ಡ್ರಗ್ಸ್ ಮಾರಾಟಕ್ಕೆ ವಾಟ್ಸ್ಆ್ಯಪ್ ಗ್ರೂಪ್!
Team Udayavani, Jul 18, 2023, 1:28 PM IST
ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಕೇರಳ ಮೂಲದ ಆರೋಪಿ ಯನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದಾರೆ.
ಕೆಂಗೇರಿ ನಿವಾಸಿ ಬೇಸ್ಟಿನ್ ರಾಯ್(32) ಬಂಧಿತ ಆರೋಪಿ. ಈತನಿಂದ 20 ಲಕ್ಷ ರೂ. ಮೌಲ್ಯದ 200 ಗ್ರಾಂ ತೂಕದ ಎಂಡಿಎಂಎ ಮತ್ತು ಒಂದು ಬೈಕ್, ಮೊಬೈಲ್ ವಶಕ್ಕೆ ಪಡೆ ಯಲಾಗಿದೆ ಎಂದು ಪೊಲೀಸರು ಹೇಳಿದರು.
ಆರೋಪಿ ಮೂರು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದು, ಕೆಂಗೇರಿ ಸಮೀಪದ ಮೆಡಿಕಲ್ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದಾನೆ. ಕೆಂಗೇರಿ ಬಳಿ ಫ್ಲ್ಯಾಟ್ನಲ್ಲಿ ಸ್ನೇಹಿತರ ಜತೆ ವಾಸವಾಗಿದ್ದು, ಕೇರಳದ ವಿದ್ಯಾರ್ಥಿಗಳ ಜತೆ ವಾಟ್ಸ್ಆ್ಯಪ್ ಗ್ರೂಪ್ ಮಾಡಿಕೊಂಡು ಕೆಲ ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ. ದಾಳಿ ವೇಳೆ ಈತನ ಫ್ಲ್ಯಾಟ್ನಲ್ಲಿದ್ದ ಇತರೆ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ. ಈತನ ವಿಚಾರಣೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.
ಜಯನಗರ ಉಪವಿಭಾಗದ ಎಸಿಪಿ ಕೆ.ವಿ.ಶ್ರೀನಿವಾಸ್, ಠಾಣಾಧಿಕಾರಿ ಎಂ.ಎಲ್.ಸುಬ್ರಹ್ಮಣ್ಯಸ್ವಾಮಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.