ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಈಶ್ವರಪ್ಪಗೆ ಬಿಗ್ ರಿಲೀಫ್
Team Udayavani, Jul 16, 2023, 7:51 AM IST
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಉಡುಪಿ ಪೊಲೀಸರು ಸಲ್ಲಿಸಿದ್ದ ಬಿ-ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂಗೀಕರಿಸಿದೆ.
2022ರ ಎ. 11ರಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ತನ್ನ ಸಾವಿಗೆ ಸಚಿವ ಕೆ.ಎಸ್.ಈಶ್ವರಪ್ಪ ಕಿರುಕುಳವೇ ಕಾರಣ ಎಂದು ಡೆತ್‌ನೋಟ್ ಬರೆದಿಟ್ಟಿದ್ದರು. ಈ ಬೆನ್ನಲ್ಲೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವರಾಗಿದ್ದ ಈಶ್ವರಪ್ಪ ರಾಜೀನಾಮೆ ನೀಡಿದ್ದರು.
ಈಶ್ವರಪ್ಪ ಪ್ರತಿ ಕಾಮಗಾರಿಯಲ್ಲೂ 40 ಪರ್ಸೆಂಟ್ ಕಮಿಷನ್ ಪಡೆದುಕೊಳ್ಳುತ್ತಾರೆ. ಕಾಮಗಾರಿಯೊಂದರ ಬಿಲ್ ಮಂಜೂರು ಮಾಡಲು ಸಚಿವರು ಶೇ.40ರಷ್ಟು ಕಮಿಷನ್ ಕೇಳಿದ್ದರು ಎಂದು ಸಂತೋಷ್ ಪಾಟೀಲ್ ಆರೋಪಿಸಿದ್ದರು. ಪೊಲೀಸರು ಈಶ್ವರಪ್ಪ ಹಾಗೂ ಸಂತೋಷ್ ಪಾಟೀಲ್ ಮನೆಯವರ ಹೇಳಿಕೆಗಳನ್ನೂ ದಾಖಲಿಸಿಕೊಂಡಿದ್ದರು. ಆದರೆ ಆತ್ಮಹತ್ಯೆ ಪ್ರಚೋದನೆಗೆ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಕೋರ್ಟ್‌ಗೆ ಬಿ-ರಿಪೋರ್ಟ್ ಸಲ್ಲಿಸಿದ್ದರು.
ಅದನ್ನು ಪ್ರಶ್ನಿಸಿದ ಸಂತೋಷ್ ಕುಟುಂಬದವರು, ರಾಜಕೀಯ ಪ್ರಭಾವಕ್ಕೆ ಒಳಗಾಗಿ ಪೊಲೀಸರು ಬಿ-ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದುವರೆಗಿನ ವಾದ-ಪ್ರತಿವಾದ ಆಲಿಸಿದ ಕೋರ್ಟ್, ತನಿಖಾಧಿಕಾರಿಗಳು ಸಲ್ಲಿಸಿದ್ದ ಬಿ-ರಿಪೋರ್ಟ್ ಅಂಗೀರಿಸುವ ಮೂಲಕ ಈಶ್ವರಪ್ಪಗೆ ಬಿಗ್ ರಿಲೀಫ್ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.