Jail: ಮತ್ತೊಂದು ಪ್ರಕರಣದಲ್ಲಿ ಅಜಂ ಖಾನ್ ಗೆ 2 ವರ್ಷ ಜೈಲು
Team Udayavani, Jul 15, 2023, 5:53 PM IST
ಲಕ್ನೋ : 2019 ರ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ನ್ಯಾಯಾಧೀಶ ಶೋಭಿತ್ ಬನ್ಸಾಲ್ ಅವರು ಖಾನ್ ಅವರನ್ನು ಅಪರಾಧಿ ಎಂದು ಘೋಷಿಸಿ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು 2500 ರೂ. ದಂಡವನ್ನು ವಿಧಿಸಿದರು.
2019 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಅದೇ ವರ್ಷ ಎಪ್ರಿಲ್ 8 ರಂದು ಧಮೋರಾ ಪ್ರದೇಶದಲ್ಲಿ ನಡೆದ ರ್ಯಾಲಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಖಾನ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಳೆದ ವರ್ಷ ಖಾನ್ ಅವರನ್ನು ಮಿಲಾಕ್ ಕೊತ್ವಾಲಿ ಪ್ರದೇಶದ ಖತಾನಗಾರಿಯಾ ಗ್ರಾಮದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ನಂತರ ದಾಖಲಾಗಿದ್ದ 2019 ರ ಮತ್ತೊಂದು ದ್ವೇಷ ಭಾಷಣ ಪ್ರಕರಣದಲ್ಲಿ ದೋಷಿ ಎಂದು ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ನಂತರ ಅವರನ್ನು ಯುಪಿ ವಿಧಾನಸಭೆಯಿಂದ ಅನರ್ಹಗೊಳಿಸಲಾಗಿತ್ತು. ಈ ವರ್ಷ ಮೇ ತಿಂಗಳಿಲ್ಲಿ ಸೆಷನ್ಸ್ ನ್ಯಾಯಾಲಯವು ಕೆಳ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.