IAS ಅಧಿಕಾರಿಗಳನ್ನು ಗಣ್ಯರನ್ನು ಸ್ವಾಗತಿಸಲು ನೇಮಿಸಿದರೆ ತಪ್ಪೇನು? : ಸಿಎಂ ಸಮರ್ಥನೆ

ಕುಮಾರಸ್ವಾಮಿ ಇಷ್ಟು ಬೇಗನೆ ಅದನ್ನು ಮರೆತರೇ?

Team Udayavani, Jul 19, 2023, 10:27 PM IST

siddanna

ಬೆಂಗಳೂರು: ಬಿಜೆಪಿ ಶಾಸಕರು ಐಎಎಸ್ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಬುಧವಾರ ಸದನದಲ್ಲಿ ಪ್ರತಿಭಟನೆ ನಡೆಸಿ ಕೋಲಾಹಲವೆಬ್ಬಿಸಿದ ಕುರಿತು ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಗಳ ಮೂಲಕ ತಿರುಗೇಟು ನೀಡಿದ್ದು, ಜೆಡಿಎಸ್ ಪಕ್ಷವನ್ನೂ ಕೂಡ ಕುಟುಕಿದ್ದಾರೆ.

ಪ್ರಜಾಪ್ರಭುತ್ವದ ಯಶಸ್ಸಿಗೆ ಪ್ರಬಲ ವಿರೋಧ ಪಕ್ಷದ ಪಾತ್ರ ಬಹುಮುಖ್ಯ. ವಿರೋಧ ಪಕ್ಷಗಳು ಸರ್ಕಾರದ ತಪ್ಪು ನಿರ್ಧಾರಗಳನ್ನು, ನೀತಿ ನಡವಳಿಕೆಯನ್ನು ಸಂವಿಧಾನಾತ್ಮಕವಾಗಿ ಖಂಡಿಸಲು, ವಿರೋಧಿಸಲು, ಪ್ರತಿಭಟಿಸಲು ಅವಕಾಶವಿದೆ. ಸದನದಲ್ಲಿ ಕೆಲವು ನಿಯಮಾವಳಿಗಳಿವೆ, ವಿಧಾನ ಸಭಾಧ್ಯಕ್ಷರ ಸ್ಥಾನವು ತನ್ನದೇ ಆದ ಘನತೆ ಗೌರವವನ್ನು ಹೊಂದಿದೆ.ವಿರೋಧ ಪಕ್ಷದವರು ಗೌರವಾನ್ವಿತ ಸಭಾಧ್ಯಕ್ಷರ ಮುಖಕ್ಕೆ ಪತ್ರಿಕೆಗಳನ್ನು ಹರಿದು ಎಸೆಯುವುದು ಅಸಭ್ಯ ಅಷ್ಟೇ ಅಲ್ಲ ಸಂಸದೀಯ ವ್ಯವಸ್ಥೆಗೆ ತೋರುವ ಅಗೌರವವಾಗುತ್ತದೆ ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.

ಬಿಜೆಪಿಯವರು ಕ್ಷುಲ್ಲಕ ಕಾರಣಕ್ಕೆ ಇಂದು ಸದನದ ಬಾವಿಗಿಳಿದು ಪ್ರತಿಭಟನೆ ಮಾಡಿದ್ದಾರೆ, ಆದರೆ ಅವರ ಜೊತೆ ಜೆಡಿಎಸ್ ನವರು ಸೇರಿ ಪ್ರತಿಭಟಿಸಿರುವುದು ವಿಪರ್ಯಾಸ. 21-05-2018 ರಲ್ಲಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ತಮ್ಮ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ದೇಶದ ವಿವಿಧ ರಾಜ್ಯಗಳಿಂದ ಆಗಮಿಸಿದ್ದ ವಿರೋಧ ಪಕ್ಷಗಳ ನಾಯಕರನ್ನು ಸ್ವಾಗತಿಸಲು ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿದ್ದರು. ಇಷ್ಟು ಬೇಗನೆ ಅವರು ಇದನ್ನು ಮರೆತರೇ? ಎಂದು ಹಳೆಯ ಉದಾಹರಣೆ ನೀಡಿದ್ದಾರೆ.

