ಗ್ಯಾರಂಟಿ ಯೋಜನೆ ಭರವಸೆ ನೀಡಿ ಬಿಜೆಪಿಯನ್ನು ಸೋಲಿಸಿದ್ದೇವೆ: ಮಾಜಿ ಸಚಿವ ಆರ್.ವಿ.ದೇಶಪಾಂಡೆ
Team Udayavani, Jul 15, 2023, 7:41 PM IST
ಕಾರವಾರ: ಶಕ್ತಿ, ಗೃಹ ಲಕ್ಷ್ಮಿ ಸೇರಿದಂತೆ ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದೆ. ವಿರೋಧ ಪಕ್ಷದವರು ಇದನ್ನೆಲ್ಲ ಮೆಚ್ಚಬೇಕು ಎಂದು ಹಾಲಿ ಶಾಸಕ, ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅಭಿಪ್ರಾಯಪಟ್ಟರು.
ಕಾರವಾರದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಈವರೆಗೂ ಪೂರ್ಣಗೊಂಡಿಲ್ಲ. ಸುರಂಗ ಮಾರ್ಗ ಸಂಚಾರ ಆರಂಭಿಸಿ ಪುನಃ ಸ್ಥಗಿತಗೊಳಿಸುವ ಸ್ಥಿತಿ ಬಂದಿದೆ. ಕೆಲಸವೂ ಸರಿಯಾಗಿಲ್ಲ ಎಂದರು.
ಕೇಂದ್ರ ಸರ್ಕಾರ ಕೈಗೊಂಡ ಯೋಜನೆ ಇದು. ಗುಣಮಟ್ಟದ ರಸ್ತೆ ಆಗಿಲ್ಲ. ಟೋಲ್ ಸಂಗ್ರಹಕ್ಕೆ ಕೆಲಸ ಮುಗಿಯುವ ಮೊದಲೇ ಆರಂಭಿಸಿದ್ದು ಸರಿಯಾದ ಕ್ರಮವಲ್ಲ. ಇದು ಕಾನೂನುಬಾಹೀರ ಕ್ರಮ ಎಂದು ಪರಿಗಣಿಸಬೇಕಾಗುತ್ತದೆ. ಇದರಲ್ಲಿ ರಾಜ್ಯ ಸರ್ಕಾರದ ಪಾತ್ರವೇನೂ ಇಲ್ಲ ಎಂದರು.
ಇದನ್ನೂ ಓದಿ:ಪ್ರತಿಯೊಬ್ಬ ಭಾರತೀಯನು ನಿಮ್ಮನ್ನು ಸ್ನೇಹಿತನಂತೆ ಕಾಣುತ್ತಾನೆ: ಯುಎಇ ಅಧ್ಯಕ್ಷರಿಗೆ ಮೋದಿ
ಟೆಂಡರ್ ಒಡಂಬಡಿಕೆ ಪ್ರಕಾರ ಕೆಲಸ ಮುಗಿಸಬೇಕಿತ್ತು. ಆದರೆ ಒಡಂಬಡಿಕೆ ನಿಯಮ ಮುರಿದ ಕಾರಣ ಟೋಲ್ ಸಂಗ್ರಹ ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ದೇಶಪಾಂಡೆ ಆಗ್ರಹಿಸಿದರು.
ಈ ಬಗ್ಗೆ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರವನ್ನೂ ಬರೆಯುತ್ತೇನೆ ಎಂದರು.
ಯಲ್ಲಾಪುರ, ಶಿರಸಿ, ಹಳಿಯಾಳ, ಮುಂಡಗೋಡ, ದಾಂಡೇಲಿ, ಜೊಯಿಡಾದಲ್ಲಿ ಮಳೆ ಕಡಿಮೆ ಇದೆ. ಮಳೆಯಿಂದ ಸಾರ್ವಜನಿಕ ಆಸ್ತಿಪಾಸ್ತಿಗೆ ಆದ ಹಾನಿಗೆ ಪರಿಹಾರ ತ್ವರಿತವಾಗಿ ನೀಡಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದರು.
ಜೊಯಿಡಾ ಅಣಶಿ ಭಾಗದಲ್ಲಿ ಅಡಿಕೆ ತೋಟ ನಾಶ ಪಡಿಸಲಾಗಿದೆ. ಜಮೀನಿಗೆ ಪರಿಹಾರ ನೀಡದೆ ಹಾಳು ಮಾಡಿದ್ದಾರೆ. ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳಲಾಗಿದೆ. ಮರಗಳನ್ನು ಹಾಳು ಮಾಡಬಾರದು ಎಂದರು
ಕಾರವಾರದ ಮುಡಗೇರಿ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ಮೂರು ಬಾರಿ ಅಭಿವೃದ್ಧಿಗೆ ಟೆಂಡರ್ ಕರೆದರೂ ಕೆಲಸ ಆರಂಭವಾಗಿಲ್ಲ. ಭೂಸ್ವಾಧೀನಕ್ಕೆ ಸೂಕ್ತ ಪರಿಹಾರ ನೀಡಿರಲಿಲ್ಲ. ಚುನಾವಣೆ ಹೊತ್ತಲ್ಲಿ ಪ್ರಚಾರಕ್ಕೆ ಚೆಕ್ ನೀಡಿದ್ದರು. ಆದರೆ ಈವರೆಗೆ ಪರಿಹಾರ ನೀಡಿಲ್ಲ ಎಂದರು.
ನಿಮ್ಮನ್ನು ಯಾಕೆ ಸಚಿವರನ್ನಾಗಿ ಮಾಡಲಿಲ್ಲ ಎಂಬ ಪ್ರಶ್ನೆಗೆ ಹಾಸ್ಯ ಚಟಾಕಿ ಹಾರಿಸಿದ ಅವರು ನನ್ನ ಮುಂದೆ ಮುಖ್ಯಮಂತ್ರಿ ಮಾಡುವ ಉದ್ದೇಶದಿಂದ ಸಚಿವ ಸ್ಥಾನ ಕೊಟ್ಟಿಲ್ಲ ಎಂದು ನಗುತ್ತಲೇ ಹೇಳಿದರು .
ಕಾಂಗ್ರೆಸ್ ಪ್ರಮುಖರಾದ ರಮಾನಂದ ನಾಯಕ, ಕೆ.ಎಚ್.ಗೌಡ, ಸಮೀರ ನಾಯ್ಕ, ಕೆ.ಶಂಭು ಶೆಟ್ಟಿ, ಪಾಂಡುರಂಗ ಗೌಡ , ಜಿಲ್ಲಾ ಘಟಕದ ಅಧ್ಯಕ್ಷ ಸಾಯಿ ಗಾಂವಕರ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಮಾದಕ ವಸ್ತು ಸೇವನೆ ಆರೋಪ: ಯುವಕ ವಶಕ್ಕೆ
Writer’s audition: ಬರಹಗಾರರಾಗುವ ನಿಮ್ಮ ಕನಸನ್ನು ನನಸಾಗಿಸಲು ಇಲ್ಲಿದೆ ಉತ್ತಮ ವೇದಿಕೆ
Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ
Ayodhya: ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.