ಕೃಷಿಯೇತರ ಉದ್ದೇಶಕ್ಕಾಗಿ ಕೃಷಿ ಭೂಮಿ ಪರಿವರ್ತನೆ ರದ್ದು

ಜಿಲ್ಲಾಧಿಕಾರಿ ಮಟ್ಟದಲ್ಲೇ ಅವಕಾಶ

Team Udayavani, Jul 19, 2023, 8:20 AM IST

PADDY FARMERS

ಉಡುಪಿ: ಇತರ ಉದ್ದೇಶಗಳಿಗೆ ಬಳಸುವುದಕ್ಕಾಗಿ ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿ ಭೂ ಪರಿ ವರ್ತನೆ ಮಾಡಿಸಿ ದ್ದ ಕೃಷಿ ಭೂಮಿಯನ್ನು ಮತ್ತೆ ಕೃಷಿ ಉದ್ದೇಶಕ್ಕೆ ಪರಿ ವರ್ತಿಸಲು ಜಿಲ್ಲಾಧಿಕಾರಿಗಳ ಹಂತದಲ್ಲೇ ಕ್ರಮ ಕೈಗೊಳ್ಳುವು ದಕ್ಕೆ ಸರಕಾರ ಹಸುರು ನಿಶಾನೆ ನೀಡಿದೆ. ಇದುವರೆಗೆ ಇದಕ್ಕಾಗಿ ಕರ್ನಾಟಕ ಮೇಲ್ಮನವಿ ನ್ಯಾಯಮಂಡಳಿ (ಕೆಎಟಿ)ಗೆ ಮೇಲ್ಮನವಿ ಸಲ್ಲಿಸಬೇಕಿತ್ತು.

ಯಾವುದೇ ಆದಿಭೋಗದಾರನು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 95 (2)ರ ಅಡಿ ಕಂದಾಯ ವಿಧಿಸಲಾಗಿರುವ ಅಥವಾ ಬೇಸಾಯದ ಉದ್ದೇಶ   ಕ್ಕೆ ಹೊಂದಿರುವ ಭೂಮಿ ಯನ್ನು ಪೂರ್ಣವಾಗಿ ಅಥವಾ ಭಾಗಶಃ ಪರಿವರ್ತಿಸಲು ಇಚ್ಛಿಸಿ ದಲ್ಲಿ ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿ ಭೂ ಪರಿವರ್ತನೆಗೆ ಅವಕಾಶ ಕಲ್ಪಿಸಲಾಗಿದೆ.

ಯಾಕೆ ಮರಳಿ ಕೃಷಿ ಭೂಮಿಯಾಗಿ ಪರಿವರ್ತನೆ?
ಸುಳ್ಳು ದಾಖಲಾತಿ ನೀಡಿ ಭೂ ಪರಿವರ್ತನೆ, ಭೂ ಪರಿವರ್ತನೆಯ ಬಳಿಕ ಹಣ  ಕಾಸು ಸಮಸ್ಯೆಯಿಂದ ನಿರ್ದಿಷ್ಟ ಉದ್ದೇಶಕ್ಕೆ ಅಭಿವೃದ್ಧಿ ಪಡಿಸಲು ಸಾಧ್ಯವಾಗದೆ ಇರು ವುದು ಅಥವಾ ನ್ಯಾಯಾಲಯದಲ್ಲಿ ವ್ಯಾಜ್ಯ ಇದ್ದು, ಮರಳಿ ಕೃಷಿ ಭೂಮಿಯಾಗಿ ಪರಿವರ್ತಿಸಿಕೊಳ್ಳಲು ಅವಕಾಶ ನೀಡುವಂತೆ ಅನೇಕರು ಸರಕಾರಕ್ಕೆ ಮನವಿ ಸಲ್ಲಿಸಿದ್ದರು.

