![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jul 21, 2023, 5:01 PM IST
ವಿಟ್ಲ : ಮದುವೆಯಾಗುತ್ತೇನೆಂದು ನಂಬಿಸಿ, ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಅಬ್ದುಲ್ ಸಮೀರ್ ಮೇಲೆ ಪೋಕ್ಸೋ ಮತ್ತು ಅತ್ಯಾಚಾರ ಪ್ರಕರಣ ದಾಖಲಾಗಿದೆ.
ಅಪ್ರಾಪ್ತ ಬಾಲಕಿಗೆ ಆರೋಪಿ ಅಬ್ದುಲ್ ಸಮೀರ್ ಮೊಬೈಲ್ ಕೊಟ್ಟು, ನಿರಂತರ ಮಾತನಾಡಿಕೊಂಡು ಪ್ರೀತಿಸುವ ನಾಟಕವಾಡಿದ್ದಲ್ಲದೆ, ಮದುವೆಯಾಗುತ್ತೇನೆಂದು ನಂಬಿಸಿದ್ದ.
ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದಲ್ಲಿ ನಿರ್ಮಾಣ ಹಂತದ ಮನೆಯೊಂದರ ಬಳಿ 2019ನೇ ಸಾಲಿನ ನವಂಬರ್ ತಿಂಗಳಿನಿಂದ ಡಿಸೆಂಬರ್ ತಿಂಗಳ ಕೊನೆಯ ವಾರದ ತನಕ ಆತ ನಿರಂತರ ಅತ್ಯಾಚಾರವೆಸಗಿದ್ದಾನೆ. ಆಕೆಗೆ ಮೋಸ ಮಾಡಿದ್ದಲ್ಲದೆ, ವಿದೇಶಕ್ಕೆ ಪರಾರಿಯಾಗಿದ್ದಾನೆ.
You seem to have an Ad Blocker on.
To continue reading, please turn it off or whitelist Udayavani.