Seema Haider: ಆಕೆ 72 ಗಂಟೆಯೊಳಗೆ ದೇಶ ತೊರೆಯಬೇಕು;ಪಾಕ್ ಮಹಿಳೆಗೆ ಹಿಂದೂ ಸಂಘಟನೆ ಎಚ್ಚರಿಕೆ
Team Udayavani, Jul 17, 2023, 3:57 PM IST
ನವದೆಹಲಿ: ಪಬ್ ಜೀ ಮೂಲಕ ಪರಿಚಯವಾಗಿ ಪ್ರಿಯಕರಿನಿಗಾಗಿ ಅಕ್ರಮವಾಗಿ ಭಾರತಕ್ಕೆ ಬಂದ ಸೀಮಾ ಹೈದರ್ ಹಿಂದೂ ಸಂಪ್ರದಾಯವನ್ನು ಅನುಸರಿಸಿ, ಇಲ್ಲಿನ ಆಚಾರ- ವಿಚಾರವನ್ನು ಆಳವಡಿಸಿಕೊಂಡಿದ್ದಾರೆ. ಇದು ನನ್ನ ಕುಟುಂಬ ನಾನು ಎಲ್ಲಿಗೂ ಹೋಗುವುದಿಲ್ಲ ಎಂದು ಹೇಳಿದ್ದಾರೆ.
ಅತ್ತ ಪಾಕ್ ನಲ್ಲಿ ಸೀಮಾ ಅವರ ಕುಟುಂಬವೂ, ಇನ್ಮುಂದೆ ಸೀಮಾ ಇಲ್ಲಿಗೆ ಬರುವುದು ಬೇಡ ಅವಳು ಮುಸ್ಲಿಂ ಆಗಿ ಉಳಿದಿಲ್ಲ ಎಂದು ಹೇಳಿದೆ. ಇನ್ನೊಂದೆಡೆ ಗಂಡ ವಿಡಿಯೋ ಮೂಲಕ ಪತ್ನಿಯ ಬರುವಿಕೆಗಾಗಿ ಮನವಿ ಮಾಡಿದ್ದಾರೆ.
ಭಾರತೀಯ ಹಿಂದೂ ಸಂಪ್ರದಾಯ ಮಹಿಳೆಯಂತೆ ಬದುಕುತ್ತಿರುವ ಸೀಮಾ ಹೈದರ್ ಗೆ ಈಗ ಹಿಂದೂ ಸಂಘಟನೆಯೊಂದು ದೇಶ ಬಿಡಲು ಎಚ್ಚರಿಕೆಯನ್ನು ನೀಡಿದೆ.
ಸೀಮಾ ಹೈದರ್ ಪಾಕಿಸ್ತಾನದ ಗೂಢಚಾರಿಕೆಯಾಗಿರಬಹುದು ಮತ್ತು ದೇಶಕ್ಕೆ ಅಪಾಯವನ್ನುಂಟುಮಾಡಬಹುದು ಎಂದು ಗೋ ರಕ್ಷಾ ಹಿಂದೂ ದಳದ ರಾಷ್ಟ್ರೀಯ ಅಧ್ಯಕ್ಷ ವಿಡಿಯೋವನ್ನು ಬಿಡುಗಡೆ ಮಾಡಿದ್ದು, ನಾವು ದೇಶದ್ರೋಹಿ ರಾಷ್ಟ್ರದ ಮಹಿಳೆಯನ್ನು ಸಹಿಸುವುದಿಲ್ಲ. 72 ಗಂಟೆಗಳಲ್ಲಿ ಸೀಮಾ ಹೈದರ್ ದೇಶ ತೊರೆಯದಿದ್ದರೆ ಆಂದೋಲನ ಆರಂಭಿಸುತ್ತೇವೆ ಎಂದು ಎಚ್ಚರಿಸಿದ್ದಾರೆ.
ಘಟನೆ ಹಿನ್ನೆಲೆ: ಗ್ರೇಟರ್ ನೋಯ್ಡಾ ಮೂಲದ ನಿವಾಸಿಯಾಗಿರುವ ಸಚಿನ್ ಜನಪ್ರಿಯ ಮೊಬೈಲ್ ಗೇಮ್ ಪಬ್ ಜೀ ಆಡುತ್ತಾ ಆಡುತ್ತಾ ಅದರ ಮೂಲಕವೇ ಒಬ್ಬ ಮಹಿಳೆಗೆ ಮೆಸೇಜ್ ಮಾಡಿ ಆಕೆಯನ್ನೇ ಪ್ರೀತಿಸಲು ತೊಡಗಿದ್ದರು. ಆ ಮಹಿಳೆಗೆ ಈಗಾಗಲೇ ನಾಲ್ಕು ಮಕ್ಕಳಿದ್ದು, ಆಕೆ ಪಾಕಿಸ್ತಾನ ಮೂಲದವಳು ಆಗಿದ್ದಾಳೆ ಎನ್ನುವುದು ಅರಿತುಕೊಂಡಿದ್ದರೂ ಆಕೆಯೊಂದಿಗೆ ನಿರಂತರವಾಗಿ ಚಾಟಿಂಗ್ ಮಾಡತೊಡಗಿದ್ದರು. ಹಲವು ಸಮಯದಿಂದ ಪಬ್ ಜೀ ಗೇಮ್ ಆಡುತ್ತಾ ಮೆಸೇಜ್ ಮಾಡಿದ ಸಚಿನ್ ಗೆ ಪಾಕ್ ಮೂಲದ ನಾಲ್ಕು ಮಕ್ಕಳ ತಾಯಿ ಸೀಮಾ ಗುಲಾಮ್ ಹೈದರ್ ಯೊಂದಿಗೆ ಪ್ರೇಮಾಂಕುರ ಆಗಿದೆ. ಅತ್ತ ಕಡೆಯಿಂದ ಸೀಮಾ ಕೂಡ ಸಚಿನ್ ನನ್ನು ಪ್ರೀತಿಸ ತೊಡಗಿದ್ದರು. ಇದಾದ ಬಳಿಕ ಸೀಮಾ ತನ್ನ ನಾಲ್ಕು ಮಕ್ಕಳೊಂದಿಗೆ ಅಕ್ರಮವಾಗಿ ನೇಪಾಳದ ಮೂಲಕ ಭಾರತಕ್ಕೆ ಬಂದು ಸಚಿನ್ ಇರುವ ಗ್ರೇಟರ್ ನೋಯ್ಡಾಕ್ಕೆ ಬಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.