Kerala ಮಾಜಿ ಸಿ.ಎಂ. ಉಮ್ಮನ್‌ ಚಾಂಡಿ ನಿಧನ; ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

Team Udayavani, Jul 18, 2023, 8:47 AM IST

3-siddaramaiah

ಬೆಂಗಳೂರು: ಹಿರಿಯ ರಾಜಕೀಯ ಮುತ್ಸದ್ದಿ ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ‌ ಉಮ್ಮನ್‌ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ನನಗೆ ಅತ್ಯಂತ ಆತ್ಮೀಯರಾಗಿದ್ದ ಉಮ್ಮನ್ ಚಾಂಡಿಯವರ ನಿಧನದ ಸುದ್ದಿ ಆಘಾತಕಾರಿ. ಕೇರಳ‌ ರಾಜ್ಯವನ್ನು ಮಾನವ ಅಭಿವೃದ್ಧಿಯ ಸೂಚ್ಯಂಕಗಳಲ್ಲಿ ಉನ್ನತ ಸ್ಥಾನದಲ್ಲಿ ಇರಿಸಲು ಕಾರಣರಾದ ಮುಖ್ಯಮಂತ್ರಿಗಳಲ್ಲಿ ಓಮನ್ ಚಾಂಡಿ ಕೂಡ ಒಬ್ಬರಾಗಿದ್ದರು. ಎರಡು ಬಾರಿ ಕೇರಳ ರಾಜ್ಯದ ಮುಖ್ಯಮಂತ್ರಿಗಳಾಗಿ ಅಪಾರ ಸಾಧನೆ ಮಾಡಿದವರಾಗಿದ್ದರು.

ಓಮನ್ ಚಾಂಡಿ ಅವರು 2004 ರಿಂದ 2006 ಮತ್ತು 2011 ರಿಂದ 2016 ರವರೆಗೆ ಕೇರಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯಪಾಲರಾಗಿ, ಕೇರಳ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ನಿರಂತರವಾಗಿ ಸಂವಿಧಾನದ ಆಶಯಗಳ, ಮೌಲ್ಯಗಳ‌ ರಕ್ಷಣೆಗೆ ಶ್ರಮಿಸಿ ಹೋರಾಟ ರಾಜಕಾರಣದ ಪರಂಪರೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸುತ್ತಿದ್ದರು.

1970 ರಿಂದ ಕೇರಳ ರಾಜ್ಯ ವಿಧಾನಸಭೆಗೆ ನಿರಂತರವಾಗಿ ಆಯ್ಕೆಯಾಗುತ್ತಾ ಅತ್ಯಂತ ದೀರ್ಘಾವಧಿ ಶಾಸಕರಾಗಿ ಪುತ್ತುಪ್ಪಲ್ಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಾ ಬಂದಿದ್ದರು. ವಿಶ್ವಸಂಸ್ಥೆಯಿಂದ ಸಾರ್ವಜನಿಕ ಸೇವೆಗಾಗಿ ಪ್ರಶಸ್ತಿಯನ್ನು ಗಳಿಸಿದ ಏಕೈಕ ಭಾರತೀಯ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನೂ ಗಳಿಸಿದ್ದರು.

ಅವರು ಮುಖ್ಯಮಂತ್ರಿ ಆಗಿದ್ದ ಮತ್ತು ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಲವು ಬಾರಿ‌ ಭೇಟಿಯಾಗಿದ್ದೆವು. ಅಭಿವೃದ್ಧಿ ವಿಚಾರದಲ್ಲಿ ಅವರದೇ ಆದ ಸ್ಪಷ್ಟ ತಿಳಿವಳಿಕೆ ಮತ್ತು ಮಾದರಿಗಳನ್ನು ಹೊಂದಿದ್ದರು. ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಜಾರಿ ಮಾಡಿದ್ದ ಅನ್ನಭಾಗ್ಯ ಸೇರಿದಂತೆ ಹಲವು ಯೋಜನೆಗಳನ್ನು ಅಪಾರವಾಗಿ ಶ್ಲಾಘಿಸಿದ್ದರು.‌ ಬಡವರ ಮತ್ತು ಮಧ್ಯಮ ವರ್ಗದವರ ಬದುಕನ್ನು ಉನ್ನತೀಕರಿಸುವ ಸ್ಪಷ್ಟ ಗುರಿ‌ ಮತ್ತು ಮಾರ್ಗ ನಾವು ಜಾರಿ ಮಾಡಿರುವ ಕಾರ್ಯಕ್ರಮಗಳಲ್ಲಿ, ನಾನು ಮಂಡಿಸಿದ ಆಯವ್ಯಯಗಳಲ್ಲಿ ಇದೆ ಎಂದು ಪತ್ರ ಬರೆದು ಮೆಚ್ವುಗೆ ಸೂಚಿಸಿದ್ದರು.

ಇವರ ನಿಧನ ಅಭಿವೃದ್ಧಿ ಮತ್ತು ಜನಪರ ರಾಜಕಾರಣಕ್ಕೆ, ಕೇರಳ ರಾಜ್ಯಕ್ಕೆ, ಭಾರತೀಯ ರಾಜಕಾರಣಕ್ಕೆ ಹಾಗೂ ನನಗೆ ವೈಯುಕ್ತಿಕವಾಗಿ ತುಂಬಲಾರದ ನಷ್ಟ.

ಮೌಲ್ಯಯುತ ರಾಜಕಾರಣದ ಹೆಜ್ಜೆಗುರುತನ್ನು ಉಳಿಸಿ ಹೋಗಿರುವ ಓಮನ್ ಚಾಂಡಿಯವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಕುಟುಂಬಕ್ಕೆ ಮತ್ತು ಅಪಾರ ಬಂಧು ಮಿತ್ರರಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಟಾಪ್ ನ್ಯೂಸ್

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.