”ಕುಮಾರಸ್ವಾಮಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬಂದಿದ್ದ ಜಾತ್ಯಾತೀತ ಜನತಾದಳದ ಜನರಲ್ ಸೆಕ್ರೆಟರಿ ಡ್ಯಾನಿಷ್ ಅಲಿ ಅವರ ಸತ್ಕಾರಕ್ಕಾಗಿ ವೈ.ಎಸ್ ಪಾಟೀಲ್ ಎಂಬ ಐಎಸ್ ಅಧಿಕಾರಿಯನ್ನು ನೇಮಕ ಮಾಡಿರಲಿಲ್ಲವೇ? ಡ್ಯಾನಿಷ್ ಅಲಿ ಅವರು ಸಂಸದರಾ? ಶಾಸಕರಾ? ಹೋಗಲಿ ಗ್ರಾಮ ಪಂಚಾಯತಿ ಸದಸ್ಯರಾದ್ರೂ ಆಗಿದ್ರಾ? ಹೀಗೆ ಗಣ್ಯರ ಸ್ವಾಗತಕ್ಕೆ ಐಎಎಸ್ ಅಧಿಕಾರಿಗಳನ್ನು ನೇಮಿಸುವುದು ಹಿಂದಿನಿಂದ ನಡೆದುಕೊಂಡು ಬಂದ ಪದ್ಧತಿ. ಇದೇನು ಹೊಸದಾಗಿ ಮಾಡಿರುವುದಲ್ಲ” ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

ಅನೇಕ ಜನ ಹಾಲಿ ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು, ರಾಜ್ಯಸಭಾ, ಲೋಕಸಭಾ ಸದಸ್ಯರು, ರಾಷ್ಟ್ರೀಯ ಪಕ್ಷಗಳ ಅಧ್ಯಕ್ಷರುಗಳು ಇಂತಹ ಗಣ್ಯರನ್ನು ಸ್ವಾಗತಿಸಲು ಐಎಎಸ್ ಅಧಿಕಾರಿಗಳನ್ನು ನೇಮಿಸಿದರೆ ತಪ್ಪೇನು? ಒಂದು ಸರ್ಕಾರವಾಗಿ ರಾಜ್ಯಕ್ಕೆ ಆಗಮಿಸಿದ ಅತಿಥಿಗಳನ್ನು ಸತ್ಕರಿಸುವ ಕೆಲಸ ಮಾಡಿದ್ದೇವೆ, ಇದನ್ನು ವಿರೋಧಿಸಿ ವಿಧಾನಸಭೆಯ ಉಪಸಭಾಧ್ಯಕ್ಷರ ಮೇಲೆ ಬಿಜೆಪಿಯವರು ಮುಗಿಬಿದ್ದು, ಪತ್ರಿಕೆಗಳನ್ನು ಹರಿದು ಅವರ ಮುಖದ ಮೇಲೆ ಎಸೆದು ಅನಾಗರಿಕರಂತೆ ನಡೆದುಕೊಂಡಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಕಳೆದ ನಲವತ್ತು ವರ್ಷದಿಂದ ನಾನು ವಿಧಾನಸಭೆಯಲ್ಲಿದ್ದೇನಿ, ಎರಡು ಬಾರಿ ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಿದ್ದೇನೆ. ನಾವು ಈ ಹಿಂದೆ ಸರ್ಕಾರದ ವಿರುದ್ಧ ಸದನದ ಬಾವಿಗಿಳಿದು ಪ್ರತಿಭಟಿಸಿದ್ದೇವೆ, ಧರಣಿ ಮಾಡಿದ್ದೇವೆ ಆದರೆ ಎಂದೂ ಸಭಾಧ್ಯಕ್ಷರ ಸ್ಥಾನದ ಘನತೆಗೆ ಧಕ್ಕೆಯಾಗುವಂತೆ ವರ್ತಿಸಿಲ್ಲ.ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಜನರ ಸಮಸ್ಯೆಗಳನ್ನು ಚರ್ಚಿಸಿ ಪರಿಹಾರ ಹುಡುಕುವ ಮನಸ್ಸು ಬಿಜೆಪಿಯವರಿಗೆ ಇಲ್ಲ. ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ಐದು ಗ್ಯಾರೆಂಟಿಗಳನ್ನು ಜಾರಿ ಮಾಡಿರುವುದರಿಂದ ವಿಪಕ್ಷಗಳು ಹತಾಶೆಗೊಂಡಿವೆ. ಬಿಜೆಟ್ ಕುರಿತು ಮಾತನಾಡಲು ಅದರಲ್ಲಿ ದೋಷಗಳು ಇಲ್ಲ. ಬಿಜೆಪಿಯವರು ಎಂದಿಗೂ ಕೊಟ್ಟ ಮಾತಿನಂತೆ ನಡೆದುಕೊಂಡವರಲ್ಲ, ನಾವು ಬಸವಾದಿ ಶರಣರ ಮಾತುಗಳಲ್ಲಿ ನಂಬಿಕೆಯಿಟ್ಟು ನುಡಿದಂತೆ ನಡೆಯುವವರು” ಎಂದು ಆಕ್ರೋಶ ಹೊರ ಹಾಕಿದ್ದಾರೆ.

