ನಿರ್ಭಯಾ ಅಪರಾಧಿಗಳಿಗೆ ಮರಣದಂಡನೆ ವಿಧಿಸುವಂತೆ ಕೋರಿದ ವಕೀಲರಿಂದ ಬ್ರಿಜ್ ಭೂಷಣ್ ಪರ ವಾದ
Team Udayavani, Jul 19, 2023, 9:00 AM IST
ನವದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪವನ್ನು ಎದುರಿಸುತ್ತಿರುವ ಡಬ್ಲ್ಯುಎಫ್‌ಐ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಅವರಿಗೆ ಮಂಗಳವಾರ ಅವೆನ್ಯೂ ನ್ಯಾಯಾಲಯ ಎರಡು ದಿನದ ಮಧ್ಯಂತರ ಜಾಮೀನು ನೀಡಿದೆ.
2012 ರ ನಿರ್ಭಯಾ ಪ್ರಕರಣದಲ್ಲಿ ಪೊಲೀಸರ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ವಾದ ಮಂಡಿಸಿದ್ದ ಹಾಗೂ ಅಪರಾಧಿಗಳಿಗೆ ಮರಣದಂಡನೆ ವಿಧಿಸಬೇಕೆಂದು ಕೋರ್ಟಿನಲ್ಲಿ ವಾದ ಮಂಡಿಸಿದ್ದ ಮೋಹನ್ ಅವರು ಕುಸ್ತಪಟುಗಳ ಪ್ರಕರಣದಲ್ಲಿ ಬ್ರಿಜ್ ಪರವಾಗಿ ವಾದ ಮಂಡಿಸಿದ್ದಾರೆ.
ರಾಜೀವ್ ಮೋಹನ್ ಮಂಗಳವಾರ ದೆಹಲಿಯ ರೂಸ್ ಅವೆನ್ಯೂ ಕೋರ್ಟ್‌ನಲ್ಲಿ ಬ್ರಿಜ್ ಭೂಷಣ್ ಪರ ವಾದ ಮಂಡಿಸಿದ್ದಾರೆ. ಸದ್ಯ ಕೋರ್ಟ್ ಬ್ರಿಜ್ ಭೂಷಣ್ ಅವರಿಗೆ ಎರಡು ದಿನಗಳ ಮಧ್ಯಂತರ ಜಾಮೀನು ನೀಡಿದೆ. ಅವರ ಮುಂದಿನ ಜಾಮೀನು ಅರ್ಜಿಯ ವಿಚಾರಣೆ ಜುಲೈ 20 ರಂದು ನಡೆಯಲಿದೆ.
ಈ ವರ್ಷದ ಆರಂಭದಿಂದಲೇ ಸಾಕ್ಷಿ ಮಲ್ಲಿಕ್ ಸೇರಿದಂತೆ ಪ್ರಮುಖ ಕುಸ್ತಿಪಟುಗಳು ಡಬ್ಲ್ಯುಎಫ್‌ಐ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪವನ್ನು ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಕುಸ್ತಿಪಟುಗಳು ಬ್ರಿಜ್ ಭೂಷಣ್ ರನ್ನು ಡಬ್ಲ್ಯುಎಫ್‌ಐ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಸಬೇಕೆಂದು ಆಗ್ರಹಿಸಿದ್ದಾರೆ. ಈ ಸಂಬಂಧ ಜೂನ್ 2 ರಂದು ದೆಹಲಿ ಪೊಲೀಸರು ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಆರೋಪಗಳ ಆಧಾರದ ಮೇಲೆ ಎರಡು ಎಫ್ಐಆರ್ ಮತ್ತು 10 ದೂರುಗಳನ್ನು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.