Periyapatna; ಪತ್ರಿಕಾ ವಿತರಕ, ರೈತ ದೇವರಾಜು ಆತ್ಮಹತ್ಯೆ
Team Udayavani, Jul 16, 2023, 9:28 PM IST
ಪಿರಿಯಾಪಟ್ಟಣ : ಪಟ್ಟಣದಲ್ಲಿ ಪತ್ರಿಕಾ ವಿತರಕರಾಗಿ ಸೇವೆಸಲ್ಲಿಸುತ್ತಿದ್ದ ಅಂಕನಹಳ್ಳಿ ಗ್ರಾಮದ ರೈತ ದೇವರಾಜು ಭಾನುವಾರ ಸಾಲಬಾದೆಯಿಂದ ಆತ್ಮಹತ್ಯೆಗೆ ಶರಣಾಗಿದ್ಧಾರೆ.
ತಾಲೂಕಿನ ಅಂಕನಹಳ್ಳಿ ಗ್ರಾಮದಲ್ಲಿ ಮೂಲತಃ ರೈತರಾಗಿದ್ದ ದೇವರಾಜು(42) ಬೆಳಗಿನ ವೇಳೆ ಆಂದೋಲನ, ಉದಯವಾಣಿ, ಸಂಯುಕ್ತ ಕರ್ನಾಟಕ, ಕೆಮ್ಮುಗಿಲು, ಪ್ರಜಾನುಡಿ ಪ್ರತಿನಿಧಿ ಸೇರಿದಂತೆ ಮತ್ತಿತರ ದಿನಪತ್ರಿಕೆಗಳನ್ನು ವಿತರಣೆ ಮಾಡುವ ಕೆಲಸವನ್ನು ಮಾಡುತ್ತಿದ್ದರು.
ಮಳೆಗಾಲ ವಿಳಂಬವಾಗಿ ತಾವು ಜಮೀನಿನಲ್ಲಿ ಬೆಳೆದ ಬೆಳೆ ಸರಿಯಾಗಿ ಬಾರದೆ ಸಾಲಬಾದೆಯಿಂದ ಮನನೊಂದಿದ್ದ ಈತ ತಮ್ಮ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ಧಾರೆ ಎಂದು ಮೃತರ ಪತ್ನಿ ಗೌರಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಇವರ ಹೆಸರಿನಲ್ಲಿ 1.28ಎಕರೆ ಜಮೀನಿದ್ದು ವ್ಯವಸಾಯಕ್ಕೆ ವಿವಿಧ ಬ್ಯಾಂಕುಗಳು, ಸಹಕಾರ ಸಂಘಗಳು, ಅಂದಾಜು 8 ಲಕ್ಷ ಸಾಲ ಮಾಡಿದ್ದು, ಸಾಲಭಾದೆಯಿಂದ ಮನನೊಂದು ನೇಣಿಗೆ ಶರಣಾಗಿದ್ಧಾನೆ. ಈತನಿಗೆ ಒಬ್ಬ ಮಗ ಮತ್ತು ಒಬ್ಬ ಮಗಳು ಇದ್ದಾಳೆ. ಮೃತದೇಹವನ್ನು ಶವಪರೀಕ್ಷೆ ನಡೆಸಿದ ನಂತರ ನಂದಿಪುರ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹೊಸ ವರ್ಷಾಚರಣೆ: ಕೇಕ್ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
Hunsur: ಆಕಸ್ಮಿಕ ವಿದ್ಯುತ್ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.