ನಮ್ಮ ಸರ್ಕಾರದ ಯೋಜನೆಗಳಿಂದ ರಾಜ್ಯದ ಜನ ಸಂತೃಪ್ತರಾಗಿದ್ದಾರೆ. ಉಚಿತ ಬಸ್ ಪ್ರಯಾಣದ ಫಲಾನುಭವಿ ಹೆಣ್ಣುಮಕ್ಕಳು ಧರ್ಮಸ್ಥಳಕ್ಕೆ ಹೋದಾಗ ನನ್ನ ಹೆಸರಿನಲ್ಲಿ ಪೂಜೆ ಮಾಡಿಸಿದ್ದಾರಂತೆ, ಈ ಮಾತನ್ನು ಸ್ವತಃ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ|ವೀರೇಂದ್ರ ಹೆಗ್ಗಡೆಯವರು ಪತ್ರ ಬರೆದು ಶ್ಲಾಘಿಸಿದ್ದಾರೆ. ನಮ್ಮ ಸರ್ಕಾರದ ಯಶಸ್ಸನ್ನು ಬಿಜೆಪಿಯವರಿಂದ ಸಹಿಸಲು ಆಗುತ್ತಿಲ್ಲ, ಹಾಗಾಗಿ ಕ್ಷುಲ್ಲಕ ವಿಚಾರಕ್ಕೆ ಗದ್ದಲ ಎಬ್ಬಿಸುತ್ತಿದ್ದಾರೆ ಎಂದು ಉದಾಹರಣೆಗಳನ್ನು ನೀಡಿ ಕ್ರಮ ಸಮರ್ಥಿಸಿಕೊಂಡಿದ್ದಾರೆ.

