ಒಂದೇ ಚಿತ್ರದಲ್ಲಿ ಕರಾವಳಿಯ ‘RRR’: ರಕ್ಷಿತ್‌ ಶೆಟ್ಟಿಯದೇ ಕಥೆ: Raj B Shetty ಹೇಳಿದ್ದೇನು?

Team Udayavani, Jul 18, 2023, 5:46 PM IST

tdy-19

ಬೆಂಗಳೂರು: ಕನ್ನಡ ಸಿನಿಮಾದಲ್ಲಿ ʼಆರ್‌ ಆರ್‌ ಆರ್‌ʼ ಪ್ರತಿಭೆ ಅನೇಕರನ್ನು ಸೆಳೆದಿದೆ. ʼಆರ್‌ ಆರ್‌ ಆರ್‌ʼ ಅಂದರೆ ಜನಪ್ರಿಯ ಸಿನಿಮಾವಲ್ಲ.‌ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಮತ್ತು ರಾಜ್ ಬಿ ಶೆಟ್ಟಿ.

ಈ ಮೂವರ ಸಿನಿಮಾಗಳಿಗೆ ಪ್ರತ್ಯೇಕವಾದ ಫ್ಯಾನ್‌ ಬೇಸ್‌ ಗಳಿವೆ. ಮೂವರು ಅಪ್ಪಟ ಕರಾವಳಿ ಪ್ರತಿಭೆಯಾದರೂ ಕರಾವಳಿ ಆಚರಣೆಗಳ ಸುತ್ತ ಸಿನಿಮಾ ಮಾಡಿ ಪ್ಯಾನ್‌ ಇಂಡಿಯಾ ಮೆಚ್ಚವಂತೆ ಮಾಡಿದ್ದಾರೆ. ʼಕಾಂತಾರಾʼ ʼ777ಚಾರ್ಲಿʼ ಹಾಗೂ ʼ ಗರುಡ ಗಮನ ವೃಷಭ ವಾಹನʼ ಈ ಮೂರು ಸಿನಿಮಾಗಳು ಸಿನಿಮಾರಂಗದಲ್ಲಿ ಕಮಾಲ್‌ ಮಾಡಿರುವುದು ಗೊತ್ತೇ ಇದೆ.

ರಕ್ಷಿತ್‌ ಶೆಟ್ಟಿ ಹಾಗೂ ರಿಷಬ್‌ ಶೆಟ್ಟಿ “ತುಘ್ಲಕ್”, “ಉಳಿದವರು ಕಂಡಂತೆ”, “ಕಿರಿಕ್ ಪಾರ್ಟಿ”, “ರಿಕ್ಕಿ” ಮತ್ತು “ಅವನೇ ಶ್ರೀಮನ್ನಾರಾಯಣ” ಸಿನಿಮಾದಲ್ಲಿ ಜೊತೆಯಾಗಿ ಕೆಲಸ ಮಾಡಿದ್ದಾರೆ. ಇನ್ನು ರಿಷಬ್ ಅವರು “ಗರುಡ ಗಮನ ವೃಷಭ ವಾಹನ” ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ರಾಜ್‌ ಬಿ ಶೆಟ್ಟಿ ಅವರೊಂದಿಗೆ ನಟಿಸಿದ್ದಾರೆ. ರಾಜ್‌ ಬಿ ಶೆಟ್ಟಿ ರಿಷಬ್‌ ಅವರ ʼಕಾಂತಾರʼ ಸಿನಿಮಾದ ಭೂತಕೋಲವನ್ನು ಸಂಯೋಜನೆ ಮಾಡಿದ್ದರು. ಇದರೊಂದಿಗೆ ರಾಜ್‌ ಬಿ ಶೆಟ್ಟಿ ರಕ್ಷಿತ್ ಶೆಟ್ಟಿ ಅವರ “777 ಚಾರ್ಲಿ” ಕೆಲ ಭಾಗಗಳನ್ನು ಬರೆದಿದ್ದಾರೆ. ಅದೇ ಚಿತ್ರದಲ್ಲಿ ಒಂದು ಪಾತ್ರವನ್ನೂ ಮಾಡಿದ್ದಾರೆ.

