ರಾತ್ರಿಯ ಊಟ ಬೇಗ ಮಾಡಿದಷ್ಟು ಆರೋಗ್ಯಕ್ಕೆ ಒಳ್ಳೆಯದು…ಇದರ ಲಾಭಗಳೇನು…?

Team Udayavani, Jul 19, 2023, 11:54 AM IST

Web-11

ಸಮಯಕ್ಕೆ ಸರಿಯಾಗಿ ಆಹಾರ ಸೇವಿಸುವುದು ಆರೋಗ್ಯಕ್ಕೆ ಉತ್ತಮ. ಅದು ಬೆಳಿಗ್ಗೆ ಮಧ್ಯಾಹ್ನ, ರಾತ್ರಿಯೇ ಆಗಿರಲಿ. ಸರಿಯಾದ ಸಮಯಕ್ಕೆ ಆಹಾರ ಸೇವಿಸುವುರಿಂದ ಉತ್ತಮ ಅರೋಗ್ಯ ಪಡೆಯಬಹುದು. ರಾತ್ರಿ ಊಟ ಬೇಗ ಮಾಡಬೇಕು ಎಂದು ಹಲವರು ಹೇಳಿದ್ದನ್ನು ಕೇಳಿರುತ್ತೇವೆ.  ಆದರೆ ಯಾಕೆ..? ರಾತ್ರಿ ಬೇಗ ಊಟ ಮಾಡುವುದರಿಂದ ಆಗುವ ಲಾಭಗಳೇನು ಎಂಬುದು ನಿಮಗೆ ಗೊತ್ತಾ?

ರಾತ್ರಿ ಊಟವನ್ನು ತಡವಾಗಿ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲ ಎನ್ನಲಾಗುತ್ತದೆ. ನಮ್ಮ ಆರೋಗ್ಯ ಚೆನ್ನಾಗಿರಲು ಸಮಯಕ್ಕೆ ಸರಿಯಾಗಿ ಆಹಾರ ಸೇವಿಸುವುದು ಮುಖ್ಯ. ಅದರಲ್ಲೂ ರಾತ್ರಿ ಊಟ ಮಲಗುವ ಸಮಯಕ್ಕಿಂತ 1-2 ಗಂಟೆ ಮುಂಚಿತವಾಗಿ ಮಾಡಿದರೆ ಉತ್ತುಮ. ರಾತ್ರಿ ಬೇಗ ಊಟ ಮಾಡುವುದರಿಂದ ಆಗುವ ಆರೋಗ್ಯ ಪ್ರಯೋಜನಗಳೇನು? ಓದಿ..

ಜೀರ್ಣಕ್ರಿಯೆ ಸುಧಾರಣೆ:

ಮಲಗಿದ ನಂತರ ತಿಂದ ಅಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ಅದ್ದರಿಂದ ಮಲಗುವ ಎರಡರಿಂದ ಮೂರು ಗಂಟೆಗೆ ಮುಂಚೆ ಊಟ ಮಾಡುವುದು ಉತ್ತಮ. ಇದರಿಂದ ಆಹಾರ ಸರಿಯಾಗಿ ಜೀರ್ಣವಾಗಲು ಸಹಾಯ ಮಾಡುತ್ತದೆ.

ಉತ್ತಮ ನಿದ್ರೆ:

ನಾವು ಸೇವಿಸಿದ ಆಹಾರ ಜೀರ್ಣವಾಗಲು ಸ್ವಲ್ಪ ಸಮಯ ಬೇಕಾಗುತ್ತದೆ. ತಡವಾಗಿ ಅಹಾರ ಸೇವಿಸಿದರೆ ಮಲಗುವ ಸಮಯದಲ್ಲಿ ದೇಹದಲ್ಲಿ ಆಹಾರ ಜೀರ್ಣವಾಗಲು ಪ್ರಾರಂಭಿಸುವುದರಿಂದ ನಿದ್ರೆಗೆ ತೊಂದರೆ ಆಗಬಹುದು. ಹಾಗಾಗಿ ಊಟವಾದ ಕೂಡಲೇ ನಿದ್ದೆ ಮಾಡಬಾರದು ಎಂದು ಹಲವರು ಹೇಳುವುದನ್ನು ಕೇಳಿರುತ್ತೀರಿ. ಬೇಗ ಊಟ ಮಾಡುವುದರಿಂದ ಮಲಗುವ ಸಮಯ ಆಗುವ ವೇಳೆಗೆ ಜೀರ್ಣಕ್ರಿಯೆ ಉತ್ತಮವಾಗಿ ನಿದ್ರೆಯೂ ಸರಿಯಾಗಿ ಆಗುತ್ತದೆ. ಎದೆಯುರಿ, ಹೊಟ್ಟೆಯುರಿ ಯಂತಹ ಗ್ಯಾಸ್ಟ್ರಿಕ್ ಸಂಬಂಧಿಯ ಸಮಸ್ಯೆ ಇರುವವರು ಬೇಗ ಊಟ ಮಾಡುವುದು ಇನ್ನೂ ಉತ್ತಮ. ತಡವಾಗಿ ಊಟ ಮಾಡಿ ತಕ್ಷಣ ಮಲಗುವುದರಿಂದ ಗ್ಯಾಸ್ಟ್ರಿಕ್ ಸಮಸ್ಯೆ ಅನುಭವಿಸಬೇಕಾಗುತ್ತದೆ.

