Maharashtra;ಪತ್ನಿ ಮೇಲೆ ಹಲ್ಲೆ ನಡೆಸಿ, ಪತಿ ಆತ್ಮಹತ್ಯೆ
Team Udayavani, Jul 16, 2023, 6:34 AM IST
ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಶನಿವಾರ 41 ವರ್ಷದ ವ್ಯಕ್ತಿಯೊಬ್ಬ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಥಾಣೆಯ ಬದ್ಲಾಪುರ್ದಲ್ಲಿ ಈ ಘಟನೆ ನಡೆದಿದೆ.
ಸುನಿಲ್ ಮತ್ತು ಅರ್ಚನ ಎಂಬ ದಂಪತಿ ನಡುವೆ ಜಗಳವಾಗಿದೆ. ಸುನಿಲ್ ಅಹೆರ್ ತನ್ನ ಪತ್ನಿ ಅರ್ಚನ ಅವರನ್ನು ದೊಣ್ಣೆಯಿಂದ ಹಿಗ್ಗಾ-ಮುಗ್ಗಾ ಬಾರಿಸಿದ್ದಾನೆ. ಆಕೆಯ ತಲೆಗೆ ತೀವ್ರವಾದ ಗಾಯಗಳಾಗಿವೆ. ಅನಂತರ ಸುನಿಲ್ ತನ್ನ ಪತ್ನಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾನೆ.
ಬಳಿಕ ವಾಪಸು ಮನೆಗೆ ಬಂದು ಕೊಠಡಿಯ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೇಳೆ ದಂಪತಿಯ ಇಬ್ಬರು ಸಣ್ಣ ಪ್ರಾಯದ ಪುತ್ರರು ಮನೆಯಲ್ಲೇ ಇದ್ದರು. ಮಕ್ಕಳು ನೆರೆಹೊರೆಯವರಿಗೆ ಈ ವಿಷಯವನ್ನು ತಿಳಿಸಿದ್ದಾರೆ. ಪೊಲೀಸರು ಕೇಸು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.