ಬಂಟಕಲ್‌ ತಾಂತ್ರಿಕ ಕಾಲೇಜು: ಸಾಧನೆಯ ಮೈಲಿಗಲ್ಲು ;ಹೊಸ ಕೋರ್ಸ್‌ಗಳ ಪ್ರಾರಂಭ

Team Udayavani, Jul 19, 2023, 5:21 PM IST

ಬಂಟಕಲ್‌ ತಾಂತ್ರಿಕ ಕಾಲೇಜು: ಸಾಧನೆಯ ಮೈಲಿಗಲ್ಲು ;ಹೊಸ ಕೋರ್ಸ್‌ಗಳ ಪ್ರಾರಂಭ

ಶಿರ್ವ: ಉಡುಪಿಯ ಶ್ರೀ ಸೋದೆ ವಾದಿರಾಜ ಮಠ ಪ್ರತಿಷ್ಠಾನದ ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಎಂಜಿನಿಯರಿಂಗ್‌ ಕೋರ್ಸ್‌ಗಳ ಜತೆಗೆ ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಪದವಿ (ಎಂಬಿಎ) ಮತ್ತು ಶ್ರೀ ಸೋದೆ ವಾದಿರಾಜ ಮಠದ ಆಡಳಿತಕ್ಕೆ ಒಳಪಟ್ಟ ಶ್ರೀ ವಿಷ್ಣುಮೂರ್ತಿ ಹಯವದನ ಸ್ವಾಮಿ ಎಜ್ಯುಕೇಶನ್‌ ಸೊಸೈಟಿಯ ಆಶ್ರಯದಲ್ಲಿ ನಿರಾಮಯ ಕಾಲೇಜ್‌ ಆಫ್‌ ನರ್ಸಿಂಗ್‌ ಹಾಗೂ ನಿರಾಮಯ ಕಾಲೇಜ್‌ ಆಫ್‌ ಅಲೈಡ್‌ ಹೆಲ್ತ್‌ ಸೈನ್ಸ್‌ ಕೋರ್ಸ್‌ಗಳನ್ನು ಪ್ರಾರಂಭಿಸಲು ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ ಹಾಗೂ ಕರ್ನಾಟಕ ಸರಕಾರದಿಂದ ಅನುಮತಿ ದೊರೆತಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ರತ್ನ ಕುಮಾರ್‌ ತಿಳಿಸಿದ್ದಾರೆ.

ಅವರು ಜು. 19 ರಂದು ಕಾಲೇಜಿಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ ಶ್ರೀ ಸೋದೆ ವಾದಿರಾಜ ಮಠ ಪ್ರತಿಷ್ಠಾನದಿಂದ ಸ್ಥಾಪಿತ‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯಕ್ಕೆ ನ್ಯಾಕ್‌ ನಿಂದ ಎ ಶ್ರೇಣಿಯ ಮಾನ್ಯತೆ ಹಾಗೂ ರಾಷ್ಟ್ರೀಯ ಮೌಲ್ಯಾಂಕನ ಮಂಡಳಿ (ಎನ್‌ಬಿಎ)ಯಿಂದ ಮಾನ್ಯತೆ ದೊರೆತ್ತಿದೆ. ಗುಣಮಟ್ಟದ ತಾಂತ್ರಿಕ ಶಿಕ್ಷಣವನ್ನು ಖಾತ್ರಿಪಡಿಸುವ ಈ ಎರಡು ಮಾನ್ಯತೆಗಳನ್ನು ವಿದ್ಯಾಸಂಸ್ಥೆಯು ಪ್ರಾರಂಭವಾದ 9 ಮತ್ತು 11ನೇ ವರ್ಷಗಳಲ್ಲಿ ಪಡೆದಿರುವ ಕರಾವಳಿ ಕರ್ನಾಟಕದ ಪ್ರಪ್ರಥಮ ತಾಂತ್ರಿಕ ಶಿಕ್ಷಣ ಸಂಸ್ಥೆ ಎನ್ನುವ ಹೆಗ್ಗಳಿಕೆ ಈ ವಿದ್ಯಾ ಸಂಸ್ಥೆಗೆ ಸಿಕ್ಕಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.