ಹೃದಯದ ಆರೋಗ್ಯಕ್ಕೆ:

ರಾತ್ರಿ ತಡವಾಗಿ ಊಟ ಮಾಡುವುದರಿಂದ ಆಹಾರ ಸರಿಯಾಗಿ ಜೀರ್ಣವಾಗದೇ ರಕ್ತದೊತ್ತಡದಂತಹ ಸಮಸ್ಯೆಗೆ ಕಾರಣವಾಗಬಹುದು. ಕೊಬ್ಬಿನಾಮ್ಲಗಳು ಉತ್ಪತ್ತಿಯಾಗುತ್ತದೆ. ಇದರಿಂದ ಹೃದಯರೋಗ, ಹೃದಯಾಘಾತ ಉಂಟಾಗುವ ಸಾಧ್ಯತೆ ಹೆಚ್ಚು. ಈ ಕಾರಣದಿಂದ ಹೃದಯದ ಖಾಯಿಲೆ, ರಕ್ತದೊತ್ತಡ, ಮಧುಮೇಹಿಗಳಿಗೆ ರಾತ್ರಿ ಹೊಟ್ಟೆ ತುಂಬಾ ಊಟ ಮಾಡಬಾರದೆಂದು ವೈದ್ಯರು ಹೇಳುತ್ತಿರುತ್ತಾರೆ. ಹಾಗಾಗಿ ರಾತ್ರಿ ಊಟವನ್ನು ತಡ ಮಾಡದೇ ಬೇಗ ಮಾಡುವುದರಿಂದ ಹೃದಯಕ್ಕೆ ಸಂಬಂಧಿಸಿದ ಖಾಯಿಲೆಗಳಿಂದ ತಪ್ಪಿಸಿಕೊಳ್ಳಬಹುದು.

ದೇಹದ ತೂಕ ನಿಯಂತ್ರಿಸಲು:

ಸರಿಯಾದ ಸಮಯಕ್ಕೆ ಊಟ ಮಾಡುವುದರಿಂದ ಆಹಾರ ಸರಿಯಾಗಿ ಜೀರ್ಣವಾಗಲು ಸಹಾಯವಾಗುತ್ತದೆ. ತಿಂದ ಆಹಾರದಲ್ಲಿನ ಪೌಷ್ಠಿಕಾಂಶಗಳು ದೇಹಕ್ಕೆ ಸರಿಯಾಗಿ ಹಿಡಿಯುತ್ತದೆ. ಚಯಾಪಚಯ ಕ್ರಿಯೆ ಸರಿಯಾಗಿ ಆಗುತ್ತದೆ. ಇದರಿಂದ ಬೊಜ್ಜು ನಿಯಂತ್ರಿಸಲು ಸಹಾಯ ಮಾಡುತ್ತದೆ. ದೇಹದಲ್ಲಿನ ಬೊಜ್ಜು ನಿಯಂತ್ರಿಸಿದರೆ ತೂಕ ಕಳೆದುಕೊಳ್ಳಲು ಸಹಾಯಕವಾಗುತ್ತದೆ.

ಇವುಗಳ ಬಗ್ಗೆ ಗಮನ ಹರಿಸಿ ಸರಿಯಾದ ರೀತಿಯಲ್ಲಿ ಆಹಾರ ಕ್ರಮ ಅನುಸರಿಸಿದರೆ ಆರೋಗ್ಯವೂ ಉತ್ತಮವಾಗುತ್ತದೆ. ಯಾವ ರೀತಿಯ ಆರೋಗ್ಯ ಸಮಸ್ಯೆ ಇಲ್ಲದೆ ಸಮಯಕ್ಕೆ ಸರಿಯಾಗಿ ನಿದ್ರೆಯೂ ಬರುತ್ತದೆ.

*ಕಾವ್ಯಶ್ರೀ

ಟಾಪ್ ನ್ಯೂಸ್

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಖುಷಿ ಕೊಡಬಲ್ಲ ಕೆಲವು ವಿಧಾನ ತಿಳಿಸಿ…ಏನೂ ಇಲ್ಲದೆಯೂ ಸಂತೋಷವಾಗಿರಿ!  

ಖುಷಿ ಕೊಡಬಲ್ಲ ಕೆಲವು ವಿಧಾನ ತಿಳಿಸಿ…ಏನೂ ಇಲ್ಲದೆಯೂ ಸಂತೋಷವಾಗಿರಿ!  

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

BGT: ವಿರಾಟ್‌ ಬಗ್ಗೆ ಆಸೀಸ್‌ ಜನರಿಗೆ ಯಾಕಿಷ್ಟು ಕುತೂಹಲ; ಇಂದು ಕಿಂಗ್‌ ಸಾಮ್ರಾಜ್ಯದ ಕಥೆ

BGT: ವಿರಾಟ್‌ ಬಗ್ಗೆ ಆಸೀಸ್‌ ಜನರಿಗೆ ಯಾಕಿಷ್ಟು ಕುತೂಹಲ; ಇದು ಕಿಂಗ್‌ ಸಾಮ್ರಾಜ್ಯದ ಕಥೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.