ವಿಪಕ್ಷ ಮೈತ್ರಿಕೂಟದ ಸಭೆಗಿಲ್ಲ JDS- ಬಿಜೆಪಿಯತ್ತ ಸೆಳೆತ

- ದಿಲ್ಲಿಯಲ್ಲಿ ಜು. 18ರ ಎನ್‌ಡಿಎ ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ

Team Udayavani, Jul 16, 2023, 7:51 AM IST

H D KUMARASWAMY

ಬೆಂಗಳೂರು: ಪಕ್ಷದ ಉಳಿವಿನ ದೃಷ್ಟಿಯಿಂದ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಸಖ್ಯ ಬೇಡ ಎಂದು ನಿರ್ಧರಿಸಿರುವ ಜೆಡಿಎಸ್‌, ಬೆಂಗಳೂರಿನಲ್ಲಿ ಜುಲೈ 17, 18ರಂದು ನಡೆಯಲಿರುವ ಮಹಾ ಘಟಬಂಧನ ಸಭೆಗೆ ಹಾಜರಾಗದೇ ಇರಲು ನಿರ್ಧರಿಸಿದೆ. ಆದರೆ 18ರಂದು ದಿಲ್ಲಿಯಲ್ಲಿ ನಡೆಯುವ ಎನ್‌ಡಿಎ ಮೈತ್ರಿಕೂಟದ ಸಭೆಗೆ ಹಾಜರಾಗುವ ಸಾಧ್ಯತೆ ದಟ್ಟವಾಗಿದೆ.

ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಶನಿವಾರ ಸಂಜೆ ದಿಲ್ಲಿಗೆ ತೆರಳುವ ಬಗ್ಗೆ ಈಗಾಗಲೇ ದಿನಾಂಕ ನಿಗದಿಯಾಗಿತ್ತು. ಆದರೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಜತೆ ಚರ್ಚೆ ನಡೆಸಿದ ಬಳಿಕ ಕುಮಾರಸ್ವಾಮಿ ತಮ್ಮ ನಡೆಯಲ್ಲಿ ಕೊಂಚ ಬದಲಾವಣೆ ಮಾಡಿಕೊಂಡಿದ್ದಾರೆ. ಎನ್‌ಡಿಎ ಮೈತ್ರಿಕೂಟದ ಸಭೆಯಲ್ಲಿ ಭಾಗಿಯಾಗಿ ಎಂದು ಬಿಜೆಪಿಯಿಂದ ಅಧಿಕೃತ ಆಹ್ವಾನ ಬಂದರೆ ಮಾತ್ರ ದಿಲ್ಲಿಗೆ ಹೋಗು ಎಂದು ದೇವೇಗೌಡರು ನೀಡಿದ ಸಲಹೆ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ದಿಲ್ಲಿ ಪ್ರವಾಸ ರದ್ದಾಗಿದೆ ಎಂದು ತಿಳಿದು ಬಂದಿದೆ.

ಈ ಹಿಂದೆ ರಾಜ್ಯದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರ ರಚನೆಯಾದ ಸಂದರ್ಭದಲ್ಲಿ ಬಿಜೆಪಿಯೇತರ ಪಕ್ಷಗಳ ಜತೆಗೆ ಗುರುತಿಸಿಕೊಂಡಿದ್ದ ಜೆಡಿಎಸ್‌ ಎನ್‌ಡಿಎ ಮೈತ್ರಿಕೂಟದಿಂದ ದೂರವುಳಿದಿತ್ತು. ಆದರೆ ಈ ಬಾರಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪರಿಸ್ಥಿತಿ ಬದಲಾಗಿದ್ದು, ಕಾಂಗ್ರೆಸ್‌ ಇರುವ ಮೈತ್ರಿಕೂಟದಲ್ಲಿ ಯಾವುದೇ ಕಾರಣಕ್ಕೂ ಗುರುತಿಸಿಕೊಳ್ಳಬಾರದೆಂದು ಜೆಡಿಎಸ್‌ ನಿರ್ಧರಿಸಿದೆ. ಹೀಗಾಗಿ ಮಮತಾ ಬ್ಯಾನರ್ಜಿ, ಲಾಲು ಪ್ರಸಾದ್‌ ಯಾದವ್‌, ನಿತೀಶ್‌ ಕುಮಾರ್‌ ಮೊದಲಾದವರ ಸಾಂಗತ್ಯ ಮಹಾಘಟಬಂಧನಕ್ಕೆ ಇದ್ದರೂ ಜಾತ್ಯತೀತ ಜನತಾ ದಳ ದೂರವೇ ಉಳಿಯಲಿದೆ.

ಮಹಾಘಟಬಂಧನ ಸಭೆಗೆ ಹಾಜರಾಗುವಂತೆ ನಮಗೆ ಇದುವರೆಗೆ ಆಹ್ವಾನವೇ ಬಂದಿಲ್ಲ. ಹೀಗಾಗಿ ಹೋಗುವ ಪ್ರಶ್ನೆಯೇ ಇಲ್ಲ ಎಂದು ಕುಮಾರಸ್ವಾಮಿ ತಮ್ಮ ಆಪ್ತರ ಜತೆ ಹೇಳಿಕೊಂಡಿದ್ದಾರೆ. ಆದರೆ ಎನ್‌ಡಿಎ ಮೈತ್ರಿಕೂಟದ ಸಭೆಯ ಅಧಿಕೃತ ಆಹ್ವಾನಕ್ಕೆ ಮಾತ್ರ ಜೆಡಿಎಸ್‌ ಇದಿರು ನೋಡುತ್ತಿದೆ. ಆದಾಗಿಯೂ ಮೈತ್ರಿ ಪ್ರಸ್ತಾಪದಿಂದ ಜೆಡಿಎಸ್‌ ಬಲವೃದ್ಧಿಗೆ ಅನುಕೂಲವಾಗುವುದಿದ್ದರೆ ಮಾತ್ರ ಆ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಹೇಳಲಾಗಿದೆ.

