ಸರಕು ಸಾಗಣೆ ತೆರಿಗೆ ದ್ವಿಗುಣ?
Team Udayavani, Jul 21, 2023, 7:11 AM IST
ಬೆಂಗಳೂರು: ಮೋಟಾರು ವಾಹನಗಳ ತೆರಿಗೆ ಹೆಚ್ಚಿಸಲು ಮುಂದಾಗಿರುವ ರಾಜ್ಯ ಸರಕಾರವು ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧಾರ (ತಿದ್ದುಪಡಿ) ಮಸೂದೆ-2023ನ್ನು ವಿಧಾನಸಭೆಯಲ್ಲಿ ಗುರುವಾರ ಮಂಡಿಸಿದೆ.
ಪ್ರಸಕ್ತ ಸಾಲಿನಲ್ಲಿ ಆಯ್ದ ವಾಹನ ವರ್ಗಗಳಿಗೆ ವಿಧಿಸುವ ತೆರಿಗೆ ಪರಿಷ್ಕರಣೆ ಮೂಲಕ 11,500 ಕೋಟಿ ರೂ. ರಾಜಸ್ವ ಸಂಗ್ರಹಣೆ ಗುರಿಯನ್ನು ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಸ್ತಾವಿಸಿದ್ದರು.
ಇದಕ್ಕೆ ಪೂರಕವಾಗಿ ಗುರುವಾರ ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಮಂಡಿಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, 1,500 ಕೆ.ಜಿ. -12 ಸಾವಿರ ಕೆ.ಜಿ. ತೂಕವಿರುವ ಸರಕು ವಾಹನಗಳ ಪೂರ್ಣಾವಧಿ ತೆರಿಗೆ ಯನ್ನು ಬಹುತೇಕ ದ್ವಿಗುಣಗೊಳಿಸಲು ಪ್ರಸ್ತಾವಿಸಿದ್ದಾರೆ. ರಾಜ್ಯದ ಹೊರಗೆ ನೋಂದಣಿಯಾಗಿ ಪರವಾನಿಗೆ ಪಡೆಯದ 15 ಲಕ್ಷ ರೂ.ಗಿಂತ ಅಧಿಕ ಮೌಲ್ಯದ ಮೋಟಾರು ಕ್ಯಾಬ್ಗಳ ಮೇಲಿನ ಪೂರ್ಣಾವಧಿ ತೆರಿಗೆಯನ್ನು 10 ಲಕ್ಷ ರೂ. ಮಿಕ್ಕಿದ ವಾಹನಗಳಿಂದಲೇ ಹೆಚ್ಚಿಸಲು ಪ್ರಸ್ತಾವಿಸಲಾಗಿದೆ. ಈ ತೆರಿಗೆಗಳು ಹೊಸ ನೋಂದಣಿಯ ಸಮಯದಲ್ಲೂ ಅನ್ವಯಿಸಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.