ಆಸ್ಪತ್ರೆಗೆ ದೌಡಾಯಿಸಿ ಯತ್ನಾಳ್ ಆರೋಗ್ಯ ವಿಚಾರಿಸಿದ ಸಿಎಂ, ಸ್ಪೀಕರ್, ಬಿಎಸ್ ವೈ
Team Udayavani, Jul 19, 2023, 10:02 PM IST
ಬೆಂಗಳೂರು: ಸದನದಲ್ಲಿ ಪ್ರತಿಭಟನೆ ನಡೆಸುವ ವೇಳೆ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿ.ಯಸ್.ಯಡಿಯೂರಪ್ಪ, ಸ್ಪೀಕರ್ ಯು.ಟಿ.ಖಾದರ್ ಅವರು ಭೇಟಿಯಾಗಿ ಅರೋಗ್ಯ ವಿಚಾರಿಸಿದರು.
ಯತ್ನಾಳ್ ಅವರು ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಹಲವು ಬಿಜೆಪಿ ಶಾಸಕರು ಸಹ ಆಗಮಿಸಿ ಆರೋಗ್ಯ ವಿಚಾರಿಸಿದ್ದಾರೆ.
ವಿಧಾನಸಭಾ ಕಲಾಪದ ವೇಳೆ ಅಶಿಸ್ತಿನ ವರ್ತನೆ ತೋರಿ, ಸದನಕ್ಕೆ ಅಗೌರವ ತೋರಿದ ಕಾರಣಕ್ಕೆ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಈ ವಿಧಾನಸಭಾ ಅಧಿವೇಶನ ಮುಗಿಯುವವರೆಗೆ ಸ್ಪೀಕರ್ ಯು.ಟಿ.ಖಾದರ್ ಅವರು ಅಮಾನತು ಮಾಡಿದ ಬೆನ್ನಲ್ಲೇ ವಿಧಾನಸೌಧದಲ್ಲಿ ಹೈಡ್ರಾಮಾ ನಡೆದಿತ್ತು. ಬಿಜೆಪಿ ಶಾಸಕರು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಯತ್ನಾಳ್ ಅವರು ಅಸ್ವಸ್ಥರಾಗಿ ಕುಸಿದು ಬಿದ್ದಿದ್ದು, ಅವರನ್ನು ತತ್ ಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಿಪಿ ಸಮಸ್ಯೆಯಿಂದ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.