ಕಾನೂನು ಬಾಹಿರ ಮಣ್ಣು ಸಾಗಾಣಿಕೆಗಿಲ್ಲ ಕಡಿವಾಣ


Team Udayavani, Jul 18, 2023, 4:00 PM IST

ಕಾನೂನು ಬಾಹಿರ ಮಣ್ಣು ಸಾಗಾಣಿಕೆಗಿಲ್ಲ ಕಡಿವಾಣ

ಬೇತಮಂಗಲ: ಬೆಂಗಳೂರು-ಚೆನ್ನೈ ಕಾರಿಡಾರ್‌ ರಸ್ತೆಯ ಗುತ್ತಿಗೆದಾರರು ನಿರಂತರವಾಗಿ ಕೆರೆಗಳಲ್ಲಿ ಕಾನೂನು ಬಾಹಿರವಾಗಿ ಮಣ್ಣು ಸಾಗಾಣಿಕೆ ಮಾಡುತ್ತಿದ್ದರೂ, ಅಧಿಕಾರಿಗಳು ಮಾತ್ರ ಮೌನಕ್ಕೆ ಶರಣಾಗಿದ್ದಾರೆ.

ಕೆಜಿಎಫ್‌ ತಾಲೂಕಿನ ಗ್ರಾಮಾಂತರ ಭಾಗದಲ್ಲಿ ನಡೆಯುತ್ತಿರುವ ಬೆಂಗಳೂರು-ಚೆನ್ನೈ ಕಾರಿಡಾರ್‌ ರಸ್ತೆ ಕಾಮಗಾರಿಗೆ ತಾಲೂಕಿನ ಬಹುತೇಕ ಕೆರೆಗಳಲ್ಲಿ ಸರ್ಕಾರದ ನಿಯಮ ಪಾಲಿಸದೆ ಮಣ್ಣು ಸಾಗಾಣಿಕೆ ಮಾಡುತ್ತಿದ್ದರು, ಸಂಬಂಧಿಸಿದ ಅಧಿಕಾರಿಗಳು ಮಾತ್ರ ಯಾವ ಕ್ರಮಕ್ಕೂ ಮುಂದಾಗದೇ ಸುಮ್ಮನೇ ಕುಳಿತಿದ್ದಾರೆ.

ಕೆರೆಗಳ ಸ್ವರೂಪವೇ ನಾಶ: ರಸ್ತೆ ಕಾಮಗಾರಿ ಗುತ್ತಿಗೆದಾರರು ಕೆರೆಗಳಲ್ಲಿ ಸುಮಾರು 20-30 ಅಡ್ಡಿಯ ಅಳದ ವರೆಗೂ ಮಣ್ಣು ತೆಗೆಯುವ ಮೂಲಕ ಕೆರೆಯ ಸ್ವರೂಪವೇ ಬದಲಿಸಿದ್ದಾರೆ. ಇನ್ನೊಂದು ಕಡೆ ಕೆರೆಯಲ್ಲಿ ಅಳದವರೆಗೂ ಮಣ್ಣು ತೆಗೆದಿದ್ದು, ಮಳೆಗಾಲದ ಸಮಯದಲ್ಲಿ ತಗ್ಗುಗಳಲ್ಲಿ ನೀರು ತುಂಬುವುದರಿಂದ ಅಪಾಯ ತಪ್ಪಿದ್ದಲ್ಲ.

ಹಾಳಾದ ಹಳ್ಳಿಗಳ ರಸ್ತೆಗಳು: ಕಾರಿಡಾರ್‌ ರಸ್ತೆಗೆ ಬೃಹತ್‌ ವಾಹನಗಳಲ್ಲಿ ಮಣ್ಣು ಸಾಗಾಣಿಕೆ ಮಾಡುತ್ತಿರುವುದರಿಂದ ಹಳ್ಳಿ ಭಾಗದ ಬಹುತೇಕ ರಸ್ತೆಗಳು ಸಂಪೂರ್ಣ ನಾಶವಾಗಿವೆ, ಇನ್ನು ಕೆಲವು ರಸ್ತೆಗಳಲ್ಲಿ ಸಂಚಾರಕ್ಕೂ ತೊಂದರೆಯಾಗುತ್ತಿದೆ. ಬೇತಮಂಗಲ – ಕ್ಯಾಸಂಬಳ್ಳಿ ರಸ್ತೆ ಸಂಪೂರ್ಣ ನಾಶವಾಗಿ ವಾಹನ ಸಂಚಾರಕ್ಕೆ ತೊಂದರೆ ಯಾಗುತ್ತಿದ್ದು, ಅಲ್ಪ-ಸ್ವಲ್ಪ ಮಳೆ ಬಂದರೆ ಮಾತ್ರ ರಸ್ತೆಯೂ ಕೆಸರು ಗದ್ದೆಯಾಗುತ್ತದೆ, ಇದರಿಂದ ವಾಹನಗಳು ಹಾಗೂ ಸಾರ್ವಜನಿಕರು ಸಹ ಸಂಚರಿಸಲು ಹರಸಾಹಸ ಪಡುವಂತಾಗಿದೆ. ಬೇತಮಂಗಲ-ಕ್ಯಾಸಂಬಳ್ಳಿ ಮಾರ್ಗದ ಆಟೋ ಚಾಲಕರು, ವಾಹನ ಸಂಚಾಲಕರು ಹಾಗೂ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಹಲವು ಸಂಘ ಸಂಸ್ಥೆಗಳು ಸಹ ರಸ್ತೆಯನ್ನು ಸರಿ ಪಡಿಸಬೇಕೆಂದು ಒತ್ತಾಯ ಮಾಡಿದ ಘಟನೆಗಳು ನಡೆದಿವೆ.