ಕಾಲೇಜಿನಲ್ಲಿ ಸಿವಿಲ್‌ ಎಂಜಿನಿಯರಿಂಗ್‌, ಕಂಪ್ಯೂಟರ್‌ ಸೈನ್ಸ್‌ ಎಂಜಿನಿಯರಿಂಗ್‌, ಎಲೆಕ್ಟ್ರಾನಿಕ್ಸ್‌ ಆ್ಯಂಡ್‌ ಕಮ್ಯುನಿಕೇಶನ್‌ ಎಂಜಿನಿಯರಿಂಗ್‌, ಮೆಕ್ಯಾನಿಕಲ್‌ ಎಂಜಿನಿಯರಿಂಗ್‌, ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಹಾಗೂ ಮೆಶಿನ್‌ ಲರ್ನಿಂಗ್‌, ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಹಾಗೂ ಡೇಟಾ ಸೈನ್ಸ್‌ ಕೋರ್ಸ್‌ಗಳ ಜತೆಗೆ 2023-24 ಶೈಕ್ಷಣಿಕ ವರ್ಷದಿಂದ ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಪದವಿ(ಎಂಬಿಎ) ಪ್ರಾರಂಭಿಸಿದ್ದು, ಉತ್ತಮ ಉದ್ಯೋಗಾವಕಾಶಗಳನ್ನು ತಂದುಕೊಡುವ ಈ ಕೋರ್ಸ್‌ಗಳು ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯವನ್ನು ಸುಭದ್ರಗೊಳಿಸಲು ಸಹಕಾರಿಯಾಗಲಿದೆ.

ಕೋರ್ಸ್‌ಗಳ ವಿವರ
ಎಂಬಿಎ ಕಾರ್ಯಕ್ರಮವು ಬೆಳಗಾವಿ ವಿಶ್ವವಿದ್ಯಾನಿಲಯದ ಅನುಮೋದನೆ ಮತ್ತು ಅಖೀಲ ಭಾರತೀಯ ತಾಂತ್ರಿಕ ಶಿಕ್ಷಣ ಮಂಡಳಿಯಿಂದ ಅನುಮೋದನೆ ಪಡೆದಿದ್ದು ಮಾರ್ಕೆಟಿಂಗ್‌ ಹಾಗೂ ಫೈನಾನ್ಸ್‌ ವಿಶೇಷತೆಯೊಂದಿಗೆ ಪ್ರಾರಂಭವಾಗುವ 2 ವರ್ಷದ ಪದವಿಯಾಗಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾನಿಯದಿಂದ 3 ವರ್ಷದ ಪದವಿ ಪೂರ್ಣಗೊಳಿಸಿ ಶೇಕಡಾ 50% ಅಂಕಗಳೊಂದಿಗೆ ಹಾಗೂ KMAT/PGCET/CAT ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಅಭ್ಯರ್ಥಿಗಳು ಪ್ರವೇಶ ಪಡೆಯಬಹುದು.

ಬಿಎಸ್ಸಿ ನರ್ಸಿಂಗ್‌ 4 ವರ್ಷದ ಕೋರ್ಸ್‌ ಆಗಿದ್ದು (3 ವರ್ಷ ಮತ್ತು 1 ವರ್ಷ ಇಂಟರ್ನ್ಶಿಪ್‌) ಅಭ್ಯರ್ಥಿಗಳು ಸಂಪೂರ್ಣವಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಪ್ರವೇಶ ಪಡೆಯಬಹುದು. ಅಲೈಡ್‌ ಹೆಲ್ತ್‌ ಸೈನ್ಸ್‌ 4 ವರ್ಷದ ಕೋರ್ಸ್‌ ಆಗಿದ್ದು (3 ವರ್ಷ ಮತ್ತು 1 ವರ್ಷ ಇಂಟರ್ನ್ಶಿಪ್‌) ಅಭ್ಯರ್ಥಿಗಳು ವಿಶ್ವವಿದ್ಯಾನಿಲಯದ ಮಾನದಂಡದ ಪ್ರಕಾರ ದ್ವಿತೀಯ ಪಿಯುಸಿಯಲ್ಲಿ ಭೌತಶಾಸ್ತ್ರ, ರಸಾಯನ ಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಲ್ಲಿ ಕನಿಷ್ಠ 50% ಅಂಕವನ್ನು ಪಡೆದಿರಬೇಕು. ಸಾಮಾನ್ಯ ಪ್ರವೇಶ ಪರೀಕ್ಷೆಯ ಅವಶ್ಯಕತೆ ಇರುವುದಿಲ್ಲ.

ಈ ಎಲ್ಲಾ ಕೋರ್ಸ್‌ಗಳು ಬಂಟಕಲ್‌ ಕ್ಯಾಂಪಸ್‌ನಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ ಕಾರ್ಯಾರಂಭ ಮಾಡಲಿದ್ದು, ಶ್ರೀ ಸೋದೆ ವಾದಿರಾಜ ಮಠದ ಶ್ರೀಪಾದರ ಕನಸಾದ ಮಧ್ವ ವಿಶ್ವವಿದ್ಯಾನಿಲಯದ ಕನಸಿಗೆ ಮತ್ತೂಂದು ಮೆಟ್ಟಿಲಾಗಿದೆ.