ಬಿಜೆಪಿಯವರು ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಾಣ ಮಾಡುತ್ತೇವೆ ಎಂದು ಆಗಾಗ್ಗೆ ಹೇಳುತ್ತಾರೆ. ನಮಗೆ ಅವರಂತೆ ಬಿಜೆಪಿ ಮುಕ್ತ ರಾಜ್ಯ ನಿರ್ಮಿಸುವ ಬಯಕೆ ಇಲ್ಲ. ಬಿಜೆಪಿ ರಾಜ್ಯದಲ್ಲಿ ಇರಲಿ, ಆದರೆ ಅದು ಸದಾಕಾಲ ವಿರೋಧ ಪಕ್ಷದ ಸ್ಥಾನದಲ್ಲೇ ಇರಬೇಕು.ಬಿಜೆಪಿಯವರ ಇಂದಿನ ನಡವಳಿಕೆ ಅತ್ಯಂತ ಖಂಡನೀಯ. ಪ್ರಜಾಪ್ರಭುತ್ವ, ಸಂವಿಧಾನ, ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆಯಿರುವ ಯಾರೊಬ್ಬರೂ ಹೀಗೆ ನಡೆದುಕೊಳ್ಳಲು ಸಾಧ್ಯವಿಲ್ಲ.ನಾಡಿನ ಸರ್ವಜನರ ಕಲ್ಯಾಣ ಕಾರ್ಯಕ್ರಮಗಳು ಜಾರಿಯಾಗಿ, ಶೋಷಿತರು ಖುಷಿಯಿಂದ ಇರುವುದನ್ನು ಬಿಜೆಪಿಯವರಿಂದ ಸಹಿಸಿಕೊಳ್ಳಲು ಆಗುತ್ತಿಲ್ಲ. ಕೇಶವ ಕೃಪಾದಲ್ಲಿ ಕುಳಿತವರು ನೋಡಲಿ ಎಂದು ಸದನದಲ್ಲಿ ನಾಟಕವಾಡುತ್ತಿದ್ದಾರೆ. ಸರ್ಕಾರ ರಚನೆಯಾಗಿ ಇಷ್ಟು ದಿನವಾದರೂ ಬಿಜೆಪಿಯವರಿಗೆ ಪ್ರತಿಪಕ್ಷದ ನಾಯಕನನ್ನು ಆರಿಸಲು ಸಾಧ್ಯವಾಗಿಲ್ಲ. ವಿಪಕ್ಷ ನಾಯಕನಿಲ್ಲದೆ ರಾಜ್ಯಪಾಲರ ಭಾಷಣ, ಬಜೆಟ್ ಭಾಷಣ ನಡೆದಿರುವುದು ಇತಿಹಾಸದಲ್ಲಿಯೇ ಇದು ಮೊದಲು ಎಂದು ಚಾಟಿ ಬೀಸಿದ್ದಾರೆ.

ಬಿಜೆಪಿಯವರು ಇಂತಹ ಎಷ್ಟೇ ಕೀಳು ರಾಜಕೀಯ ಮಾಡಿದರು ಕೂಡ ನಾವು ನಮ್ಮ ಜನಪರವಾದ ನಿಲುವು ಮತ್ತು ಕಾಳಜಿಯಿಂದ ಕಿಂಚಿತ್ತೂ ವಿಚಲಿತರಾಗಲ್ಲ. ಅವರ ಆಟಾಟೋಪ, ಗೂಂಡಾಗಿರಿಗೆ ಹೆದರದೆ ನಾವು ನಂಬಿರುವ ತತ್ವ, ಸಿದ್ಧಾಂತದಡಿ ಕೆಲಸ ಮಾಡುತ್ತೇವೆ. ಇಂದು ಬಿಜೆಪಿ ಶಾಸಕರು ಸಭಾಧ್ಯಕ್ಷರ ಸ್ಥಾನಕ್ಕೆ ಅಗೌರವ ತೋರಿರುವ ಘಟನೆಯನ್ನು ಖಂಡಿಸುತ್ತೇನೆ.ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ವಿರೋಧ ಪಕ್ಷಗಳು ಜವಾಬ್ದಾರಿಯಿಂದ ಕೆಲಸ ಮಾಡುತ್ತವೆ ಎಂದು ಭಾವಿಸಿದ್ದೇನೆ ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

Famous Moo deng predicted Victory for Trump

US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್‌

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kanaka-Award

Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

HDk05

Police FIR: ಎಫ್ಐಆರ್‌ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ

Yathnal-eshwarappa

Waqf: ಕಾಂಗ್ರೆಸ್‌ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್‌ ಆಸ್ತಿ ಕಬಳಿಕೆ: ಯತ್ನಾಳ್‌

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Famous Moo deng predicted Victory for Trump

US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್‌

Kanaka-Award

Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.