Kerala ಮಾಜಿ ಮುಖ್ಯಮಂತ್ರಿ ಉಮ್ಮನ್‌ ಚಾಂಡಿ ವಿಧಿವಶ

ಉಮ್ಮನ್‌ ಚಾಂಡಿ ಕೇರಳದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು.

Team Udayavani, Jul 18, 2023, 7:36 AM IST

2-kerala-former-cm

ಕೇರಳ: ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ(79) ಜು.18ರ ಮಂಗಳವಾರ ಬೆಳಿಗ್ಗೆ ನಿಧನದಾದರು.

ಉಮ್ಮನ್‌ ಚಾಂಡಿ ನಿಧನದ ಬಗ್ಗೆ ಅವರ ಪುತ್ರ ಫೇಸ್‌ಬುಕ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಫೆ. 12ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ.

ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಹಾಲಿ ಸಿಎಂ ಪಿಣರಾಯಿ ವಿಜಯನ್ ಟ್ವೀಟ್​ ಮೂಲಕ ಸಂತಾಪ ಸೂಚಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ನಿಧನಕ್ಕೆ ಕೇರಳ ಸರ್ಕಾರ ಎರಡು ದಿನಗಳ ಅಧಿಕೃತ ಶೋಕಾಚರಣೆ ಘೋಷಿಸಿದ್ದು, ಮಂಗಳವಾರ ರಾಜ್ಯದಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ. ಉಮ್ಮನ್‌ ಚಾಂಡಿ ಕೇರಳದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು.

 

ಉಮ್ಮನ್‌ ಚಾಂಡಿ ಅವರು ಕೇರಳದ 10ನೇ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಚಾಂಡಿ ಅವರು 2004ರಿಂದ 2006ರವರೆಗೆ ಮತ್ತು 2011ರಿಂದ 2016ರವರೆಗೆ ಮುಖ್ಯಮಂತ್ರಿಯಾಗಿದ್ದರು. 2006ರಿಂದ 2011ರವರೆಗೆ ಕೇರಳ ವಿಧಾನಸಭೆಯ ವಿಪಕ್ಷ ನಾಯಕನಾಗಿದ್ದರು.

ಚಾಂಡಿ ಅವರು 1970ರಿಂದ 2023(ನಿಧನರಾಗುವವರೆಗೆ) ಪುತ್ತುಪಲ್ಲಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ದೀರ್ಘಾವಧಿಗೆ ಶಾಸಕರಾಗಿ ಕಾರ್ಯನಿರ್ವಹಿಸಿದ ಹೆಗ್ಗಳಿಕೆಗೆ ಚಾಂಡಿ ಪಾತ್ರರಾಗಿದ್ದಾರೆ. ಇವರು ಕಾಂಗ್ರೆಸ್‌ ಪಕ್ಷದ ಹಿರಿಯ ಶಾಸಕರಾಗಿದ್ದಾರೆ.

1943ರ ಅಕ್ಟೋಬರ್‌ 31ರಂದು ಕೊಟ್ಟಾಯಮ್‌ ಜಿಲ್ಲೆಯ ಪುತ್ತುಪಲ್ಲಿ ಎಂಬಲ್ಲಿ ಉಮ್ಮನ್‌ ಚಾಂಡಿ ಜನಿಸಿದ್ದರು. ವಿದ್ಯಾರ್ಥಿ ದೆಸೆಯಿಂದಲೇ ಕೇರಳ ಸ್ಟೂಡೆಂಟ್ಸ್‌ ಯೂನಿಯನ್‌ (KSU)ನ ಕಾರ್ಯಕರ್ತನಾಗಿದ್ದು, ರಾಜಕೀಯ ಜೀವನಕ್ಕೆ ಕಾಲಿಟ್ಟಿದ್ದರು. ವಿದ್ಯಾರ್ಥಿ ದೆಸೆಯಲ್ಲಿ ಕಾಂಗ್ರೆಸ್‌ ಪಕ್ಷದ ವಿದ್ಯಾರ್ಥಿ ಸಂಘಟನೆಯಾದ ಕೆಎಸ್‌ ಯುನ ಘಟಕಾಧ್ಯಕ್ಷರಾಗಿ ಚಾಂಡಿ ಕಾರ್ಯನಿರ್ವಹಿಸಿದ್ದರು. ನಂತರ ರಾಜ್ಯಾಧ್ಯಕ್ಷರಾಗಿದ್ದರು.  ಬಿಎ ಪದವೀಧರರಾಗಿದ್ದ ಚಾಂಡಿ ನಂತರ ಎರ್ನಾಕುಲಂನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. ದೀರ್ಘಾವಧಿ ಅನಾರೋಗ್ಯದಿಂದ ಚಾಂಡಿ(79ವರ್ಷ) ಅವರು ಜುಲೈ 18ರಂದು ವಿಧಿವಶರಾದರು.

ಟಾಪ್ ನ್ಯೂಸ್

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.