ಧರ್ಮಸ್ಥಳದ ವಿರುದ್ಧ ಅವಹೇಳನಕಾರಿ ವರದಿಗೆ ತಡೆ
Team Udayavani, Jul 22, 2023, 7:30 AM IST
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳದ ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಕುಟುಂಬಸ್ಥರ ವಿರುದ್ಧ ಮಾಡುತ್ತಿರುವ ಆರೋಪಗಳ ಕುರಿತು ನ್ಯಾಯಾಲಯವು ನಿರ್ಬಂಧಕಾಜ್ಞೆ ಆದೇಶ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿ ಡಾ| ಹೆಗ್ಗಡೆ ಹಾಗೂ ಅವರ ಕುಟುಂಬಸ್ಥರ ವಿರುದ್ಧ ಮಹೇಶ್ ಶೆಟ್ಟಿ ತಿಮರೋಡಿ, ಜಗದೀಶ್, ಪ್ರಭಾ ಬೆಳಹೊಂಗಳ, ಸೋಮನಾಥ್ ನಾಯಕ್, ಬಿ.ಎಂ. ಭಟ್, ವಿಠಲ್ ಗೌಡ ಮತ್ತುಇತರರು ಇಲ್ಲಸಲ್ಲದ ಆರೋಪ ಮಾಡಿ ತೇಜೋವಧೆ ಮಾಡುತ್ತಿದ್ದ ವಿಚಾರಕ್ಕೆ ಸಂಬಂಧಪಟ್ಟಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯವರು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು.
ನ್ಯಾಯಾಲಯವು ಧರ್ಮಸ್ಥಳದ ದೇವಸ್ಥಾನ ಮತ್ತು ಧರ್ಮಾಧಿಕಾರಿ ಡಾ| ಹೆಗ್ಗಡೆಯವರು ನಡೆಸುತ್ತಿರುವಂತಹ ಸಂಸ್ಥೆಗಳು ಹಾಗೂ ಅವರ ಕುಟುಂಬಸ್ಥರ ವಿರುದ್ಧ ಈ 6 ಜನ ವ್ಯಕ್ತಿಗಳು ಮಾಧ್ಯಮ, ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಮಾತನಾಡದಂತೆ ನಿರ್ಬಂಧಕಾಜ್ಞೆ ನೀಡಿರುತ್ತದೆ.
ಮಾತ್ರವಲ್ಲದೇ ಈಗಾಗಲೇ ಪ್ರಸಾರವಾಗಿರುವ ಅಥವಾ ಹಂಚಿಕೊಂಡಿರುವ ಅವಹೇಳನಕಾರಿ ವಿಚಾರಗಳನ್ನು ಅಳಿಸಿ ಹಾಕುವಂತೆ ಆದೇಶ ಮಾಡಲಾಗಿರುತ್ತದೆ. ವಾದಿಗಳ ಪರವಾಗಿ ನ್ಯಾಯವಾದಿಗಳಾದ ಪುತ್ತೂರು ಮೂಲದ ರಾಜಶೇಖರ ಹಿಲ್ಯಾರು ಮತ್ತು ಮಂಗಳೂರಿನ ಮಯೂರ ಕೀರ್ತಿ ವಾದಿಸಿದ್ದರು ಎಂದು ಎಸ್‌ಕೆಡಿಆರ್‌ಡಿಪಿಯ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.