ಬಿಸಿ ಊಟಕ್ಕೆ ತರಕಾರಿ ಬೆಲೆ ಏರಿಕೆ ಬಿಸಿ 

Team Udayavani, Jul 17, 2023, 2:05 PM IST

ಬಿಸಿ ಊಟಕ್ಕೆ ತರಕಾರಿ ಬೆಲೆ ಏರಿಕೆ ಬಿಸಿ 

ದೇವನಹಳ್ಳಿ: ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಿರುವ ಅಕ್ಷರ ದಾಸೋಹ ಯೋಜನೆಯ ಪ್ರತಿದಿನ ಆಹಾರದಲ್ಲಿ ಬಳಕೆಯಾಗಲೇ ಬೇಕಾಗಿರುವ ಟೊಮೆಟೋ ಹಾಗೂ ತರಕಾರಿಗಳ ಬೆಲೆ ಸರಕಾರ ನಿಗದಿಪಡಿಸಿದ ಅನುದಾನದಲ್ಲಿ ಈ ಪದಾರ್ಥಗಳನ್ನು ಹೊಂದಿಸುವುದು ಕಷ್ಟ ಹೀಗಾಗಿ ಅಕ್ಷರ ದಾಸೋಹ ಯೋಜನೆಗೆ ಒಂದು ದೊಡ್ಡ ಸವಾಲಾಗಿ ಪರಿಣಮಿಸಿದೆ.

ಜಿಲ್ಲೆಯಲ್ಲಿ ಒಂದರಿಂದ ಹತ್ತನೇ ತರಗತಿವರೆಗೆ ಬಿಸಿಯೂಟ ನೀಡಲಾಗುತ್ತಿದೆ ಸರ್ಕಾರ 4.97ರೂ ಖರ್ಚು ಮಾಡುತ್ತಿದೆ. ಟೊಮೆಟೋ ಬೆಲೆ ಗಗನಕೇರಿ ಏರಿದ್ದರಿಂದ ಊಟದಲ್ಲಿ ಟೊಮೆಟೋ ಬದಲು ಹುಣಸೆಹಣ್ಣು ಬಳಸಲಾಗುತ್ತಿದೆ. ಶಾಲೆಗಳಿಗೆ ಬಿಸಿ ಊಟದ ತರಕಾರಿ ಅಡುಗೆ ಅನಿಲ ಸೇರಿ ಬಿಸಿಯೂಟ ನೌಕರರು ಹಾಗೂ ಶಿಕ್ಷಕರು ಕೈಯಿಂದ ಹಣ ಹಾಕಿ ಖರೀದಿಸಿ ತರುತ್ತಿದ್ದಾರೆ. ಅಕ್ಷರ ದಾಸೋಹ ಯೋಜನೆ ಅಡಿ ಸರ್ಕಾರ ದಿನವಾದ ಊಟದ ಮೆನು ರೂಪಿಸಿದೆ. ಈ ಮೆನು ವಿನಲ್ಲಿ ಆಯ ತರಕಾರಿ ಬಳಕೆ ಮೊದಲಾದ ತಾವುಗಳ ಪಟ್ಟಿಯಲ್ಲಿ ಟೊಮೆಟೋ ಇದ್ದೆ ಇದೆ. ಟೊಮೆಟೋ ಇಲ್ಲದೆ ಅಕ್ಷರ ದಾಸೋಹ ಯೋಜನೆಯ ಊಟದ ಮೆನು ಅಪೂರ್ಣ. ಆದರೆ ಸರ್ಕಾರ ಒದಗಿಸಿದ ಅನುದಾನದಲ್ಲಿ ಟೊಮೆಟೋ ಹೊಂದಿಸುವುದು ಮುಖ್ಯ ಶಿಕ್ಷಕರಿಗೆ ತಲೆ ನೋವಾಗಿದೆ.

ಶಿಕ್ಷಕರ ತೊಳಲಾಟ: ಟೊಮೆಟೋ ಜಿಲ್ಲೆಯಲ್ಲಿ ಟೊಮೆಟೋ ಬೆಲೆಯಲ್ಲಿ ಸಾಕಷ್ಟು ವ್ಯತ್ಯಾಸ ಕಂಡು ಬರುತ್ತಿದೆ ಆದರೆ ಒದಗಿಸಲಾಗುವ ಹಣ ಒಂದೇ. ಮಾರುಕಟ್ಟೆ ಬೆಲೆ ಆಧರಿಸಿ ಸರ್ಕಾರ ಅನುದಾನ ನೀಡು ತ್ತಿಲ್ಲ ಹೆಚ್ಚುವರಿ ಹಣದಲ್ಲಿ ಈ ಅಕ್ಷರ ದಾಸೋಹ ಖಚ್‌ ìನ್ನು ಸರಿದೂಗಿಸಿ ಕೊಳ್ಳಬೇಕು ಬೇಡ ಎಂಬುವುದು ಗೊತ್ತಾಗದೆ ಶಿಕ್ಷಕರು ತೊಳಲಾಟ ಅನುಭವಿಸುತ್ತಿದ್ದಾರೆ.

