Guarantee Scheme ಜಾರಿಗೆ ಎಸ್ ಸಿ, ಎಸ್ ಟಿ ಹಣ ದುರ್ಬಳಕೆ, ದಲಿತರಿಗೆ ಅನ್ಯಾಯ: ಬೊಮ್ಮಾಯಿ
Team Udayavani, Jul 21, 2023, 3:56 PM IST
ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳ ಜಾರಿಗೆ ಹಣಕಾಸು ಹೊಂದಿಸಲು ಎಸ್ಸಿ ಎಸ್ಟಿ ಸಮುದಾಯದ ಕಲ್ಯಾಣಕ್ಕೆ ಮೀಸಲಿಟ್ಟ ಎಸ್ಸಿಪಿ, ಟಿಎಸ್ಪಿ ಅನುದಾನವನ್ನು ದುರ್ಬಳಕೆ ಮಾಡಿ, ಎಸ್ಸಿ ಎಸ್ಟಿ ಸಮುದಾಯಕ್ಕೆ ದ್ರೋಹ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಬಿಜಿಪಿ ಸದಸ್ಯರನ್ನು ವಿಧಾನಸಭೆ ಕಲಾಪದಿಂದ ಹೊರಹಾಕಿರುವುದನ್ನು ಖಂಡಿಸಿ ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಬಳಿ ಪಕ್ಷದ ವತಿಯಿಂದ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಸರ್ಕಾರ ಬಂದ ಮೇಲೆ ಕರ್ನಾಟಕದ ಜನರ ಬದುಕು ದುಸ್ತರವಾಗಿದೆ. ರೈತರು ಎರಡು ಬಾರಿ ಬಿತ್ತನೆ ಮಾಡಿದರು ಬೆಳೆ ಬರದೇ ರೈತರು ಸಂಕಷ್ಟಕ್ಕೆ ಸಿಕಿದ್ದಾರೆ. ಸರ್ಕಾರ ಅವರ ರಕ್ಷಣೆಗೆ ಬಂದಿಲ್ಲ. 2013 ರಿಂದ 18ರ ವರೆಗೆ ಅತಿ ಹೆಚ್ಚು ರೈತರು ಸುಮಾರು 4000ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡ ದಾಖಲೆ ಇದೆ ಎಂದು ಹೇಳಿದರು.
ನಾವು ನಮ್ಮ ಬಜೆಟ್ ನಲ್ಲಿ ಡಿಗ್ರಿವರೆಗೆ ಉಚಿತ ವಿದ್ಯಾಭ್ಯಾಸ ನಿಡುವುದಾಗಿ ಹೇಳಿದ್ದೇವು. ಶಾಲಾ ಮಕ್ಕಳಿಗೆ ಪ್ರತ್ಯೇಕ ಬಸ್ ವ್ಯವಸ್ಥೆ ಮಾಡುವುದಾಗಿ ಹೇಳಿದ್ದೆವು ಇವರು ಅದನ್ನು ಕೈ ಬಿಟ್ಟಿದ್ದಾರೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿಗೆ ಕೊಲೆ ಸುಲಿಗೆ ಹೆಚ್ಚಾಗಿದೆ. ಪೊಲೀಸ್ ಠಾಣೆಯಲ್ಲಿ ಮಾಮೂಲು ಕೇಳುವ ಕೆಲಸ ಶುರುವಾಗಿದೆ. ವಿದ್ಯಾರ್ಥಿಗಳು, ರೈತರು, ಸರ್ಕಾರಿ ನೌಕರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದುಡಿಯುವ ಸಾಮಾನ್ಯ ಜನರ ಬದುಕು ಅಸ್ಥಿರಗೊಳಿಸಿದ್ದಾರೆ. ಇವರು ಮಂಡಿಸಿರುವುದು ಜನ ವಿರೋಧಿ ಬಜೆಟ್ ಇವರು ಗ್ಯಾರೆಂಟಿ ಗಳಿಗೆ ಹಣ ಹೊಂದಿಸಲು ಪರದಾಡುತ್ತಿದ್ದಾರೆ. ಇವರ ಅವಧಿಯಲ್ಲಿ ಅತಿ ಹೆಚ್ಚು ಸಾಲ ಮಾಡಿದ್ದಾರೆ. ನಿಜಲಿಂಗಪ್ಪ ರಿಂದ ಹಿಡಿದು ಜಗದೀಶದ ಶೆಟ್ಟವರೆಗೆ ಒಂದು ಲಕ್ಷ ಕೋಟಿ ಸಾಲವಾಗಿತ್ತು. ಸಿದ್ದರಾಮಯ್ಯ ಅವರ ಅವಧಿಯಲ್ಲಿ ಒಂದು ಲಕ್ಷ ಮೂವತ್ತು ಸಾವಿರ ಕೋಟಿ ಸಾಲ ಮಾಡಿದ್ದಾರೆ. ದಲಿತರ ಕಲ್ಯಾಣಕ್ಕಾಗಿ ಮೀಸಲಿಟ್ಟ ಎಸ್ಸಿಪಿ, ಟಿಎಸ್ ಪಿ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಗೃಹ ಲಕ್ಷ್ಮೀ ಯೋಜನೆಗೆ 6 ಸಾವಿರ ಕೋಟಿ ರೂ. ಎಸ್ ಸಿಪಿ ಟಿಎಸ್ಪಿ ಹಣ ಬಳಕೆ ಮಾಡಿಕೊಂಡಿದ್ದಾರೆ. ಗ್ಯಾರೆಂಟಿ ಗಳಿಗೆ 13000 ಕೋಟಿ ರೂ. ವರ್ಗಾವಣೆ ಮಾಡಿದ್ದಾರೆ. ಕಾಂಗ್ರೆಸ್ ನಲ್ಲಿರುವ ದಲಿತ ಶಾಸಕರು ಹಾಗೂ ಸಚಿವರು ಏನು ಮಾಡುತ್ತಿಧ್ದಿರಿ. ಅದನ್ನು ಕೇಳಲು ದೈರ್ಯ ಇಲ್ಲವೆ ನರ ಇಲ್ಲವೇ ಎಂದು ಪ್ರಶ್ನಿಸಿದರು.
