ಸಹಾಯಕ ಪ್ರಾಧ್ಯಾಪಕರ ಬಡ್ತಿ ಶೀಘ್ರ ಕ್ರಮ: ಸಚಿವ ಡಾ. ಎಂ.ಸಿ. ಸುಧಾಕರ್
Quick action for promotion of assistant professors: Minister Dr. M.C. Sudhakar
Team Udayavani, Jul 18, 2023, 3:53 AM IST
ವಿಧಾನಪರಿಷತ್ತು: ಕರ್ನಾಟಕ ಲೋಕಸೇವಾ ಆಯೋಗದ ಮೂಲಕ 2011ನೇ ಸಾಲಿನಲ್ಲಿ ನೇಮಕಗೊಂಡ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ವೃತ್ತಿ ಪದನ್ನೋತಿ ನೀಡುವ ವಿಚಾರದಲ್ಲಿ ಆರ್ಥಿಕ ಇಲಾಖೆಯಿಂದ ಆಗಿರುವ ಗೊಂದಲ ನಿವಾರಿಸಿ ಸಹಾಯಕ ಪ್ರಾಧ್ಯಾಪಕರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಆದ್ಯತೆ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದ್ದಾರೆ.
ಸದನದಲ್ಲಿ ನಿಯಮ 330ರಡಿ ಜೆಡಿಎಸ್‌ನ ಮರಿತಿಬ್ಬೇಗೌಡ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಸಚಿವರು, ಇದರಲ್ಲಿ ಉನ್ನತ ಶಿಕ್ಷಣ ಇಲಾಖೆಯ ತಪ್ಪಿಲ್ಲ. ಎಐಸಿಟಿ ಮಾನದಂಡಗಳ ಪ್ರಕಾರವೇ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಕಳಿಸಿಕೊಡಲಾಗಿದೆ. ಆದರೆ, ಆರ್ಥಿಕ ಇಲಾಖೆಯು ಬೇರೆ ಇಲಾಖೆಗಳ ನಿಯಮಗಳಂತೆ ಪರಿಗಣಿಸಿ ಕಡತವನ್ನು ಪುನರ್‌ಪರಿಶೀಲನೆಗೆ ಕಳಿಸಿದ್ದಾರೆ. ಆಗಿರುವ ವಿಳಂಬ ಒಪ್ಪುವ ವಿಚಾರವೇ. ಆದ್ದರಿಂದ ಆರ್ಥಿಕ ಇಲಾಖೆಯಿಂದ ಆಗಿರುವ ಗೊಂದಲ ನಿವಾರಿಸಿ ಪ್ರಾಧ್ಯಾಪಕರಿಗೆ ನ್ಯಾಯ ಒದಗಿಸುವ ಕೆಲಸವನ್ನು ಆದ್ಯತೆಯ ಮೇರೆಗೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಈ ವಿಷಯದ ಬಗ್ಗೆ ಮಾತನಾಡಿದ ಜೆಡಿಎಸ್‌ನ ಎಸ್.ಎಲ್. ಭೋಜೇಗೌಡ, ಬಿಜೆಪಿಯ ವೈ.ಎ. ನಾರಾಯಣಸ್ವಾಮಿ ಮತ್ತಿತರು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ವೃತ್ತಿ ಪದನ್ನೋತಿ ವಿಚಾರ ಕಳೆದ 12 ವರ್ಷಗಳಿಂದ ಬಾಕಿ ಉಳಿದಿದೆ. ಇದರಿಂದ ಪ್ರಾಧ್ಯಾಪಕರು ಮಾನಸಿಕ ಶೋಷಣೆ ಅನುಭವಿಸುತ್ತಿದ್ದಾರೆ. ಐಎಎಸ್ ಅಧಿಕಾರಿಗಳು ಬಡ್ತಿಗೆ ಒಂದು ದಿನ ವಿಳಂಬವಾದರೆ ಸಹಿಸುವುದಿಲ್ಲ. ಪ್ರಾಧ್ಯಾಪಕರ ವಿಚಾರದಲ್ಲಿ ಈ ಧೋರಣೆ ಏಕೆ?. ಸರ್ಕಾರ ವಿಳಂಬ ಮಾಡದೇ ಕಾಲಮಿತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.