ಉಡುಪಿ ಸುತ್ತಮುತ್ತಲಿನ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅತೀ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದೊಂದಿಗೆ ಪ್ರಾರಂಭಗೊಳ್ಳಲಿರುವ ಈ ವೈದ್ಯಕೀಯ ಕೋರ್ಸ್‌ಗಳು ಆರೋಗ್ಯ ಕ್ಷೇತ್ರದಲ್ಲಿ ಸಮಾಜಸೇವೆ ಮಾಡಲಿಚ್ಚಿಸುವವರಿಗೆ ಉತ್ತಮ ಅಡಿಪಾಯ ಒದಗಿಸುವುದು.

ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯ ಹರೀಶ್‌ ಬೆಳ್ಮಣ್‌, ನರ್ಸಿಂಗ್‌ ಕಾಲೇಜಿನ ನಿಯೋಜಿತ ಪ್ರಾಂಶುಪಾಲೆ ಡಾ|ಫ್ಲೆೇವಿಯಾ ಕ್ಯಾಸ್ತಲಿನೊ ಮತ್ತು ಅಲೈಡ್‌ ಹೆಲ್ತ್‌ ಸೈನ್ಸ್‌ ಕಾಲೇಜಿನ ನಿಯೋಜಿತ ಪ್ರಾಂಶುಪಾಲ ಡಾ|ನವೀನ್‌ ಬಲ್ಲಾಳ್‌, ಆಡಳಿತಾಧಿಕಾರಿ ವಿದ್ಯಾಭಟ್‌ ಪತ್ರಿಕಾಗೋಷ್ಠಿಯಲ್ಲಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ| ತಿರುಮಲೇಶ್ವರ ಭಟ್‌ಸ್ವಾಗತಿಸಿ,ವಂದಿಸಿದರು.

ಟಾಪ್ ನ್ಯೂಸ್

Heavy rain in Amboli; Five feet water rise in Hidkal reservoir in one day

Belagavi: ಅಂಬೋಲಿ ಭಾಗದಲ್ಲಿ ಭಾರಿ ಮಳೆ; ಹಿಡಕಲ್ ಜಲಾಶಯದಲ್ಲಿ ಒಂದೇ ದಿನ ಐದಡಿ ನೀರು ಏರಿಕೆ

9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ

9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ

UK: Keir Starmer- ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ; ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

UK: Keir Starmer- ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ; ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

5-mng

Mangaluru: ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಮಾಡುವ ದಿನ ಕಾರ್ಯಕ್ರಮ

Transfer of 23 IAS officers including five District Collectors

IAS transfer; ಐವರು ಜಿಲ್ಲಾಧಿಕಾರಿಗಳು ಸೇರಿ 23 ಐಎಎಸ್ ಅಧಿಕಾರಿಗಳ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

Udupi ಪ್ರೇಯಸಿ ಜತೆ ಜಗಳ: ರಸ್ತೆಯಲ್ಲೇ ಬಸ್‌ ನಿಲ್ಲಿಸಿ ಹೋದ ಚಾಲಕ!

ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Heavy Rain ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Manipal ಷೇರು ಹೂಡಿಕೆ ಹೆಸರಲ್ಲಿ ವಂಚನೆ: ದೂರು ದಾಖಲು

Udupi ರೆಡ್‌ಕ್ರಾಸ್‌ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ

Udupi ರೆಡ್‌ಕ್ರಾಸ್‌ ಸಂಸ್ಥೆಗೆ ಲಕ್ಷಾಂತರ ರೂ. ವಂಚನೆ ಆರೋಪ

1-asdsdas

Yakshagana; ಖ್ಯಾತ ಪ್ರಸಾಧನ ಕಲಾವಿದ ಬಾಲಕೃಷ್ಣ ನಾಯಕ್‌ ವಿಧಿವಶ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Heavy rain in Amboli; Five feet water rise in Hidkal reservoir in one day

Belagavi: ಅಂಬೋಲಿ ಭಾಗದಲ್ಲಿ ಭಾರಿ ಮಳೆ; ಹಿಡಕಲ್ ಜಲಾಶಯದಲ್ಲಿ ಒಂದೇ ದಿನ ಐದಡಿ ನೀರು ಏರಿಕೆ

9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ

9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ

belagBelagavi; ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ

Belagavi; ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ

UK: Keir Starmer- ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ; ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

UK: Keir Starmer- ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ; ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.