ಅಂಬೇಡ್ಕರ್ ಅವರ ಹೆಸರಿನಲ್ಲಿ ನಾವು 100 ಹಾಸ್ಟೇಲ್ ನಿರ್ಮಾಣ ಮಾಡಲು ಘೋಷಣೆ ಮಾಡಿದ್ದೆವು, ಹಿಂದುಳಿದ ವರ್ಗದ ಹಾಸ್ಟೆಲ್ ನಿರ್ಮಾಣ ಮಾಡಲು ಘೋಷಣೆ ಮಾಡಿದ್ದೆವು. ಅವುಗಳನ್ನು ನಿಮ್ಮ ಬಜೆಟ್ ನಲ್ಲಿ ಘೋಷಣೆ ಮಾಡಲಿಲ್ಲ. ನೀವು ದಲಿತರ ವಿರೋಧಿಗಳು ಎಂದು ಆರೋಪಿಸಿದರು.
ಭ್ರಷ್ಟಾಚಾರದಲ್ಲಿ ನಂಬರ್ ಒನ್: ಭ್ರಷ್ಟಾಚಾರದಲ್ಲಿ ಸಿದ್ದರಾಮಯ್ಯ ಸರ್ಕಾರ ನಂಬರ್ ಒನ್ ಅಂತ ವರದಿ ಬಂದಿದೆ. ಗುಮಾಸ್ತನಿಂದ ಹಿಡಿದು ಸೆಕ್ರೆಟರಿವರೆಗೂ ವರ್ಗಾಚಣೆಗೆ ರೇಟ್ ಫಿಕ್ಸ್ ಮಾಡಿದ್ದೀರಿ. ಮಾಲಿನ್ಯ ನಿಯಂತ್ರಣ ಮಂಡಳಿಗೆ ಐಎಫ್ ಎಸ್ ಅಧಿಕಾರಿ ನೇಮಕ ಮಾಡಬೇಕು. ಅದರ ಬದಲು ಸಂಬಂಧಿಕ ಅಂತ ಗುತ್ತಿಗೆ ನೌಕರರನ್ನು ಸೆಕ್ರೆಟರಿಯಾಗಿ ನೇಮಕ ಮಾಡಿದ್ದಾರೆ.
