ಕೊಡಗು ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ; ಭಾರೀ ಕಾರ್ಯಾಚರಣೆ

ಮಂಗಳೂರಿನ 14 ಮಂದಿ ಸಹಿತ ಹಲವರು ವಶಕ್ಕೆ

Team Udayavani, Jul 17, 2023, 7:32 AM IST

ಕೊಡಗು ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ; ಭಾರೀ ಕಾರ್ಯಾಚರಣೆ

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ ಮತ್ತು ಸೇವನೆಯ ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಒಟ್ಟು 1 ಕೆ.ಜಿ.702 ಗ್ರಾಂ ಗಾಂಜಾ ಮತ್ತು 9 ಸಂಖ್ಯೆಯ ನಿಷೇಧಿತ ಐಎಸ್‌ಡಿ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದಾರೆ.

ಮಡಿಕೇರಿ ಸಮೀಪದ ಮಕ್ಕಂದೂರು ಗ್ರಾಮದ ಹೋಂ ಸ್ಟೇ ಒಂದರಲ್ಲಿ ಮಾದಕ ವಸ್ತು ಮಾರಾಟ ಮತ್ತು ಬಳಕೆ ಕುರಿತು ಲಭಿಸಿದ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು 414 ಗ್ರಾಂ ಗಾಂಜಾ ಮತ್ತು 9 ಸಂಖ್ಯೆಯ ನಿಷೇಧಿತ ಐಎಸ್‌ಡಿ ಮಾದಕ ವಸ್ತು ಸಹಿತ ಹಲವರನ್ನು ವಶಕ್ಕೆ ಪಡೆದರು.

ಮಂಗಳೂರು ಮೂಲದ ರಿತಿಕ್‌ (23), ವಿಘ್ನೇಶ್ ಅಜಿತ್‌ ಅಂಚನ್‌ (21), ಸುಮನ್‌ ಹರ್ಷಿತ್‌ (26), ಚಿರಾಗ್‌ ಸಾನಿಲ್‌ (24), ಮಂಜುನಾಥ್‌ (30), ಲತೀಶ್‌ ನಾಯಕ್‌ (32), ಸಚಿನ್‌ (26), ರಾಹುಲ್‌ (26), ಪ್ರಜ್ವಲ್‌ (32), ಅವಿನಾಶ್‌ (28), ಪ್ರತಿಕ್‌ ಕುಮಾರ್‌ (27), ಧನುಷ್‌ (28), ರಾಜೇಶ್‌ (45), ದಿಲ್‌ ರಾಜು (30) ಹಾಗೂ ಮಡಿಕೇರಿ ನಿವಾಸಿ ಹೋಂ ಸ್ಟೇ ಮಧ್ಯವರ್ತಿ ಬಿ.ಗಣೇಶ್‌ (47) ಹಾಗೂ ಹೋಂಸ್ಟೇ ಮಾಲಕ ಸದಾಶಿವ ಬಿ. ಎಚ್‌. (31) ರನ್ನು ವಶಕ್ಕೆ ಪಡೆಯಲಾಗಿದೆ.

ಮಡಿಕೇರಿಯಲ್ಲಿ ಮಾರಾಟ
ಕನ್ನಂಡಬಾಣೆ ರಸ್ತೆ ಜಂಕ್ಷನ್‌ನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಮೈಸೂರು ಉದಯಗಿರಿ ನಿವಾಸಿ ಆಲಿಂ ಅಹಮದ್‌ (36), ಹಿಲ್‌ ರಸ್ತೆ ನಿವಾಸಿ ಎಂ.ಐ.ಮೊಹಿಸಿನ್‌ (45)ರನ್ನು ಬಂಧಿಸಲಾಗಿದೆ. ಆರೋಪಿಗಳ ಬಳಿಯಿಂದ 728 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಮಹಿಳಾ ಸಮಾಜದ ಬಳಿ ನಿಷೇಧಿತ ಮಾದಕ ವಸ್ತು ಸೇವಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ನಗರ ನಿವಾಸಿಗಳಾದ ಎಂ.ಎ.ಸಾಗರ್‌ (22) ಮತ್ತು ಎಂ.ಎಸ್‌.ರೆಹಮಾನ್‌ (31) ಹಾಗೂ ಚೇತನ್‌ ಕೆ. (23) ರನ್ನು ಬಂಧಿಸಲಾಗಿದೆ.

ಸಿದ್ದಾಪುರ ಠಾಣಾ ವ್ಯಾಪ್ತಿಯ ಚೆನ್ನಯ್ಯನಕೋಟೆ ನಿವಾಸಿ ಇಮ್ರಾನ್‌ (31) ನನ್ನು ಬಂಧಿಸಿ ಆತನ ಬಳಿಯಿಂದ 190 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.

