ಸುಗ್ರೀವಾಜ್ಞೆ ಅರ್ಜಿ ಸಾಂವಿಧಾನಿಕ ಪೀಠಕ್ಕೆ
ಕೇಂದ್ರ ವರ್ಸಸ್ ದೆಹಲಿ ಪ್ರಕರಣದಲ್ಲಿ ಸರ್ವೋಚ್ಚ ಪೀಠದ ಆದೇಶ
Team Udayavani, Jul 21, 2023, 6:15 AM IST
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಆಡಳಿತಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆ ಯನ್ನು ಪ್ರಶ್ನಿಸಿ ದೆಹಲಿ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯವು ಗುರುವಾರ ಸಾಂವಿ ಧಾನಿಕ ಪೀಠಕ್ಕೆ ಉಲ್ಲೇಖೀಸಿದೆ.
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನ ಮತ್ತು ದೆಹಲಿ ಸರ್ಕಾರದ ಪರವಾಗಿ ಹಿರಿಯ ವಕೀಲರಾದ ಹರೀಶ್ ಸಾಳ್ವೆ ಹಾಗೂ ಅಭಿಷೇಕ್ ಮನು ಸಿಂಘ್ವಿ ಅವರು ಅರ್ಜಿಯನ್ನು ಸಲ್ಲಿಸಿದ್ದರು. ಸರ್ವೋಚ್ಚ ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿ ಪಿ.ಎಸ್.ನರಸಿಂಹ ಮತ್ತು ನ್ಯಾ.ಮನೋಜ್ ಮಿಶ್ರಾ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠವು ಈ ಸಲ್ಲಿಕೆಗಳನ್ನು ಆಲಿಸಿದೆ. ಕೇಂದ್ರ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಕೂಡ ಹಾಜರಾಗಿ ವಾದ ಮಂಡಿಸಿದ್ದಾರೆ.
ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ ಸಿಜೆಐ ನೇತೃತ್ವದ ನ್ಯಾಯಪೀಠವು ಪ್ರಕರಣದ ಮುಂದಿನ ವಿಚಾರಣೆಯನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸುತ್ತಿರು ವುದಾಗಿ ಆದೇಶ ಹೊರಡಿಸಿದೆ. ಕೇಂದ್ರಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯು ದೆಹಲಿ ಆಡಳಿತ ಸೇವೆಯ ಮೇಲೆ ಕೇಂದ್ರಕ್ಕೆ ನಿಯಂತ್ರಣ ಸಾಧಿಸಲು ಅವಕಾಶ ನೀಡಿದ್ದು, ಇದನ್ನು ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಆಕ್ಷೇಪಿಸಿದೆ. ಅಧಿಕಾರಶಾಹಿ ನೀತಿ ಎಂದು ಬಣ್ಣಿಸಿದೆ.
ವ್ಯವಸ್ಥೆಯ ಬಗ್ಗೆ ಯಾರಿಗೂ ಕಾಳಜಿ ಇಲ್ಲ!
ಇದೇ ವೇಳೆ ದೆಹಲಿ ವಿದ್ಯುತ್ ನಿಯಂತ್ರಣ ಆಯೋಗ (ಡಿಇಆರ್‌ಸಿ)ದ ಅಧ್ಯಕ್ಷರ ನೇಮಕ ವಿಚಾರದಲ್ಲೂ ಕೇಂದ್ರ ಹಾಗೂ ದೆಹಲಿಯ ಆಡಳಿತಾರೂಢ ಆಪ್ ಸರ್ಕಾರದ ಜಿದ್ದಾಜಿದ್ದಿ ಬಗ್ಗೆ ಸುಪ್ರೀಂಕೋರ್ಟ್ ಆತಂಕ ವ್ಯಕ್ತಪಡಿಸಿದೆ. ಯಾರಲ್ಲೂ ಸಂಸ್ಥೆಯ ಬಗ್ಗೆ, ವ್ಯವಸ್ಥೆ ಬಗ್ಗೆ ಕಾಳಜಿ ಇಲ್ಲ. ಬದಲಾಗಿ ಕಾದಾಟಕ್ಕೆ ಮುಂದಾಗಿದ್ದಾರೆಂದು ಹೇಳಿದೆ. ಡಿಇಆರ್‌ಸಿ ಅಧ್ಯಕ್ಷರಾಗಿ ನಿವೃತ್ತ ನ್ಯಾಯಮೂರ್ತಿ ಸಂಗೀತ್ ಲೋಧಾ ಅವರನ್ನು ಸಿಎಂ ಕೇಜ್ರಿವಾಲ್ ಶಿಫಾರಸು ಮಾಡಿದ್ದರು. ಆದರೆ, ಕೇಂದ್ರ ಸರ್ಕಾರವು ಅಲಹಬಾದ್ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳನ್ನು ಡಿಇಆರ್‌ಸಿ ಅಧ್ಯಕ್ಷ ಸ್ಥಾನಕ್ಕೆ ನೇಮಿಸಿದ್ದು, ಇದನ್ನೂ ಪ್ರಶ್ನಿಸಿ ಆಪ್ ಸರ್ಕಾರ ಸುಪ್ರೀಂ ಮೆಟ್ಟಿಲೇರಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.