Poonch: ಭಧ್ರತಾ ಪಡೆಗಳ ಕಾರ್ಯಾಚರಣೆ… ನಾಲ್ವರು ಉಗ್ರರನ್ನು ಸೆದೆಬಡಿದ ಸೇನೆ
Team Udayavani, Jul 18, 2023, 10:13 AM IST
ಜಮ್ಮು/ಕಾಶ್ಮೀರ: ಪೂಂಚ್‌ನ ಸಿಂಧ್ರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಸೋಮವಾರ ತಡ ರಾತ್ರಿ 11:30 ರ ಸುಮಾರಿಗೆ ಭದ್ರತಾ ಪಡೆಗಳ ನಡುವೆ ಮೊದಲ ಸುತ್ತಿನ ಎನ್‌ಕೌಂಟರ್ ನಡೆದಿದ್ದು, ನಂತರ ಈ ಭಾಗದಲ್ಲಿ ಡ್ರೋನ್ ಕಣ್ಗಾವಲು ಇರಿಸಲಾಗಿತ್ತು ಎನ್ನಲಾಗಿದೆ.
ಭಾರತೀಯ ಸೇನೆಯ ಅಧಿಕಾರಿಯ ಪ್ರಕಾರ, ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಮಂಗಳವಾರ ಮುಂಜಾನೆ ಎನ್‌ಕೌಂಟರ್ ನಡೆಸಿ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ವಿಶೇಷ ಪಡೆಗಳು, ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಸಿಬ್ಬಂದಿ ಸೇರಿತ್ತು. ಈ ಕಾರ್ಯಾಚರಣೆಯಲ್ಲಿ ಹತರಾದ ಭಯೋತ್ಪಾದಕರು ವಿದೇಶಿ ಭಯೋತ್ಪಾದಕರಾಗಿದ್ದು, ಅವರ ಗುರುತು ಪತ್ತೆ ಹಚ್ಚಲಾಗುತ್ತಿದೆ.
ಮೂಲಗಳ ಪ್ರಕಾರ, ಗಡಿ ನಿಯಂತ್ರಣ ರೇಖೆಯ ಆಚೆಯಿಂದ, ಐಎಸ್‌ಐ ಮತ್ತು ಭಯೋತ್ಪಾದಕ ಸಂಘಟನೆಗಳ ಮುಖಂಡರು ಭಯೋತ್ಪಾದಕರಿಗೆ ಒಳನುಸುಳಲು ಮತ್ತು ಸ್ವಾತಂತ್ರ್ಯ ದಿನಾಚರಣೆ ಮತ್ತು ರಕ್ಷಾ ಬಂಧನದ ಸಮಯದಲ್ಲಿ ಭಯೋತ್ಪಾದಕ ಕೃತ್ಯ ಎಸಗಲು ಪ್ರೇರಣೆ ನೀಡಿರಬಹುದು ಎಂದು ರಕ್ಷಣಾ ತಂಡ ಮಾಹಿತಿ ನೀಡಿದೆ.
ಇದನ್ನೂ ಓದಿ: ಸೀಮಾ ಹೈದರ್, ಪ್ರಿಯಕರ ಸಚಿನ್ ನನ್ನು 10 ಗಂಟೆ ವಿಚಾರಣೆ ನಡೆಸಿದ ಎಟಿಎಸ್ ಅಧಿಕಾರಿಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Digital Arrest: ಡಿಜಿಟಲ್ ಅರೆಸ್ಟ್ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು
Emotions: ಭಾವನೆಗಳ ಬಸ್ ನಿಲ್ದಾಣ
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.