ಇತ್ತೀಚೆಗೆ ರಿಷಬ್‌ ಶೆಟ್ಟಿ ಹಾಗೂ ರಕ್ಷಿತ್‌ ಶೆಟ್ಟಿ ಒಂದೇ ತಟ್ಟೆಯಲ್ಲಿ ಊಟ ಮಾಡಿದ್ದು ವೈರಲ್ ಆಗಿತ್ತು. ಪರಸ್ಪರರ ಚಿತ್ರದಲ್ಲಿ ರಕ್ಷಿತ್‌, ರಿಷಬ್‌ ಹಾಗೂ ರಾಜ್ ಬಿ ಶೆಟ್ಟಿ ಕೆಲಸ ಮಾಡಿದ್ದಾರೆ. ಆದರೆ ಮೂವರು ಜೊತೆಯಾಗಿ ಯಾವುದೇ ಚಿತ್ರದಲ್ಲಿ ಕಾಣಿಸಿಕೊಂಡಿಲ್ಲ.

ʼಟೋಬಿʼ ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿರುವ ರಾಜ್‌ ಬಿ ಶೆಟ್ಟಿ ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.

“ರಕ್ಷಿತ್‌ ನಮ್ಮ ಮೂವರಿಗಾಗಿ ಒಂದು ಕಥೆ ಬರೆದಿದ್ದಾರೆ. ಅದು ಪೂರ್ಣಗೊಂಡರೆ ನಾವು ಮೂವರು ಆ ಕಥೆಯಲ್ಲಿರುತ್ತೇವೆ. ಆದರೆ ಕೆಲವೊಂದು ಕಾರಣಗಳಿಂದಾಗಿ ಆ ಯೋಜನೆ ಸದ್ಯಕ್ಕೆ ನಿಂತಿದೆ. ಎಲ್ಲವೂ ಹೊಂದಾಣಿಕೆಯಾದರೆ ಪ್ರೇಕ್ಷಕರು ನಮ್ಮನ್ನು ಒಟ್ಟಿಗೆ ದೊಡ್ಡ ಪರೆದಯಲ್ಲಿ ನೋಡಬಹುದು” ಎಂದು ಹೇಳಿರುವುದಾಗಿ “ಓಟಿಟಿ ಪ್ಲೇ”  ವರದಿ ತಿಳಿಸಿದೆ.

ಸದ್ಯ ಬಾಸಿಲ್‌ ನಿರ್ದೇಶನದ ʼಟೋಬಿʼ ಸಿನಿಮಾದ ಪ್ರಚಾರ ಭರದಿಂದ ಸಾಗುತ್ತಿದ್ದು, ಸಿನಿಮಾದ ಪೋಸ್ಟರ್‌, ಫಸ್ಟ್‌ ಲುಕ್‌ ಸಿಕ್ಕಾಪಟ್ಟೆ ಹೈಪ್‌ ಕ್ರಿಯೇಟ್‌ ಮಾಡಿದೆ. ಆಗಸ್ಟ್‌ 25 ರಂದು ಸಿನಿಮಾ ತೆರೆಗೆ ಬರಲಿದೆ. ಕೆವಿಎನ್ ಪ್ರೊಡಕ್ಷನ್ಸ್ ಕರ್ನಾಟಕದಲ್ಲಿ ಚಿತ್ರವನ್ನು ಪ್ರಸ್ತುತ ಹಾಗೂ ವಿತರಣೆಯನ್ನು ಮಾಡಲಿದೆ.

ಟಾಪ್ ನ್ಯೂಸ್

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

Drone Prathap: ಸಿನಿಮಾರಂಗಕ್ಕೆ ಡ್ರೋನ್‌ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.