕಿರಣ್ ಕಸಾಪ ಕೋಶಾಧ್ಯಕ್ಷ ಮಹದೇವಪ್ಪ, ನಿರ್ದೇಶಕರಾದ ಬಿಕೆ ಆರಾಧ್ಯ ,ರವಿಚಂದ್ರ ಪ್ರಸಾದ್‌, ಸರಸ್ವತಿ, ಕನ್ನಡ ಹೋರಾಟಗಾರರಾದ ಪುಟ್ಟಸ್ವಾಮಿ, ಋಗ್ವೇದಿ ಯೂತ್‌ ಕ್ಲಬ್‌ ನ ಶ್ರಾವ್ಯ ಋಗ್ವೇದಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿ ಆನೆ ದಾಳಿ:ವಿಡಿಯೋ ವೈರಲ್

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

Siddapura: ಬುಲೆಟ್‌ ಬೈಕಿಗೆ ಜೆಸಿಬಿ ಡಿಕ್ಕಿ; ಸವಾರರಿಗೆ ಗಾಯ

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Amparu: ಬೈಕ್‌ ಸ್ಕಿಡ್‌; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು

Amparu: ಬೈಕ್‌ ಸ್ಕಿಡ್‌; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು

KAUP: ಸಂವಿಧಾನ ಉಳಿಸಿ ಬೃಹತ್‌ ಜಾಥಾ ಮತ್ತು ಸಾರ್ವಜನಿಕ ಸಭೆ

KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್‌ ರಾಜ್‌ ಮೌರ್ಯ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.