ಬಿಸಿಯೂಟ ಒದಗಿಸುವುದು ಶಿಕ್ಷಕರಿಗೆ ಸವಾಲು: ಮಾರುಕಟ್ಟೆಯಲ್ಲಿ ತರಕಾರಿ ಹಾಗೂ ಮೊಟ್ಟೆ ಬೆಲೆಗಗನಕ್ಕೇರಿದ್ದು, ಶಾಲೆಗಳಲ್ಲಿ ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ಬಿಸಿಯೂಟ ಒದಗಿಸುವುದು ಶಿಕ್ಷಕರಿಗೆ ಸವಾಲು ಆಗಿದೆ. ಶಾಲೆಯಲ್ಲಿ ಮೊಟ್ಟೆ ಹಾಗೂ ಬಾಳೆಹಣ್ಣು ವಿತರಣೆ ಒಬ್ಬ ವಿದ್ಯಾರ್ಥಿ 6 ಸಹಾಯಧನ ನಿಗದಿ ಪಡಿಸಲಾಗಿದೆ.ಆದರೆ, ಅಂಗಡಿ ಯಲ್ಲಿ ಒಂದು ಮೊಟ್ಟೆ 6.80 ಕ್ಕೆ ಮಾರಾಟವಾಗುತ್ತಿದೆ. ಹಾಗಾಗಿ ಬಿಸಿಯೂಟ ಮಾಡಿಸು ತ್ತಿರುವ ಶಿಕ್ಷಕರ ಜೇಬಿಗೆ ಕತ್ತರಿ ಬಿದ್ದಂತಾಗಿದೆ.

ತಾಲೂಕಿನಲ್ಲಿ 235 ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಟ್ಟು 13.390 ಮಂದಿ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿ ಯೂಟ ಯೋಜನೆಯ ಫ‌ಲಾನುಭವಿಗಳಾಗಿದ್ದಾರೆ. 1-5 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಒಬ್ಬ ವಿದ್ಯಾರ್ಥಿಗೆ ಸಾಂಬಾರು ಪದಾರ್ಥ, ಉಪ್ಪು, ತರಕಾರಿ ಖರೀದಿಗಾಗಿ 1.93, 6-10ನೇ ತರಗತಿಯ ವಿದ್ಯಾರ್ಥಿಗಳಿಗೆ 2.89 ಸರ್ಕಾರ ನೀಡುತ್ತಿದೆ.

ತಮ್ಮ ಜೇಬಿನಿಂದ ಹಣ ವೆಚ್ಚ ತರಕಾರಿ ಖರೀದಿ: ತರಕಾರಿ ಬೆಲೆಯು ಏರಿಕೆಯಾಗಿದ್ದು, ಸರ್ಕಾರ ನೀಡುವ ಅನುದಾನದಲ್ಲಿ ತರಕಾರಿ ಖರೀದಿ ಸಲು ಸಾಧ್ಯವಾಗದೆ ತಮ್ಮ ಜೇಬಿನಿಂದ ಹಣ ವೆಚ್ಚ ಮಾಡಿ ಶಿಕ್ಷಕರು ತರಕಾರಿ ಖರೀದಿಸುತ್ತಿದ್ದಾರೆ. ಸರ್ಕಾರ, ಅಕ್ಷರ ದಾಸೋಹ ಇಲಾಖೆಯ ಮೂಲಕ ಬಿಸಿಯೂಟಕ್ಕಾಗಿ ಅಕ್ಕಿ, ಬೇಳೆ, ಅಡುಗೆ ಅನಿಲ, ಗೋಧಿ, ಎಣ್ಣೆ, ಸರಬ ರಾಜು ಮಾಡುತ್ತಿದೆ. ಇನ್ನು ಉಳಿದಂತೆ ಸಾಂಬಾರು ಪದಾರ್ಥಗಳು, ಉಪ್ಪು, ತರಕಾರಿ ಶಾಲೆ ಯವರೇ ಖರೀದಿಸಬೇಕಾಗಿದೆ. ಈಗಿನ ಬೆಲೆಗಳಲ್ಲಿ ಒಬ್ಬ ವಿದ್ಯಾರ್ಥಿಗೆ ಸರಾಸರಿ 4 ಖರ್ಚಾಗುತ್ತಿದ್ದು, ಹೆಚ್ಚುವರಿ 1.20 ಶಿಕ್ಷಕರಿಗೆ ಹೊರೆಯಾಗುತ್ತಿದೆ ಎಂಬುದು ಶಾಲಾಭಿವೃದ್ಧಿ ಸಮಿತಿಯ ಸದಸ್ಯರ ಮಾತಾಗಿದೆ.

