![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 19, 2023, 8:48 PM IST
ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಗಳಲ್ಲಿ ಒಂದಾದ ಮನೆ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂ. ನೀಡುವ ‘ಗೃಹಲಕ್ಷ್ಮೀ ಯೋಜನೆ’ ನೋಂದಣಿ ಪ್ರಕ್ರಿಯೆಗೆ ಬುಧವಾರ ಚಾಲನೆ ನೀಡಲಾಯಿತು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ನೋಂದಣಿ ಪ್ರಕ್ರಿಯೆ ಚಾಲನೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಹಿರಿಯ ಸಚಿವರು ಶಾಸಕರು, ಕಾಂಗ್ರೆಸ್ ನಾಯಕಿಯರು ಸೇರಿ ಹಲವರು ಉಪಸ್ಥಿತರಿದ್ದರು.
ಗೃಹಲಕ್ಷ್ಮೀ ಯೋಜನೆ ಸಂಬಂಧ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ವಿತರಿಸಿರುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಯಜಮಾನಿ ಅಥವಾ ಅವಳ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಅಥವಾ ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸುವವರು ಈ ಯೋಜನೆಗೆ ಅನರ್ಹರಾಗಿರುತ್ತಾರೆ ಎಂದು ಸರಕಾರ ಮಾರ್ಗಸೂಚಿ ಹೊರಡಿಸಿದೆ.
ಬೇಕಾದ ದಾಖಲೆಗಳು
ಪಡಿತರ ಚೀಟಿಯ ಸಂಖ್ಯೆ. ಯಜಮಾನಿ ಮತ್ತು ಯಜಮಾನಿ ಪತಿಯ ಆಧಾರ್ ಕಾರ್ಡ್ ಸಂಖ್ಯೆ. ಯಜಮಾನಿಯ ಆಧಾರ್‌ಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಯ ಪಾಸ್‌ಬುಕ್/ಫಲಾನುಭವಿಯು ಇಚ್ಛಿಸುವ ಪರ್ಯಾಯ ಬ್ಯಾಂಕ್ ಖಾತೆಯ ವಿವರ.
ನೋಂದಣಿ ವಿಧಾನ
ಫಲಾನುಭವಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅಥವಾ ಪ್ರಜಾ ಪ್ರತಿನಿಧಿ ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು. ಪ್ರತೀ ಫಲಾನುಭವಿಯ ನೋಂದಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902ಕ್ಕೆ ಕರೆ ಮಾಡಿ ಅಥವಾ 8147500500 ಸಂಖ್ಯೆಗೆ ಎಸ್‌ಎಂಎಸ್ ಮಾಡುವ ಮೂಲಕ ಮಾಹಿತಿ ಪಡೆಯಬಹುದಾಗಿದೆ. ಅನುಮೋದಿಸಲ್ಪಟ್ಟ ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ನೀಡಲಾಗುವುದು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
You seem to have an Ad Blocker on.
To continue reading, please turn it off or whitelist Udayavani.