Maharastra ರಾಯಗಡದಲ್ಲಿ ಭೂಕುಸಿತ, 4ಮಂದಿ ಮೃತ್ಯು, 21ಮಂದಿ ರಕ್ಷಣೆ, ರಕ್ಷಣಾ ಕಾರ್ಯ ಚುರುಕು
Team Udayavani, Jul 20, 2023, 8:52 AM IST
ಮಹಾರಾಷ್ಟ್ರ: ಕಳೆದ ಕೆಲ ದಿನಗಳಿಂದ ಸುರಿಯುತ್ತಿದ್ದ ಭಾರಿ ಮಳೆಗೆ ಮಹಾರಾಷ್ಟ್ರದ ರಾಯಗಢದಲ್ಲಿ ಬುಧವಾರ ತಡರಾತ್ರಿ ಸಂಭವಿಸಿದ ಭೂಕುಸಿತದಲ್ಲಿ ನಾಲ್ಕು ಮಂದಿ ಮೃತಪಟ್ಟಿದ್ದಾರೆ. 21 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಇನ್ನೂ ಹಲವರು ಮಣ್ಣಿನಡಿ ಸಿಲುಕಿರುವ ವರದಿಯಾಗಿದೆ.
ಘಟನಾ ಸ್ಥಳಕ್ಕೆ ರಕ್ಷಣಾ ತಂಡ ಧಾವಿಸಿದ್ದು ಮಣ್ಣಿನಡಿ ಸಿಲುಕಿದ ನಾಲ್ವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನೂ ಹಲವರು ಸಿಲುಕಿರುವವರ ರಕ್ಷಣೆ ಕಾರ್ಯ ನಡೆಯುತ್ತಿದೆ.
ಭೂಕುಸಿತದಿಂದ 30ಕ್ಕೂ ಹೆಚ್ಚು ಕುಟುಂಬಗಳು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬುಡಕಟ್ಟು ಜನಾಂಗದ ಹಲವಾರು ಮನೆಗಳು ಇರುವ ಖಲಾಪುರ ಬಳಿ ಈ ಘಟನೆ ನಡೆದಿದ್ದು. ಇಲ್ಲಿಯವರೆಗೆ 25 ಜನರನ್ನು ಸ್ಥಳಾಂತರಿಸಲಾಗಿದ್ದು, ಅದರಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಉಳಿದ 21 ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಭೂಕುಸಿತದಿಂದಾಗಿ ಗುಡ್ಡದಿಂದ ಅಪಾರ ಪ್ರಮಾಣದ ಮಣ್ಣು ಮತ್ತು ಕಲ್ಲುಗಳು ಬಿದ್ದಿದ್ದು, ಸುಮಾರು 30 ಮನೆಗಳು ಹೂತು ಹೋಗಿವೆ.
ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಭೇಟಿ
ಮುಖ್ಯಮಂತ್ರಿ ಏಕನಾಥ್ ಶಿಂಧೆ ಕೂಡ ಇಂ೦ದು (ಗುರುವಾರ) ಬೆಳಗ್ಗೆ ಭೂಕುಸಿತದ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ರಕ್ಷಣಾ ಕಾರ್ಯಗಳನ್ನು ಚುರುಕುಗೊಳಿಸುವುದು ಮತ್ತು ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವುದು ಹೇಗೆ ಎಂಬುದರ ಕುರಿತು ಚರ್ಚಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ.
ಘಟನಾ ಸ್ಥಳದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಎರಡು ತಂಡಗಳು ಸ್ಥಳಕ್ಕೆ ಧಾವಿಸಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ. ಇದಲ್ಲದೆ ಮುಂಬೈನಿಂದ ಇನ್ನೂ ಎರಡು ತಂಡಗಳು ಕಾರ್ಯಾಚರಣೆಗೆ ಸೇರಿಕೊಂಡಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ: Tragic: ಕಾರಿನ ಅಪಘಾತವನ್ನು ನೋಡಲು ಹೋದವರ ಮೇಲೆ ಹರಿದ ಮತ್ತೊಂದು ಕಾರು; 9 ಮಂದಿ ದುರ್ಮರಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.