ಬಿಜೆಪಿಯಿಂದ ಅಪಸ್ವರ : ಆದರೆ ರಾಜ್ಯ ಬಿಜೆಪಿ ನಾಯಕರು ಮಾತ್ರ ಮೈತ್ರಿ ವಿಚಾರದಲ್ಲಿ ತುಸು ಭಿನ್ನ ನಿಲುವು ಹೊಂದಿದ್ದಾರೆ. ಲೋಕಸಭಾ ದೃಷ್ಟಿಯಿಂದ ಜೆಡಿಎಸ್‌ ಜತೆಗೆ ಹೊಂದಾಣಿಕೆ ಅನುಕೂಲ ಸೃಷ್ಟಿಸಿದರೂ ರಾಜ್ಯ ರಾಜಕಾರಣದ ದೃಷ್ಟಿಯಿಂದ ಭವಿಷ್ಯದಲ್ಲಿ ಅದು ಬಿಜೆಪಿಗೆ ಅನನುಕೂಲ ಸೃಷ್ಟಿಸಲಿದೆ. ಈಗ ಸೋತು ಸೊರಗಿರುವ ಬಿಜೆಪಿಗೆ ಎನ್‌ಡಿಎ ಮೈತ್ರಿಯಿಂದ ಮುಂದಿನ ಐದು ವರ್ಷದಲ್ಲಿ ಬಲ ಲಭಿಸುತ್ತದೆ. ಆದರೆ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅತಂತ್ರ ಸೃಷ್ಟಿಯಾದರೆ ಆಗ ಜೆಡಿಎಸ್‌ ಬಣ್ಣ ಬದಲಿಸುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ರಾಜಕೀಯ “ಅನಿವಾರ್ಯತೆ’ಯಲ್ಲಿ ಸಿಲುಕಿರುವ ಜೆಡಿಎಸ್‌ ಬಿಜೆಪಿಯಲ್ಲಿ ವಿಲೀನವಾಗುವುದೇ ಸೂಕ್ತ ಎಂಬ ಪ್ರಸ್ತಾಪ ಮುಂದಿಡುವಂತೆ ರಾಷ್ಟ್ರೀಯ ನಾಯಕರಿಗೆ ಮನವರಿಕೆ ಮಾಡಿಕೊಡಬೇಕೆಂಬ ಚರ್ಚೆ ನಡೆಯುತ್ತಿದೆ.

ಆದರೆ ಇಂಥ ವಿಚಾರಗಳ ಬಗ್ಗೆ ಹೈಕಮಾಂಡ್‌ ಜತೆ ಚರ್ಚಿಸುವ ಛಾತಿ ಇರುವ ನಾಯಕರು ಈಗ ರಾಜ್ಯ ಬಿಜೆಪಿಯಲ್ಲಿ ಇಲ್ಲ. ಮೈತ್ರಿ ವಿಚಾರಕ್ಕೆ ಸಂಬಂಧಪಟ್ಟಂತೆ ವರಿಷ್ಠರು ಮಾಜಿ ಸಿಎಂ ಯಡಿಯೂರಪ್ಪ ಅವರಿಂದ ಅಭಿಪ್ರಾಯಪಡೆಯುವ ಸಾಧ್ಯತೆ ಇಲ್ಲ. ಹೀಗಾಗಿ ಮೈತ್ರಿ ಅಥವಾ ವಿಲೀನ ಸಂಪೂರ್ಣವಾಗಿ ಕುಮಾರಸ್ವಾಮಿ ಹಾಗೂ ಬಿಜೆಪಿ ದಿಲ್ಲಿ ನಾಯಕರ ಮಧ್ಯೆ ನಡೆಯುವ ಕೊಡುಕೊಳ್ಳುವಿಕೆಯಾಗಲಿದೆ.

ಮಂಡ್ಯ, ಬೆಂ.ಗ್ರಾಮಾಂತರಕ್ಕೆ ಪಟ್ಟು
ಒಂದೊಮ್ಮೆ ಮೈತ್ರಿ ಏರ್ಪಟ್ಟರೆ ಬೆಂಗಳೂರು ಗ್ರಾಮಾಂತರ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರವನ್ನು ತಮಗೆ ಬಿಟ್ಟುಕೊಡುವಂತೆ ಜೆಡಿಎಸ್‌ ಪಟ್ಟು ಹಿಡಿಯುವ ಸಾಧ್ಯತೆ ಅಧಿಕವಾಗಿದೆ. ಹಲವು ಕಾರಣಗಳಿಂದ ಈ ಎರಡು ಕ್ಷೇತ್ರಗಳನ್ನು ಗೆಲ್ಲಲೇಬೇಕೆಂಬ ಹಠ ಕುಮಾರಸ್ವಾಮಿ ಅವರನ್ನು ಆವರಿಸಿದೆ.

ಟಾಪ್ ನ್ಯೂಸ್

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kKasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

Kasturi Rangan Report: ಬಾಧಿತ ಹಳ್ಳಿಗಳಿಗೆ ಪ್ಯಾಕೇಜ್‌ಗೆ ಕೇಂದ್ರಕ್ಕೆ ಮನವಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.