ತೀಸ್ತಾ ಸೆಟಲ್ವಾಡ್ಗೆ ಜಾಮೀನು ನೀಡಿದ ಸುಪ್ರೀಂ
Team Udayavani, Jul 20, 2023, 7:43 AM IST
ನವದೆಹಲಿ: 2002ರ ಗೋಧ್ರೋತ್ತರ ಗಲಭೆಯಲ್ಲಿ ಅಮಾಯಕರನ್ನು ಸಿಲುಕಿಸಲು ಸುಳ್ಳು ಸಾಕ್ಷ್ಯಗಳನ್ನು ಸೃಷ್ಟಿಸಿರುವ ಆರೋಪ ಎದುರಿಸುತ್ತಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ಗೆ ಸುಪ್ರೀಂಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ತ್ರಿಸದಸ್ಯ ನ್ಯಾಯಪೀಠವು ನಿಯಮಿತ ಜಾಮೀನು ಕೋರಿ ತೀಸ್ತಾ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಗುಜರಾತ್ ಹೈಕೋರ್ಟ್ನ ಆದೇಶವನ್ನು ತಳ್ಳಿಹಾಕಿದೆ. ಅಲ್ಲದೇ, ಈಗಾಗಲೇ ಆಕೆ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆಯಾಗಿರುವ ಹಿನ್ನೆಲೆ ಕಸ್ಟಡಿ ವಿಚಾರಣೆ ಅಗತ್ಯವಿಲ್ಲ. ಆದರೆ, ಆರೋಪಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಯಾವುದೇ ಪ್ರಯತ್ನ ಮಾಡಬಾರದೆಂದು ಸೂಚನೆ ನೀಡಿ, ಜಾಮೀನು ನೀಡಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.