ಅಗತ್ಯ ವಸ್ತುಗಳ ಬೆಲೆ ಏರಿಕೆ: ಅನುದಾನ ಹೆಚ್ಚಳ ಅಗತ್ಯ : ಸರ್ಕಾರ ಮಕ್ಕಳಿಗೆ ಬಿಸಿಯೂಟ ಕೊಡುತ್ತಿದೆ. ಆದರೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಸರ್ಕಾರ ನೀಡುವ ಅನುದಾನ ಏರಿಕೆಯಾಗದೆ ಶಿಕ್ಷಕರು ಯಾವ ರೀತಿ ನಿಬಾಯಿಸುತ್ತಾರೆ. ಅವರ ಜೇಬಿಂದ ಎಷ್ಟು ದಿನ ಖರ್ಚು ಮಾಡಲು ಸಾಧ್ಯ. ಹಾಗಾಗಿ ಅನುದಾನ ಹೆಚ್ಚಳ ಮಾಡಬೇಕೆಂಬುದು ಪೋಷಕಿ ರಾಧಾ ಅವರ ಮಾತಾಗಿದೆ.

ತರಕಾರಿಗಳ ಬೆಲೆ ಏರಿಕೆಯಾ ಗಿರುವುದರಿಂದ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ತರಕಾರಿ ಒದ ಗಿಸಲಾಗುತ್ತಿಲ್ಲ. ಇರುವುದರಲ್ಲೇ ಸರಿದೂಗಿಸಿಕೊಂಡು ಹೋಗು ತ್ತಿದ್ದೇವೆ ಎಂದು ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಲಿಂಗಪ್ಪ ತಿಳಿಸಿದರು.

ಪ್ರಸ್ತುತ ಸರ್ಕಾರದಿಂದ ನಮಗೆ ಬಿಡುಗಡೆಯಾಗುವ ಅನುದಾನವನ್ನು ಆಯಾ ಶಾಲೆಗಳ ಶಾಲಾಭಿವೃದ್ಧಿ ಸಮಿತಿ ಹಾಗೂ ಮುಖ್ಯ ಶಿಕ್ಷಕರ ಜಂಟಿ ಖಾತೆಗಳಿಗೆ ಜಮೆ ಮಾಡಲಾಗುತ್ತಿದೆ. ಬಿಸಿಯೂಟಕ್ಕೆ ನೀಡುವ ದರವೂ ಹೊಸದಾಗಿ ಪರಿಷ್ಕರಣೆಯಾಗಿದೆ. ಈ ವರ್ಷದಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳ ಸಂಪೂರ್ಣ ಅಂಕಿ ಅಂಶಗಳ ಚಿತ್ರಣ ದೊರೆತರೆ ಉತ್ತಮ ಪರಿಹಾರ ಕಂಡುಕೊಳ್ಳಲು ಸಾಧ್ಯ. ● ಸುಧಾ, ಸಹಾಯಕ ನಿರ್ದೇಶಕಿ ಅಕ್ಷರ ದಾಸೋಹ ದೇವನಹಳ್ಳಿ

ಟಾಪ್ ನ್ಯೂಸ್

Manipal: ಐಟಿ ಅಧಿಕಾರಿ ದಾಳಿ ಬೆದರಿಕೆ… ಕೆಲಸದಾಕೆಯಿಂದ ಮನೆಯ ಯಜಮಾನಿಗೆ ಮೋಸ

Manipal: ಐಟಿ ಅಧಿಕಾರಿ ದಾಳಿ ಬೆದರಿಕೆ… ಕೆಲಸದಾಕೆಯಿಂದ ಮನೆಯ ಯಜಮಾನಿಗೆ ಮೋಸ

Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ

Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ

ಮಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ

ಮಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ

1-a-jg-bg

Lawyer Jagadish: ಬಿಗ್ ಬಾಸ್ ಆಯಿತು ಈಗ ಡ್ಯಾನ್ಸ್ ಶೋಗೆ ಬಂದ ಜಗದೀಶ್!!

Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ

Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ

Kharge

5 adjectives; ಮೋದಿ ಸರ್ಕಾರದ 5 ವಿಶೇಷಣಗಳು ಇವು..: ಖರ್ಗೆ ಕೆಂಡಾಮಂಡಲ

Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ

Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

stalin

Tamil Nadu; ನ.1ಕ್ಕೆ ಗಡಿ ಹುತಾತ್ಮರ ದಿನಾಚರಣೆ: ಸಿಎಂ ಸ್ಟಾಲಿನ್‌ ಘೋಷಣೆ

Manipal: ಐಟಿ ಅಧಿಕಾರಿ ದಾಳಿ ಬೆದರಿಕೆ… ಕೆಲಸದಾಕೆಯಿಂದ ಮನೆಯ ಯಜಮಾನಿಗೆ ಮೋಸ

Manipal: ಐಟಿ ಅಧಿಕಾರಿ ದಾಳಿ ಬೆದರಿಕೆ… ಕೆಲಸದಾಕೆಯಿಂದ ಮನೆಯ ಯಜಮಾನಿಗೆ ಮೋಸ

Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ

Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ

ಮಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ

ಮಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ

1-a-jg-bg

Lawyer Jagadish: ಬಿಗ್ ಬಾಸ್ ಆಯಿತು ಈಗ ಡ್ಯಾನ್ಸ್ ಶೋಗೆ ಬಂದ ಜಗದೀಶ್!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.