ದೇಶವಿರೋಧಿ ದುಷ್ಟ ಶಕ್ತಿಗಳು ಬಿಲದಿಂದ ಹೊರಗೆ ಬರುತ್ತಿವೆ; ಡಾ. ಭರತ್ ಶೆಟ್ಟಿ
Team Udayavani, Jul 19, 2023, 5:44 PM IST
ಸುರತ್ಕಲ್ :ಕಾಂಗ್ರೆಸ್ ಪಕ್ಷ ಅಧಿಕಾರ ಬಂದ ಕೂಡಲೇ ಬಿಲದಲ್ಲಿ ಅಡಗಿ ಕುಳಿತಿದ್ದ ದುಷ್ಟ ಶಕ್ತಿಗಳು ಒಂದೊಂದಾಗಿ ಹೊರಗೆ ಬರುತ್ತಿವೆ . ಇದಕ್ಕೆ ಕಾಂಗ್ರೆಸ್ ಪಕ್ಷದ ಮೇಲೆ, ಹಾಗೂ ಅದರ ಆಡಳಿತದ ಮೇಲೆ ಯಾವುದೇ ಹೆದರಿಕೆ ಇಲ್ಲದಿರುವುದೇ ಕಾರಣ ಎಂದು ಡಾ. ಭರತ್ ಶೆಟ್ಟಿ ಹೇಳಿದ್ದಾರೆ.
ಬಿಜೆಪಿ ಅಧಿಕಾರದಲ್ಲಿದ್ದಾಗ ಉಗ್ರರ ಚಟುವಟಿಕೆಗಳನ್ನ ಸಂಪೂರ್ಣ ಮಟ್ಟ ಹಾಕಲಾಗಿತ್ತು.ಇದೀಗ ರಾಜಾರೋಷವಾಗಿ ಬಾಂಬುಗಳ ತಯಾರಿಕೆಗೆ ಬೇಕಾದ ವಸ್ತುಗಳನ್ನು ಖರೀದಿಸಲು ಬೆಂಗಳೂರಿನಲ್ಲಿ ಓಡಾಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಉಗ್ರ ವಿದ್ವಾಂಸಕ ಕೃತ್ಯ ನಡೆಸಲು ಮುಂದಾಗಿರುವುದು ಆತಂಕಕಾರಿ ಬೆಳವಣಿಗೆ. ಇವರ ಗುರಿ ಹಿಂದೂ ಸಮುದಾಯವೇ ಎಂಬುದರಲ್ಲಿ ಯಾವುದೇ ಸಂಶಯವಿಲ್ಲ.
ಕಾಂಗ್ರೆಸ್ ಸರ್ಕಾರವು ತಕ್ಷಣ ರಾಜ್ಯದ ಜನರ ಸುರಕ್ಷತೆಯ ಬಗ್ಗೆ ಮೊದಲ ಆದ್ಯತೆಯನ್ನು ನೀಡಬೇಕು. ಸಿಂಧನೂರು ಬಂಗಾಳಿ ಕ್ಯಾಂಪ್ ಗೆ ನುಗ್ಗಿ ದಾಂಧಲೆಗೈದವರ ವಿರುದ್ದ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಓಟ್ ಬ್ಯಾಂಕ್ ಸಮುದಾಯಕ್ಕೆ ನೋವಾಗುತ್ತದೆ ಎಂದು ಮೀನಾ ಮೇಷ ಎಣಿಸದೆ ಇಂತಹ ಉಗ್ರ ಕೃತ್ಯಗಳನ್ನು ಬೇರು ಸಹಿತ ಕಿತ್ತು ಹಾಕಲು ಯಾವುದೇ ತಪಾಸಣೆ,ವಿಚಾರಣೆಗಾಗಿ ಪೊಲೀಸ್ ಇಲಾಖೆ ಸೂಕ್ತ ಕ್ರಮವನ್ನು ಕೈಗೊಳ್ಳಲು ಮುಕ್ತ ಅವಕಾಶ ನೀಡಬೇಕು ಎಂದು ಡಾ.ಭರತ್ ಶೆಟ್ಟಿ ವೈ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.