ಕೆರೆ ಕೋಡಿ ತೆರೆದು, ನೀರು ಪೋಲು: ಇಲ್ಲಿನ ಪೋತರಾಜನಹಳ್ಳಿ ಗ್ರಾಮದ ಕೆರೆಯಲ್ಲಿ ಮಣ್ಣು ತೆಗೆಯಲು ಗುತ್ತಿಗೆದಾರರು ಕೆರೆಯ ಕೋಡಿ ತೆರುವುಗೊಳಿಸಿದ್ದು, ಕೆರೆಯ ನೀರನ್ನು ಖಾಲಿ ಮಾಡಿ 1 ವರ್ಷದಿಂದ ಕೆರೆಯಲ್ಲಿ ಮಣ್ಣು ಸಾಗಾಣಿಕೆ ಮಾಡುತ್ತಿದ್ದಾರೆ. ಶೀಘ್ರವಾಗಿ ಕೆರೆಯ ಕೋಡಿ ಸರಿಪಡಿಸಿ ಮಳೆ ನೀರು ಶೇಖರಣೆಯಾಗಲು ಕ್ರಮ ವಹಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕೆರೆಗೆ ಕಂದಾಯ ಇಲಾಖೆ ಅಧಿಕಾರಿಗಳು, ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು.

ಪೋತರಾಜನಹಳ್ಳಿ ಗ್ರಾಮದ ಸುಮಾರು 100ಕ್ಕೂ ಹೆಚ್ಚು ರೈತರು ಕೆರೆಯ ನೀರಿನ ಮೂಲಕ ಕೃಷಿ ಚಟುವಟಿಕೆ ಯಲ್ಲಿ ಜೀವನ ರೂಪಿಸಿಕೊಂಡಿದ್ದರು, ಗುತ್ತಿಗೆದಾರರು ಕೆರೆಯ ನೀರನ್ನು ಹೊರಗೆ ಬಿಟ್ಟಿದ್ದು, ಅನಗತ್ಯವಾಗಿ ಮಣ್ಣು ತೆಗೆಯು ತ್ತಿದ್ದಾರೆ, ಸಂಬಂಧ ಪಟ್ಟ ಇಲಾಖೆ ಅಧಿಕಾರಿ ಗಳು ಭೇಟಿ ನೀಡಿ ಕ್ರಮ ಕೈಗೊಳ್ಳಬೇಕಿದೆ. ●ಅಪ್ಪಿ, ಗ್ರಾಪಂ ಸದಸ್ಯ ಪೋತರಾಜನಹಳ್ಳಿ

ಕಂದಾಯ ಇಲಾಖೆ ಹಾಗೂ ಭೂ ವಿಜ್ಞಾನ ಇಲಾಖೆಯಲ್ಲಿ ಕೆರೆಗಳಲ್ಲಿ ಮಣ್ಣು ತೆಗೆಯಲು 04 ಅಡ್ಡಿಗಳು ಮಾತ್ರ ಅನುಮತಿ ನೀಡಿದ್ದಾರೆ. ಅದರೆ, ಗುತ್ತಿಗೆ ದಾರರು 20-30 ಅಡ್ಡಿಗಳವರೆಗೂ ಮಣ್ಣು ತೆಗೆಯುತ್ತಿದ್ದರು, ಅಧಿಕಾರಿಗಳು ಮಾತ್ರ ಇತ್ತ ಗಮನ ನೀಡದೆ ಮೌನವಾಗಿಯೇ ಉಳಿದಿದ್ದಾರೆ. ● ಹರೀಕುಮಾರ್‌, ರೈತ ಸಂಘದ ಮುಖಂಡರು

-ಆರ್‌.ಪುರುಷೋತ್ತಮ್‌ ರೆಡ್ಡಿ

ಟಾಪ್ ನ್ಯೂಸ್

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

1-rrttt

Yakshagana;ಕಲೆ ಬದುಕಿನ ಸಂಪಾದನೆಗಲ್ಲ, ನಮ್ಮ ಸಂತೋಷಕ್ಕೆ:ಸಂಜೀವ ಸುವರ್ಣ

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

Kolar ಗುಂಪು ಘರ್ಷಣೆ: ಮಾರಕಾಸ್ತ್ರಗಳಿಂದ ಹಲ್ಲೆ

10

Lok Adalat: ವಿಚ್ಛೇದನಕ್ಕೆ ಬಂದಿದ್ದ ದಂಪತಿ, ಅದಾಲತ್‌ನಲ್ಲಿ ಒಂದಾದರು!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

Kolar: ಜಿಲ್ಲೆಯಲ್ಲಿ ದಿಢೀರ್‌ ಸದ್ದು ಮಾಡಿದ ಡಿಜೆ!

High-Court

Kolar: ಬಾಲಕಿಯರ ಖಾಸಗಿ ಫೋಟೋ ತೆಗೆದ ಶಿಕ್ಷಕ; ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

KUNDAPURA-BOA

Kundapura: ಮುಳುಗುತ್ತಿದ್ದ ಬೋಟ್‌ ರಕ್ಷಣೆ: 6 ಮೀನುಗಾರರು ಪಾರು

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Daily Horoscope

Daily Horoscope; ಈ ರಾಶಿಯ ಅವಿವಾಹಿತರಿಗೆ ಬಾಳ ಸಂಗಾತಿ ಲಭಿಸುವ ಚಿಂತೆ.

tirupati

Tirupati; ಶೀಘ್ರ ಕಲಬೆರಕೆ ಪತ್ತೆ ಯಂತ್ರ ಅಳವಡಿಸಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.