ಬೆಂಗಳೂರಿನಲ್ಲಿ ನಡೆಯುವ ವಿಪಕ್ಷಗಳ ಸಭೆಗೆ ಗೈರಾಗಲಿದ್ದಾರಾ ಎನ್ ಸಿಪಿ ನಾಯಕ ಶರದ್ ಪವಾರ್
Team Udayavani, Jul 17, 2023, 9:41 AM IST
ಮುಂಬೈ: ಕೇಂದ್ರ ಬಿಜೆಪಿ ಸರ್ಕಾರದ ಎನ್‍ಡಿಎ ಮೈತ್ರಿ ಕೂಟದ ವಿರುದ್ಧ ಒಟ್ಟಾಗಿರುವ ಯುಪಿಎ ಮೈತ್ರಿಕೂಟದ ಮಹತ್ವದ ಸಭೆ ಇಂದು ಮತ್ತೆ ನಾಳೆ ನಡೆಯಲಿದ್ದು ಈ ಸಭೆಗೆ ಎನ್ ಸಿಪಿ ನಾಯಕ ಶರದ್ ಪವಾರ್ ಗೈರಾಗಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದ್ದು ಸೋಮವಾರ ಬೆಳಿಗ್ಗೆ ಪವರ್ ಬಣದ ವಕ್ತಾರರು ಮಾಡಿರುವ ಟ್ವೀಟ್ ಇದಕ್ಕೆ ಸಾಕ್ಷಿಯಾಗಿದೆ.
2024ರ ಲೋಕಸಭೆ ಚುನಾವಣೆಗೆ ಈಗಾಗಲೇ ವೇದಿಕೆ ಸಿದ್ಧವಾಗುತ್ತಿದೆ. ಮಹಾಘಟ್ ಬಂಧನ್ ಹೆಸರಿನಲ್ಲಿ ರಾಷ್ಟ್ರಮಟ್ಟದಲ್ಲಿ ಕೇಂದ್ರ ಎನ್ ಡಿಎ ಸರಕಾರಕ್ಕೆ ಸೆಡ್ಡು ಹೊಡೆದು ಅಧಿಕಾರಕ್ಕೆ ಬರಲು ತಂತ್ರ ರೂಪಿಸುತ್ತಿದ್ದು ಅದರ ಭಾಗವಾಗಿ ಇಂದು ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಸಭೆ ಎರಡು ದಿನಗಳ ಸಭೆ ನಡೆಯಲಿದೆ ಅಲ್ಲದೆ ಈ ಸಭೆಯಲ್ಲಿ ಒಟ್ಟು 26 ವಿರೋಧ ಪಕ್ಷ ನಾಯಕರು ಸಭೆ ಸೇರಲಿದ್ದಾರೆ ಎನ್ನಲಾಗಿದೆ. ಸಭೆಯ ಉಸ್ತುವಾರಿಯನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೋಡಿಕೊಳ್ಳುತ್ತಿದ್ದಾರೆ.
ಏತನ್ಮಧ್ಯೆ ಸೋಮವಾರ ನಡೆಯುವ ಸಭೆಗೆ ಶರದ್ ಪವಾರ್ ಗೈರಾಗಲಿದ್ದು ಮಂಗಳವಾರದ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಪಕ್ಷದ ವಕ್ತಾರರು ಟ್ವೀಟ್ ಮಾಡಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಪ್ರಬಲ ಒಕ್ಕೂಟ ರಚಿಸಲು ಪ್ರತಿಪಕ್ಷಗಳು ಒಗ್ಗೂಡಿದ್ದು ಇಂದು ಮತ್ತೆ ನಾಳೆ ನಡೆಯುವ ಸಭೆ ಬಹಳಷ್ಟು ಮಹತ್ವವನ್ನು ಪಡೆದುಕೊಳ್ಳಲಿದೆ ಎನ್ನಲಾಗಿದೆ. ಇದರ ನಡುವೆ ಎನ್ ಸಿಪಿ ನಾಯಕ ಶರದ್ ಪವಾರ್ ಸಭೆಯಿಂದ ಹಿಂದೆ ಸರಿದಿದ್ದಾರೆ ಎಂಬ ಮಾತು ಕೇಳಿಬಂದಿದೆ.
ಇದನ್ನೂ ಓದಿ: ಮಧ್ಯಪ್ರದೇಶ: ಟ್ರಕ್ ಕಾರು ನಡುವೆ ಭೀಕರ ಅಪಘಾತ… 6 ಮಂದಿ ಸ್ಥಳದಲ್ಲೇ ಮೃತ್ಯು, ಓರ್ವ ಗಂಭೀರ
ಬಿಹಾರ ರಾಜಧಾನಿ ಪಟ್ನಾದಲ್ಲಿ ಜೂನ್ 23 ರಂದು ಮೊದಲ ಸಭೆ ನಡೆದಿತ್ತು ಆ ಬಳಿಕ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಸಭೆ ಸೇರಲು ನಿರ್ಧರಿಸಲಾಗಿತ್ತು ಆದರೆ ಕಾರಣಾಂತರಗಳಿಂದ ಸಭೆ ರದ್ದಾಯಿತು ಈ ಈ ಇದೀಗ ಬೆಂಗಳೂರಿನಲ್ಲಿ ಎರಡು ದಿನಗಳ ಸಭೆ ನಡೆಯಲಿದ್ದು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ಜೈರಾಮ್ ರಮೇಶ್ ಮತ್ತು ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ನಡೆಯಲಿರುವ ಸಭೆಗೆ ಸಿದ್ಧತೆ ಮಾಡಿಕೊಳ್ಳಲು ಭಾನುವಾರವೇ ನಗರಕ್ಕೆ ಬಂದಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ಸಭೆ ನಡೆಯಲಿದ್ದು ಯಾವೆಲ್ಲ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಾಗಿದೆ.
NCP chief Sharad Pawar to not participate in the joint opposition meeting in Bengaluru today (17th July), confirms Sharad Pawar NCP faction Spokesperson
The two-day meeting in Bengaluru begins today.
(File photo) pic.twitter.com/FBb7mMRBwR
— ANI (@ANI) July 17, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ
Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.