Mumbai-Nashik Highway; ಜೀಪ್- ಟ್ರಕ್ ನಡುವೆ ಅಪಘಾತ: 6 ಮಂದಿ ಮೃತ್ಯು
Team Udayavani, Jul 18, 2023, 5:17 PM IST
ಥಾಣೆ: ವೇಗವಾಗಿ ಬಂದ ಟ್ರಕ್ ವೊಂದು ಜೀಪ್ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.
ಮೃತರನ್ನು ಚಿನ್ಮಯ್ ಶಿಂಧೆ (15), ರಿಯಾ ಪರದೇಶಿ, ಚೈತಾಲಿ ಪಿಂಪಲ್ (27), ಸಂತೋಷ್ ಅನಂತ್ ಜಾಧವ್ (50), ವಸಂತ ಧರ್ಮ ಜಾಧವ್ (50) ಮತ್ತು ಪ್ರಜ್ವಲ್ ಫಿರ್ಕೆ ಎಂದು ಗುರುತಿಸಲಾಗಿದೆ.
ಇಬ್ಬರು ಮಹಿಳೆಯರು ಸೇರಿದಂತೆ ಜೀಪ್ನಲ್ಲಿದ್ದ ಆರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಗಾಯಾಳುಗಳನ್ನು ಕಲ್ವಾ ಮತ್ತು ಭಿವಂಡಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆಲವು ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರನ್ನು ಹೊತ್ತ ಜೀಪ್ ಪಾಡ್ಘಾ ದಿಂದ ಖಡವಲಿ ರೈಲು ನಿಲ್ದಾಣದ ಕಡೆಗೆ ಸಾಗುತ್ತಿದ್ದಾಗ ಎದುರುಗಡೆಯಿಂದ ಬಂದ ಟ್ರಕ್ ಡಿಕ್ಕಿ ಹೊಡೆದಿದೆ. ಜೀಪ್ ಸುಮಾರು 100 ಮೀ. ದೂರದಲ್ಲಿ ಪಲ್ಟಿಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ರಸ್ತೆಯಲ್ಲಿ ಕೆಲ ಸಮಯ ಟ್ರಾಫಿಕ್ ಜಾಮ್ ಉಂಟಾಗಿದ್ದು ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭಿವಂಡಿ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.