ಗ್ಯಾರೆಂಟಿ ಗಳಲ್ಲಿ ಜನರಿಗೆ ಮೋಸ ಮಾಡಿದ್ದೀರಿ, ಕರೆಂಟ್ ದರ ಹೆಚ್ಚಳ ಮಾಡಿದ್ದೀರಿ, ಗೃಹಲಕ್ಷ್ಮೀಗೆ ಇನ್ನೂ ಯಜಮಾನಿಯನ್ನು ಹುಡುಕಾಟ ನಡೆಸಿದ್ದಾರೆ. ಯುವ ನಿಧಿ ಅಯೋಮಯವಾಗಿದೆ. ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:ಜೆಡಿಎಸ್ ನಲ್ಲಿ ನಡವಳಿಕೆ, ತೀರ್ಮಾನ ಸರಿಯಿಲ್ಲವೆಂದು ಹೊರಗೆ ಬಂದಿದ್ದೇನೆ: ಚೆಲುವರಾಯಸ್ವಾಮಿ
ನಾವು ಕೊವಿಡ್ ಸಂದರ್ಭದಲ್ಲಿ ನಾವು ಉತ್ತಮ ಆರ್ಥಿಕ ನಿರ್ವಹಣೆ ಮಾಡಿದ್ದಕ್ಕೆ ನೀವು ಇಷ್ಟು ಗಾತ್ರದ ಬಜೆಟ್ ಮಂಡಿಸಲು ಸಾಧ್ಯವಾಗಿದೆ. ನಮ್ಮ ಅವಧಿಯಲ್ಲಿ ಜಿಎಸ್ ಟಿ, ಮೊಟರ್ ವೆಹಿಕಲ್ ತೆರಿಗೆ ಎಲ್ಲವೂ ಹೆಚ್ಚು ಸಂಗ್ರಹವಾಗಿದೆ. ಕೋವಿಡ್ ಸಂದರ್ಭದಲ್ಲಿ ನರೇಂದ್ದ ಮೋದಿಯವರು ರಾಜ್ಯಕ್ಕೆ ಅತಿ ಹೆಚ್ಚು ಹಣ ನೀಡಿದ್ದಾರೆ. ಕೇಂದ್ರ ಸರ್ಕಾರ ಕಳೆದ ವರ್ಷ 3500 ಕೋಟಿ ವಿಶೇಷ ಅನುದಾನ ನೀಡಿದ್ದಾರೆ. ಯುಪಿಎ ಅವಧಿಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇತ್ತು. ಅವರು ಸೋನಿಯಾ ಗಾಂಧಿ ಮುಂದೆ ಹೊಗಿ ನಿಲ್ಲಲು ಆಗುತ್ತಿರಲಿಲ್ಲ. ಕೇಂದ್ರ ನೀಡಿದ ಹಣದ ಬಗ್ಗೆ ಸಿದ್ದರಾಮಯ್ಯ ಬಜೆಟ್ ನಲ್ಲಿ ಪ್ರಸ್ತಾಪ ಮಾಡದೆ ಮರೆಮಾಚಿದ್ದಾರೆ ಎಂದು ಆರೋಪಿಸಿದರು.
ಐಎಎಸ್ ಅಧಿಕಾರಿಗಳ ಸೇವಾ ನಿಯಮದ ಬಗ್ಗೆ ಈಗಾಗಲೇ ನಿವೃತ್ತ ಐಎಎಸ್ ಅಧಿಕಾರಿ ಮದನಗೋಪಾಲ ವಿವರವಾಗಿ ಪತ್ರದ ಮೂಲಕ ಹೇಳಿದ್ದಾರೆ. ಸ್ಪೀಕರ್ ಅತ್ಯಂತ ಸಣ್ಣ ವಯಸ್ಸಿನಲ್ಲಿ ಸ್ಪೀಕರ್ ಆಗಿದ್ದೀರಿ. ನೀವು ಕಾಂಗ್ರೆಸ್ ಭೋಜನ ಕೂಟಕ್ಕೆ ತೆರಳಿ ಅವರ ಬಾಗಿಲು ಕಾದಿರಿ, ಇದರಿಂದ ನಿಮಗಷ್ಟೇ ಅಲ್ಲ, ಇಡೀ ರಾಜ್ಯಕ್ಕೆ ಅವಮಾನವಾಗಿದೆ. ನಾವು ಸದನದಲ್ಲಿ ಪ್ರತಿಭಟನೆ ಮಾಡಿದರೆ ಕರೆದು ಚಹಾ ಕೊಡಬೇಕಿತ್ತಾ ಅಂತ ಕೇಳಿದ್ದೀರಿ, ನಾವು ನಿಮ್ಮ ಚಹಾ ಕುಡಿಯುಲು ಸದನಕ್ಕೆ ಬಂದಿಲ್ಲ. ನಾವು ಜನರ ಪರವಾಗಿ ಚರ್ಚೆ ಮಾಡಲು ಬರುತ್ತೇವೆ. ನಾವೇ ನಿಮಗೆ ಪ್ರತಿ ದಿನ ಟೀ ಕುಡಿಸುತ್ತೇವೆ ಎಂದು ವಾಗ್ದಾಳಿ ನಡೆಸಿದರು.
ಅಧಿಕಾರಕ್ಕೆ ಬಂದು ಎರಡೇ ತಿಂಗಳಲ್ಲಿ ಸಿದ್ದರಾಮಯ್ಯ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ. ಐದು ಜನ ಟೆರೆರಿಸ್ಟ್ ಗಳು ಸಿಕ್ಕಿದ್ದಾರೆ. ಅವರನ್ನು ಟೆರೆರಿಸ್ಟ್ ಎನ್ನಲು ಆಗುವುದಿಲ್ಲ ಎಂದು ಗೃಹ ಸಚಿವರು ಹೇಳಿದ್ದಾರೆ. ಸಾಮಾನ್ಯ ಅಪರಾಧ ಮಾಡುವವರು ಹ್ಯಾಂಡ್ ಗ್ರ್ಯಾನೈಡ್ ಇಟ್ಟುಕೊಳ್ಳುತ್ತಾರಾ ? ಇದೆಲ್ಲದಕ್ಕೂ ರಾಜ್ಯದ ಜನತೆ ಲೋಕಸಭಾ ಚುನಾವಣೆಯಲ್ಲಿ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.