ಕರಾವಳಿಯಲ್ಲಿ ಭೂ ಪರಿವರ್ತನೆ ಕ್ರಮ ಹೇಗೆ?
ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂ ಪರಿವರ್ತನೆ ಕ್ರಮ ಭಿನ್ನವಾಗಿದೆ. ಕರಾವಳಿಯೇತರ ಜಿಲ್ಲೆಗಳಲ್ಲಿ ಎಲ್ಲ ರೀತಿಯ ಜಮೀನುಗಳ ಭೂ ಪರಿವರ್ತನೆ ಸಂಬಂಧ ಜಿಲ್ಲಾಧಿಕಾರಿಗಳೇ ಆದೇಶ ಹೊರಡಿಸುತ್ತಾರೆ. ಆದರೆ ದ.ಕ. ಮತ್ತು ಉಡುಪಿಯಲ್ಲಿ ಭೂ ಸುಧಾರಣೆ ಕಾಯ್ದೆಯಂತೆ ಮಂಜೂರಾದ ಜಮೀನು (ಆದಿಭೋಗ ಹಕ್ಕಿನ ಜಮೀನು)ಗಳು ಮತ್ತು ಡಿಕ್ಲರೇಶನ್‌ ಜಮೀನುಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಹಾಗೂ ಮೂಲಿಹಕ್ಕಿನ ಜಮೀನು (ಪಟ್ಟಾ ಭೂಮಿ)ಗಳಿಗೆ ಸಂಬಂಧಿಸಿದ ಭೂ ಪರಿವರ್ತನೆ ಆದೇಶವನ್ನು ತಹಶೀಲ್ದಾರ್‌ ಹೊರಡಿಸುತ್ತಾರೆ.

ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಒಮ್ಮೆ ಭೂ ಪರಿವರ್ತನೆ ಆದ ಭೂಮಿಯನ್ನು ಮತ್ತೆ ಕೃಷಿ ಭೂಮಿಯಾಗಿಸಲು ಭೂಮಾಪನ ಇಲಾಖೆಯು ಅವಕಾಶ ನೀಡಿದೆ. ಇದರಿಂದ ಅನೇಕರಿಗೆ ಅನುಕೂಲವಾಗಲಿದೆ.

ಜಿಲ್ಲಾಧಿಕಾರಿಗಳು ಭೂ ಪರಿವರ್ತನೆ ಆದೇಶ ರದ್ದು ಗೊಳಿಸಿ ಪುನಃ ಕೃಷಿ ಉದ್ದೇಶಕ್ಕೆ ಪರಿವರ್ತಿಸಲು ಭೂ ಪರಿವರ್ತನ ತಂತ್ರಾಂಶದಲ್ಲಿ ತಾಂತ್ರಿಕ ಅವಕಾಶ ಕಲ್ಪಿಸಲಾಗುವುದು. ಈ ರೀತಿಯ ಭೂಮಿ ಇರುವಂತಹ ಪ್ರದೇಶದ ಸ್ಥಳೀಯ ಯೋಜನಾ ಪ್ರಾಧಿಕಾರದ ಕಾನೂನು, ನಿಯಮಾವಳಿ ಅಡಚಣೆ ಯಾಗುವುದಿಲ್ಲ ಎಂಬುದನ್ನು ಸಕ್ಷಮ ಪ್ರಾಧಿಕಾರದಿಂದ ಖಾತರಿ ಪಡಿಸಿ ನಿಯಮಾನುಸಾರ ಕ್ರಮ ಕೈಕೊಳ್ಳಲು ಕಂದಾಯ ಇಲಾಖೆಯು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ವಿವಿಧ ಕಾರಣಗಳಿಂದ ಮತ್ತೆ ಕೃಷಿ ಉದ್ದೇಶಕ್ಕೆ ಪರಿವರ್ತಿಸಲು ಕೋರಿಕೆ ಬಂದಲ್ಲಿ ರಾಜ್ಯ ಭೂ ಮಾಪನ ಇಲಾಖೆ ಆಯುಕ್ತರ ಆದೇಶದ ಪ್ರಕಾರ ನಿಯಮಾವಳಿ ಪರಿಶೀಲಿಸಿ ಜಿಲ್ಲೆಗೆ ಪೂರಕ ವಾಗಿರುವಂತೆ ಕ್ರಮ ಕೈಗೊಳ್ಳಲಾಗುವುದು.
-ಡಾ| ವಿದ್ಯಾಕುಮಾರಿ ಕೆ., ಜಿಲ್ಲಾಧಿಕಾರಿ, ಉಡುಪಿ

ಟಾಪ್ ನ್ಯೂಸ್

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

7

Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ

5-thekkatte

Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.