ಗೋಣಿಕೊಪ್ಪ ಕಾವೇರಿ ಕಾಲೇಜು ರಸ್ತೆ ಮೂಲಕ ಮಾರಾಟ ಮಾಡುವ ಸಲುವಾಗಿ ಗಾಂಜಾ ಸಾಗಿಸುತ್ತಿದ್ದ 3 ಮಂದಿ ಆರೋಪಿಗಳನ್ನು ಮಾಲು ಸಹಿತ ಬಂಧಿಸಲಾಗಿದೆ ಅಲ್ಲಿನ ನಿವಾಸಿಗಳಾದ ಎಂ.ಎಂ. ಶಮೀರ್‌ (37), ಎಂ.ಜಬ್ಟಾರ್‌ (23) ಮತ್ತು ನಿಸಾರ್‌ (37) ರನ್ನು ಬಂಧಿಸಿ 370 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.

ಪೊಲೀಸ್‌ ಅಧಿಕಾರಿಗಳ ಹಾಗೂ ಸಿಬಂದಿಗಳ ಕಾರ್ಯದಕ್ಷತೆಯನ್ನು ಪೊಲೀಸ್‌ ವರಿಷ್ಠಾಧಿಕಾರಿ ಕೆ.ರಾಮರಾಜನ್‌ ಶ್ಲಾಘಿಸಿದ್ದಾರೆ.

ಪರವಾನಗಿ ರದ್ದು
ಜಿಲ್ಲೆ ವ್ಯಾಪ್ತಿಯ ಹೋಂ ಸ್ಟೇ, ರೆಸಾರ್ಟ್‌, ಲಾಡ್ಜ್ಗಳಲ್ಲಿ ಪ್ರವಾಸದ ನಿಮಿತ್ತ ತಂಗಲು ಬರುವ ಪ್ರವಾಸಿಗರು ಮಾದಕ ವಸ್ತು ಬಳಕೆ, ಮಾರಾಟ ಮಾಡುವುದು ಕಂಡು ಬಂದಲ್ಲಿ ಹೋಂ ಸ್ಟೇ, ರೆಸಾರ್ಟ್‌, ಲಾಡ್ಜ್ ಗಳ ಮಾಲಕರು, ಮಧ್ಯವರ್ತಿಗಳು ಸ್ಥಳೀಯ ಠಾಣೆಗಳಿಗೆ ಮಾಹಿತಿ ನೀಡಬೇಕು. ಮಾಹಿತಿ ನೀಡದೆ ದಾಳಿ ಸಂದರ್ಭ ಮಾದಕ ವಸ್ತು ಸೇವನೆ, ಮಾರಾಟ ಕಂಡು ಬಂದಲ್ಲಿ ಮಾಲಕರು ಹಾಗೂ ಮಧ್ಯವರ್ತಿಗಳ ವಿರುದ್ಧ ಎನ್‌ಡಿಪಿಎಸ್‌ ಕಾಯ್ದೆ ಕಲಂ 25ರ ಅಡಿಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡು ಅವುಗಳ ಪರವಾನಗಿ ರದ್ದು ಮಾಡುವುದಾಗಿ ಜಿಲ್ಲಾ ಪೊಲೀಸ್‌ ಇಲಾಖೆ ಎಚ್ಚರಿಕೆ ನೀಡಿದೆ.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod ಅಪರಾಧ ಸುದ್ದಿಗಳು

Untitled-5

Kasaragod: ಮಾನ್ಯ ಅಯ್ಯಪ್ಪ ಭಜನ ಮಂದಿರದಿಂದ ಕಳವು; ಓರ್ವನ ಬಂಧನ

Arrest

Kasaragodu: ಆಸ್ತಿ ವಿವಾದ: ಅಣ್ಣನ ಕೊಲೆ, ಇಬ್ಬರಿಗೆ ಇರಿತ; ತಮ್ಮನ ಸೆರೆ

ACT

Manjeshwar: ಬಂಧಿತರ ಪೈಕಿ ಓರ್ವ 15 ಪ್ರಕರಣಗಳಲ್ಲಿ ಆರೋಪಿ

POlice

Kumbla: ಪ್ರಾಣ ಲೆಕ್ಕಿಸದೆ ಹೊಳೆಗೆ ಹಾರಿ ಆರೋಪಿಯನ್ನು ಬಂಧಿಸಿದ ಪೊಲೀಸರು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.